Breaking News

ರಾಜಕೀಯ

ವಿಶ್ವದೆಲ್ಲೆಡೆ ಯೋಗ ದಿನನೀರಲ್ಲಿ ಗಂಟೆಗಟ್ಟಲೆ ಪದ್ಮಾಸನ, ಶವಾಸನ ಮಾಡುವ ಜಲಯೋಗಿ

ಹಾವೇರಿ: ವಿಶ್ವದೆಲ್ಲೆಡೆ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಪಂಚಕ್ಕೆ ಯೋಗವನ್ನು ಪರಿಚಯಿಸಿದ್ದು ಭಾರತ. ಆರಂಭದಲ್ಲಿನ ಯೋಗ ಇಂದು ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಅಂತಹವುಗಳಲ್ಲಿ ಒಂದು ಜಲಯೋಗ. ಈ ಜಲಯೋಗವನ್ನು ಕರಗತ ಮಾಡಿಕೊಂಡಿರುವ ಹಾವೇರಿಯ ಹಾನಗಲ್‌ನ ರಾಜು ಪೇಟಕರ್​ ಹಲವು ಆಸನಗಳನ್ನು ನೀರಲ್ಲಿ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ನೀರಲ್ಲಿ ಗಂಟೆಗಟ್ಟಲೆ ನಿಲ್ಲುವ ರಾಜು ಅವರು ನೀರಲ್ಲೇ ಪದ್ಮಾಸನ, ಶವಾಸನ ಮಾಡುತ್ತಾರೆ. ಆರಂಭದಲ್ಲಿ ನೆಲದ ಮೇಲೆ ಯೋಗಾಸನ ಮಾಡುತ್ತಿದ್ದ ಪೇಟಕರ್ ತಮ್ಮ ಪ್ರಯೋಗವನ್ನು ನೀರಿನಲ್ಲಿ ಮಾಡಲು …

Read More »

ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!

ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, ಎಲ್ ಆಂಡ್ ಟಿ ಕಂಪನಿಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೌದು, ಅಭಿವೃದ್ಧಿ ಕಾಮಗಾರಿಗಾಗಿ ಬೆಳಗಾವಿ ರಾಣಿ ಚೆನ್ನಮ್ಮ ನಗರದ ಫಸ್ಟ್ ಸ್ಟೇಜ್ ರಾಣಾ ಪ್ರತಾಪ್ ಕ್ರಾಸ್ ಬಳಿಯ ಪ್ರಮುಖ ರಸ್ತೆಯನ್ನು ಅಗೆದು ಸುಮಾರು ಒಂದೂವರೆ ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆಗಾಲದಲ್ಲಿ ಮಣ್ಣಿನ ರಾಶಿ ನೀರಿನಲ್ಲಿ ನೆನೆದು ರಸ್ತೆಯೆಲ್ಲ ಕೆಸರುಮಯವಾಗಿದ್ದು, ವಾಹನ ಸವಾರರು …

Read More »

ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿಯಿಂದ ಹಲವು ಯೋಜನೆ

ಮುಂಬರಲಿರುವ ಬಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಡೆದ ಸೌಹಾರ್ದಯುತ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ———— ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್‌ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್‌ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ …

Read More »

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ) : ನಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರ ಮಾಡಬೇಕು ಅಲ್ಲವೇ? ಯಾವಾಗ ಬದಲಾವಣೆ ಆಗುತ್ತದೆ, ಯಾವಾಗ ಮಾಡುತ್ತಾರೆ ಅನ್ನೋದು ಹೈಕಮಾಂಡ್​​ಗೆ ಬಿಟ್ಟಿರುವ ವಿಚಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನಂತೂ ಆಕಾಂಕ್ಷಿ ಇದ್ದೇನೆ. ಹೈಕಮಾಂಡ್ ಯಾವಾಗ ಮಾಡುತ್ತಾರೆ ಕಾದು ನೋಡಬೇಕು. ನಾನು ಯಾವುದೇ ಒತ್ತಡ ಹಾಕುವುದಿಲ್ಲ ಎಂದು ಪ್ರತಿಕ್ರಿಯಿಸಿದರು. ರಾಜೀವ್ …

Read More »

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ಬಿಜೆಪಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಲಾಯಿತು. ಬನಹಟ್ಟಿ ನಗರದಲ್ಲಿನ ಜಮಖಂಡಿ -ಮಿರಜ್ ರಸ್ತೆ ತಡೆದು ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ …

Read More »

ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

ಉಡುಪಿ; ತ್ರೈಮಾಸಿಕ ಕೆ.ಡಿ.ಪಿ ಸಭೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ …

Read More »

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್…

ಕಸದ ರಾಶಿಯಲ್ಲಿ ಮುಳುಗಿರುವ ಬೆಳಗಾವಿ ಅಜಮ್ ನಗರದ ಮೊದಲನೇ ಕ್ರಾಸ್… ಕಸ ವಿಲೇವಾರಿಯಾಗುತ್ತಿಲ್ಲ, ನಾಯಿಗಳ ಹಾವಳಿ, ಗಬ್ಬು ವಾಸನೆ… ಪಾಲಿಕೆ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿರುವ ನಿವಾಸಿಗಳು….. ಬೆಳಗಾವಿ ಅಜಂನಗರ ಕೆಎಲ್ಇ ಕಂಪೌಂಡ ಪಕ್ಕದಲ್ಲಿರುವ ಮೊದಲೇ ಕ್ರಾಸ್ ನಲ್ಲಿ ಬಿದ್ದಿರುವ ಕಸದ ರಾಶಿಯನ್ನು ನೋಡಿದರೆ ಅಕ್ಷರಶಹ ತ್ಯಾಜ್ಯ ವಿಲೇವಾರಿ ಘಟಕದಂತಾಗಿದ್ದು, ಪಾಲಿಕೆ ನಿರ್ಲಕ್ಷ್ಯಕ್ಕೆ ಇಲ್ಲಿಯ ನಿವಾಸಿಗಳು ಹಿಡಿ ಶಾಪ ಹಾಕುತ್ತಿದ್ದಾರೆ ಅಜಮ್ ನಗರ ಮಹಾನಗರ ಪಾಲಿಕೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. …

Read More »

ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

ಚಾಮರಾಜನಗರ : ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ದೇಶಿಪುರ ಕಾಲೋನಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ದೇಶಿಪುರ ಕಾಲೋನಿಯ ಪುಟ್ಟಮ್ಮ ಎಂಬಾಕೆ ಹುಲಿಗೆ ಬಲಿಯಾಗಿರುವ ದುರ್ದೈವಿ. ಇಂದು ಮಧ್ಯಾಹ್ನ ಕಾಲೋನಿ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಅವರ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದುಹಾಕಿದೆ. ಬಳಿಕ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಬಳಿಕ, ಗ್ರಾಮಸ್ಥರು ಹುಡುಕಾಡಿದ್ದರಿಂದಾಗಿ ಪುಟ್ಟಮ್ಮನ ಶವ ದೊರೆತಿದ್ದು, ಬಂಡೀಪುರ ಹುಲಿ ಸಂರಕ್ಷಿತ …

Read More »

ಮೃಗಾಲಯದ ಹೆಣ್ಣು ಹುಲಿ ದೇವಿ ಸಾವು

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಶ್ರೀ ಅಟಲ್​​​ ಬಿಹಾರಿ ವಾಜಪೇಯಿ ಜೂಲಾಜಿಕಲ್​​ ಪಾರ್ಕ್‌ನಲ್ಲಿ​ ‘ದೇವಿ’ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದೆ ಎಂದು ಉಪ ಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷದಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗೆ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ರಕ್ಷಣಾ ಕೇಂದ್ರದಲ್ಲಿ ಕಳೆದ ಎರಡು ವರ್ಷಗಳಿಂದ ವೈದ್ಯೋಪಚಾರ ನೀಡಿದ್ದು, ಆರೋಗ್ಯದಲ್ಲಿ ಸುಧಾರಣೆ …

Read More »

ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್

ಕಳ್ಳನನ್ನು ಬಂಧಿಸಿ 9 ಬೈಕುಗಳನ್ನು ವಶಪಡಿಸಿಕೊಂಡ ಎಪಿಎಂಸಿ ಪೊಲೀಸ್ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿ ಒಟ್ಟು 9 ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ಕ್ಯಾನ್ಸರ್ ಆಸ್ಪತ್ರೆ ಸೇರಿದಂತೆ ವಿವಿಧೆಡೆ ನಿಲ್ಲಿಸಿದ್ದ ಬೈಕ್’ಗಳನ್ನು ಕಳ್ಳತನ ಮಾಡುತ್ತಿದ್ದ ಗೋಕಾಕ್ ಮೂಲದ ಹಾಲಿ ಬೆಳಗಾವಿ ವೈಭವನಗರದ ನಿವಾಸಿ ಸಂತೋಷ ಅಂದಾನಿಯನ್ನು ಬಂಧಿಸುವಲ್ಲಿ ಬೆಳಗಾವಿ ಎಪಿಎಂಸಿ ಪೊಲೀಸರು …

Read More »