Breaking News

ರಾಜಕೀಯ

ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ

ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …

Read More »

ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ

ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …

Read More »

ವಿಜಯಪುರ ಜಿಲ್ಲಾಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು; ನಗರದ ಹಲವೆಡೆ ಸೀಲ್​​ಡೌನ್​

ವಿಜಯಪುರ(ಏ.12): ವಿಜಯಪುರದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ. ಕೊರೋನಾ ನಿಗ್ರಹಕ್ಕಾಗಿ ಹಲವಾರು ಮುಂಜಾಗ್ರತಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ವಿಜಯಪುರ ಜಿಲ್ಲಾಡಳಿತವು ತೆಗೆದುಕೊಂಡಿದೆ. ಈಗ ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿದೆ. ಹೌದು, ವಿಜಯಪುರ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡಿಸಿದೆ. ಹೀಗಾಗಿ ಜಿಲ್ಲಾಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ. ಈ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೋಗಿಗಳಿದ್ದು, ಅವರನ್ನು ನಗರದ ಬೇರೆ …

Read More »

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್…

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. …

Read More »

ದಾವಣಗೆರೆ:ಮನೆಯಿಂದ ಹೊರಗಡೆ ಬಂದವ್ರ ಮೇಲೆ ಡ್ರೋಣ್ ಕಣ್ಣು

ದಾವಣಗೆರೆ: ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಮಾಡಲಾಗಿದ್ದರೂ ಜನ ಹೊರ ಬರುತ್ತಿರುವುದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಹದ್ದಿನ ಕಣ್ಣಿಟ್ಟಿದೆ. ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಹಂತವಾಗಿ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾವನ್ನು ನಗರದಲ್ಲಿ ಹಾರಿಸಲಾಯಿತು. ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ …

Read More »

ನಾಳೆಯಿಂದ ಮನೆ-ಮನೆ ಕೊರೋನಾ ವೈರಸ್ ಸಮೀಕ್ಷೆ

ಬೆಂಗಳೂರು , ಏ 12 : ನಾಳೆಯಿಂದ ಪ್ರಾರಂಭವಾಗಿ ಏಪ್ರಿಲ್-30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ …

Read More »

ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್‍ಡೌನ್ ವಿಸ್ತರಿಸಿದ ರಾಜ್ಯವಾಗಿದೆ. ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್‍ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ. ರಾಜ್ಯದಲ್ಲಿ …

Read More »

ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ

ಬೆಳಗಾವಿ – ದೆಹಲಿ ಮರ್ಕಜ ಜಮಾತನಲ್ಲಿ ಭಾಗವಹಿಸಿ, ವೈದ್ಯಕೀಯ ತಪಾಸಣೆಗೂ ಹೋಗದೇ ನೈಜ್ಯತೆಯನ್ನು ಬಚ್ಚಿಟ್ಟ ಯುವಕ ಹಾಗೂ ಆತನಿಗೆ ಸಹಕರಿಸಿದ 6 ಜನರ ವಿರುದ್ಧ ಹಿರೇಬಾಗೆವಾಡಿ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ಮಾರ್ಚ್ -೨೦೨೦ ರಲ್ಲಿ ದೆಹಲಿಯ ನಿಜಾಮುದ್ದೀನ್ ಮರ್ಕಟ್ ಮಸೀದಿಯಲ್ಲಿ ಜರುಗಿದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಿರೇಬಾಗೇವಾಡಿ ಗ್ರಾಮದ ಯುವಕನೊಬ್ಬ ತಾನು ವೈದ್ಯಕೀಯ ತಪಾಸಣೆಗೂ ಒಳಗಾಗದೇ, ದೆಹಲಿಯ ಜಮಾತನಲ್ಲಿ ಭಾಗವಹಿಸಿದ ಸತ್ಯ ಸಂಗತಿಯನ್ನು ಟಾಸ್ಕ್ ಪೋರ್ಸನವರಗೂ ಬಚ್ಚಿಟ್ಟಿದ್ದ. ಇವನೊಂದಿಗೆ …

Read More »