ಬೆಂಗಳೂರು: ಒಂದು ಕಡೆ ಸೀಲ್‍ಡೌನ್ ಮಾದರಿ ನಿರ್ಬಂಧ ಹಾಕುತ್ತಿರುವ ಬೆಂಗಳೂರು ಪೊಲೀಸರು, ಅಡ್ಡಾದಿಡ್ಡಿ ಓಡಾಡುತ್ತಿರುವವರಿಗೆ ಮತ್ತಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರು ರಸ್ತೆಗಳನ್ನು ಸೀಲ್ ಮಾಡುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈಗಾಗಲೇ ನೀಡಿರುವ ತುರ್ತು ಕೋವಿಡ್-19 ಪಾಸ್‍ಗಳನ್ನು ಶನಿವಾರದಿಂದ ರದ್ದು ಮಾಡಲು ಬಯಸಿದ್ದಾರೆ. ಬೆಂಗ್ಳೂರು ಪೊಲೀಸರ ಪ್ಲಾನ್: ನಗರದಲ್ಲಿ 70,000 ತುರ್ತು ಕೋವಿಡ್-19 ಪಾಸ್, ಆನ್‍ಲೈನ್ 1.30 ಲಕ್ಷ ಪಾಸ್ ವಿತರಣೆ ಮಾಡಲಾಗಿದೆ. ಆದರೆ ದಿನಕ್ಕೆ …
Read More »ನಮ್ಮಲ್ಲಿ ಅಗತ್ಯಕ್ಕಿಂತಲೂ 2.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ
ನವದೆಹಲಿ: ನಮಗೆ 1 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳ ಅವಶ್ಯಕತೆಯಿದೆ. ಆದರೆ ನಮ್ಮಲ್ಲಿ ಈಗ 3.28 ಕೋಟಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿವೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರುವಾರ ನಾವು 16,002 ಕೊರೊನಾ ಪರೀಕ್ಷೆಗಳನ್ನು ನಡೆಸಿದ್ದೇವೆ. ಕೇವಲ ಶೇ.0.2 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿವೆ. ಸಂಗ್ರಹಿಸಿದ ಮಾದರಿಗಳ ಆಧಾರದ ಮೇಲೆ ಹೇಳುವುದಾದರೆ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ …
Read More »ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ: ಸಿದಗೌಡ ಮೋದಗಿ
ಬೆಳಗಾವಿ: ಅತ್ಯಂತ ಕಷ್ಟದ ಸಮಯದಲ್ಲೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಹಾಪ್‍ಕಾಮ್ಸಗಳು ರೈತರ ನೆರವಿಗೆ ಬರುತ್ತಿಲ್ಲ ಎಂದು ಭಾರತೀಯ ಕೃಷಿಕ ಸಮಾಜ (ಸಂ) ದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಕಳವಳ ವ್ಯಕ್ತ ಪಡಿಸಿದ್ದಾರೆ. ರೈತರ ತರಕಾರಿಗಳಿಗೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ಸಿಗುತ್ತಿರುವ ಬೆಲೆಗೂ, ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೆಲೆಗಳಲ್ಲಿ ಹಿಂದೆಂದಿಗಿಂತಲೂ ಇಂದು ಅಜಗಜಾಂತರ ವ್ಯತ್ಯಾಸ ಇದೆ. ಎಪಿಎಂಸಿ ಸಗಟು ಮಾರಾಟದಲ್ಲಿ ಪ್ರತಿ ಕಿಲೋ ಟೊಮೆಟೋಗೆ 2 ರೂ. ಸಿಗುತ್ತಿದ್ದರೆ, ಚಿಲ್ಲರೆ …
Read More »ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್
ಬೆಂಗಳೂರು: ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿ 129 ವರ್ಷವಾಗಿದೆ. ಜನ್ಮದಿನ ಆಚರಿಸಲು ಇಡೀ ದೇಶ ಬಹಳ ಉತ್ಸುಕವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯನ್ನು ನೀವುಗಳು ಇರುವ ಸ್ಥಳದಿಂದಲೇ ಅಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಪಿಠೀಕೆ ಓದುವ ಮೂಲಕ ನಮ್ಮ ಐಕ್ಯತೆ, ಸಮಗ್ರತೆ, ಬ್ರಾತೃತ್ವವನ್ನು ಎತ್ತಿ ಹಿಡಿದು ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎಂದು ರಾಜ್ಯ ಹಾಗೂ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ: ಬಿ.ಆರ್.ಸಂಗಪ್ಪಗೋಳ
ಚಿಕ್ಕೋಡಿ: ಬೆಳಗಾವಿ ಜಿಲ್ಲಾ ರಾಜಕಾರಣಿಗಳಿಗೆ ಸರ್ಕಾರ ಉರಳಿಸುವ ತಾಕತ್ತುಯಿದೆ. ಜಿಲ್ಲಾ ಉಸ್ತುವಾರಿ ಸ್ಥಾನ ಪಡೆಯುವ ಧಮ್ ಬೆಳಗಾವಿ ನಾಲ್ವರು ಸಚಿವರಿಗೆ ಇಲ್ಲವೆ ಎಂದು ಹಿರಿಯ ರಾಜಕಾರಣಿ ಮತ್ತು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆಗೆದುಕೊಳ್ಳಲು ಬೆಳಗಾವಿ ಜಿಲ್ಲೆಯ ರಾಜಕಾರಣಿಗಳಿಗೆ ಧಮ್ಮಯಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಅದಕ್ಕಾಗಿ ಹೊರ …
Read More »ಹಿರೇಬಾಗೇವಾಡಿ ಈರುಳ್ಳಿ ವ್ಯಾಪಾರಿ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ”.
ಹಿರೇಬಾಗೇವಾಡಿ ಈರುಳ್ಳಿ ವ್ಯಾಪಾರಿ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಪಾರಿಶ್ವಾಡ, ಹಿರೇಬಾಗೇವಾಡಿ, ಬಡಾಲ್ ಅಂಕಲಗಿ ಸಂತೆ ಸೇರಿದಂತೆ ವಿವಿಧೆಡೆ ವ್ಯಾಪಾರದಲ್ಲಿ ಭಾಗಿ ಈರುಳ್ಳಿ ವ್ಯಾಪಾರಿದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಬೆಳಗಾವಿ: ಈರುಳ್ಳಿ ವ್ಯಾಪಾರಿ ಸೇರಿದಂತೆ ಆತನ ಕುಟುಂಬದ ನಾಲ್ವರು ಸದಸ್ಯರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಆತನ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಇದೀಗ ಎದುರಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ ಹಾಗೂ ಜಿಲ್ಲೆಯಾದ್ಯಂತ …
Read More »ದೆಹಲಿಯಲ್ಲಿ ಕೊರೊನಾ ವಿರುದ್ಧ OPERATION SHIELD
ನವದೆಹಲಿ: ಕೊರೊನಾ ರುದ್ರ ಕುಣಿತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಬೆದರಿ ಹೋಗಿದೆ. ನಿಜಾಮುದ್ದಿನ್ ಮರ್ಕಜ್ ಪ್ರಕರಣ ಬಳಿಕ ನೋಡ ನೋಡುತ್ತಿದ್ದಂತೆ ಅಂಕಿ ಆಕಾಶಕ್ಕೆ ಏರುತ್ತಿದೆ. ಈ ಮಿಂಚಿನ ಓಟಕ್ಕೊಂದು ಬ್ರೇಕ್ ಹಾಕಲು ಮುಂದಾಗಿರುವ ಕೇಜ್ರಿವಾಲ್ ಸರ್ಕಾರ ಆಪರೇಷನ್ ಶೀಲ್ಡ್ ಔಟ್ ಆರಂಭಿಸಿದ್ದು, ಆರು ಸೂತ್ರಗಳನ್ನು ಜಾರಿ ತರಲು ಮುಂದಾಗಿದೆ. ಅಲ್ಲೊಂದು, ಇಲ್ಲೊಂದು ಪ್ರಕರಣ ಎಂದುಕೊಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಡಿತದಲ್ಲಿದ್ದ ಕೊರೊನಾ ಸೋಂಕು ನಿಜಾಮುದ್ದೀನ್ ಮರ್ಕಜ್ ಪ್ರಕರಣ ಬಳಿಕ ನೋಡ …
Read More »ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್ ಕೊಟ್ಟ B.S.Y
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ …
Read More »ಧಾರವಾಡದಲ್ಲಿ ಏ. 30ರವರೆಗೆ ಕಡಲೆ ಖರೀದಿಗೆ ನೋಂದಣಿ – ಮೇ 12ರವರೆಗೆ ಖರೀದಿ ಪ್ರಕ್ರಿಯೆ
ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ …
Read More »ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ
ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …
Read More »
Laxmi News 24×7