Breaking News

ರಾಜಕೀಯ

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ ಎಚ್ಚರಿಕೆ !!! ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನಲ್ಲಿ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರು ಪರಿತಪಿಸುವಂತಾಗಿದೆ. ಸಂಬಂಧಿಸಿದವರು ಕೂಡಲೇ ರಸ್ತೆ ದುರಸ್ಥಿ ಮಾಡದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಬೆಳಗಾವಿಯ ಬೆಳಗಾವಿಯ ಕಸಾಯಿ ಗಲ್ಲಿ ಫಿಶ್ ಮತ್ತು ಮಟನ್ ಮಾರ್ಕೇಟ್’ನ ರಸ್ತೆ ಅಧೋಗತಿಗೆ ಬಂದಿದೆ. ರಸ್ತೆಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ …

Read More »

ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ

ಬೆಂಗಳೂರು, (ಜೂನ್ 19): ಸರ್ಕಾರಿ ಯೋಜನೆಗಳ (Government scheme) ಗುತ್ತಿಗೆಯಲ್ಲಿ ಮೀಸಲಾತಿ (Reservation) ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ  ಅಲ್ಪಸಂಖ್ಯಾತರ ಮೀಸಲಾತಿ (minorities reservation) ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಇಂದು (ಜೂನ್ 19) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಮಾಡಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.ಅಲ್ಪಸಂಖ್ಯಾತ ಸಮುದಾಯಗಳಿಗೆ …

Read More »

ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬೆಂಗಳೂರು, ಜೂನ್​ 19: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ (DK Suresh) ಆಯ್ಕೆ ಆಗಿದ್ದಾರೆ. ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದ್ದು, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಬಳಿಕ ವಿಶಾಂತ್ರಿ ಪಡೆದಿದ್ದರು, ಇದೀಗ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬಮೂಲ್​ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ರೈತರು, …

Read More »

ತಗ್ಗುತ್ತಿದೆ ಪೆಟ್ರೋಲ್‌ ಕಾರುಗಳ ಬೇಡಿಕೆ: ಸಿಎನ್‌ಜಿಯಲ್ಲಿ ಬರುತ್ತಿದೆ 3 ಆಕರ್ಷಕ ಎಸ್​ಯುವಿಗಳು

ಬೆಂಗಳೂರು (ಜೂ. 19): ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ಆಟೋಮೊಬೈಲ್ ಉದ್ಯಮದಲ್ಲಿ ಸಿಎನ್‌ಜಿ ವಾಹನಗಳ ಬೇಡಿಕೆ ವೇಗವಾಗಿ ಹೆಚ್ಚಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮತ್ತು ಪರಿಸರದ ಬಗ್ಗೆ ಹೆಚ್ಚುತ್ತಿರುವ ಜಾಗೃತಿಯಿಂದಾಗಿ, ಜನರು ಸಿಎನ್‌ಜಿಯನ್ನು (CNG Car) ಒಂದು ಆಯ್ಕೆಯನ್ನಾಗಿ ಮಾಡಿಕೊಂಡಿದ್ದಾರೆ. ದೇಶದ ಬಹುತೇಕ ಎಲ್ಲಾ ಪ್ರಮುಖ ಕಾರು ತಯಾರಕರು ಈಗ ತಮ್ಮ ಅಸ್ತಿತ್ವದಲ್ಲಿರುವ ಮತ್ತು ಹೊಸ ಮಾದರಿಗಳಿಗೆ ಸಿಎನ್‌ಜಿ ರೂಪಾಂತರಗಳನ್ನು ಸೇರಿಸುವತ್ತ ಕೆಲಸ ಮಾಡಲು ಇದೇ ಕಾರಣ. 2025 ರ ಹಣಕಾಸು …

Read More »

ಬಾಡಿಗೆ ಕಟ್ಟಡದಲ್ಲೇ ಮಕ್ಕಳಿಗೆ ಆಟ ಪಾಠ: ಬಾಲವಾಡಿಗಳಿಗೆ ಬೇಕಾಗಿದೆ ಸರ್ಕಾರಿ ಕಟ್ಟಡ

ದಾವಣಗೆರೆ: ಜಿಲ್ಲೆಯಲ್ಲಿ ನೂರಾರು ಬಾಲವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ 403 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಇಲ್ಲದಂತೆ ಆಗಿದೆ. ಪುಟ್ಟ ಮಕ್ಕಳಿಗೆ ಆಟ, ಪಾಠ ಎಲ್ಲವೂ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದೆ. ಎರಡು ತಿಂಗಳಿಗೊಮ್ಮೆ ಬಾಡಿಗೆ ಹಣ ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರುತ್ತಿದೆ.‌ ಈ 403 ಬಾಲವಾಡಿಗಳು ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. 202 ಅಂಗನವಾಡಿ ಕೇಂದ್ರಗಳನ್ನು ಇತರ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಲಾಗಿದೆ. ಮಕ್ಕಳ …

Read More »

ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ

ಕುರಿ ಮೇಯಿಸಿದ್ದಕ್ಕೆ ದಂಡ ಹಾಕಿ ಅರಣ್ಯ ಇಲಾಖೆಯಿಂದ ಕಿರುಕುಳ ಕುರಿಗಳೊಂದಿಗೆ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆಗೆ ಯತ್ನಿಸಿದ ಕುರಿಗಾಹಿಗಳು… ಗುಡ್ಡದಲ್ಲಿ ಕುರಿ ಮೇಯಿಸಲು ಹೋದ ಕುರಿಗಾಹಿಗಳನ್ನು ಹೊಡೆದು ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆಯ ನೀತಿಯನ್ನು ಖಂಡಿಸಿ ಇಂದು ಕುರಿಗಾಹಿಗಳು ಕುರಿಗಳ ಸಮೇತ ಬೀಳಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಕುರಿಗಾಹಿಗಳಿಗೆ ಅರಣ್ಯ ಇಲಾಖೆಯಿಂದ ಕುರಿಗಾಹಿಗಳಿಗೆ ಕುರಿ ಮೇಯಿಸಲು ತೊಂದರೆ ನೀಡುತ್ತಿರುವ …

Read More »

ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್

ಹೆಣ್ಮಕ್ಕಳು ಎಲ್ಲ ಕ್ಷೇತ್ರದಲ್ಲಿಯೂ ಮೇಲುಗೈ ಸಾಧಿಸಲು ವರವಾಗಿ ಬಂದಿದ್ದು ಭಾರತೀಯ ಸಂವಿಧಾನ; ಎಲ್.ಎನ್.ಮುಕುಂದರಾಜ್ ಎಲ್ಲ ಕ್ಷೇತ್ರಗಳಲ್ಲಿಯೂ ಈಗ ಹೆಣ್ಣು ಮಕ್ಕಳು ಈಗ ಮೇಲುಗೈ ಸಾಧಿಸಿದ್ದಾರೆ. ಇದಕ್ಕಾಗಿ ನಮಗೆಲ್ಲ ವರವಾಗಿ ಬಂದಿದ್ದು ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅವರು ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಳಗಾವಿಯ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ …

Read More »

ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್

ಆರ್.ಎಲ್.ಎಸ್. ಕಾಲೇಜಿನಲ್ಲಿ ಜಿಮ್’ಖಾನಾ ಚಟುವಟಿಕೆಗಳ ಉದ್ಘಾಟನೆ ಪರಿಶ್ರಮವೇ ಗೆಲುವಿನ ಮೂಲಮಂತ್ರ; ಅಭಿನವ್ ಜೈನ್ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಗುರುವಾರದಂದು ಬೆಳಗಾವಿಯ ಬೆಳಗಾವಿಯ ಕೆ.ಎಲ್.ಇ ಆರ್.ಎಲ್.ಎಸ್ ಕಾಲೇಜಿನಲ್ಲಿ ಜಿಮ್’ಖಾನಾ ಮತ್ತು ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರೋ. ಡಾ. ಎಂ.ಎಂ. ಪುರಾಣಿಕ ಮತ್ತು ಅಭಿನವ್ ಜೈನ್ ಉಪಸ್ಥಿತರಿದ್ಧರು. ಲಿಂಗೌಡಾ ದೇಸಾಯಿ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ವೇಳೆ …

Read More »

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ  (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ …

Read More »

ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!

ಶಿವಮೊಗ್ಗ, ಜೂನ್​ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ …

Read More »