ಬೆಳಗಾವಿ – ಬೆಳಗಾವಿಯಲ್ಲಿ ಈವರೆಗೆ ಬಂದಿರುವ ವರದಿಯಲ್ಲಿ ಯಾವುದೇ ಪಾಸಿಟಿವ್ ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಇದೀಗ ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಮಧ್ಯಾಹ್ನ 12 ಗಂಟೆಯವರೆಗಿನ ಮಾಹಿತಿ ಪ್ರಕಾರ ಯಾವೊಂದೂ ಪಾಸಿಟಿವ್ ಬಂದಿಲ್ಲ ಎಂದಿದ್ದಾರೆ. ಆದರೆ ಬೆಂಗಳೂರಿನಲ್ಲಿ ರಾಜ್ಯ ಸರಕಾರಿ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಬೆಳಗಾವಿಯಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ ಎಂದು ತಿಳಿಸಿದೆ. ಧಾರವಾಡದಲ್ಲಿ ಹೇಳಿಕೆ ನೀಡಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರೂ …
Read More »ರವಿ.ಡಿ. ಚನ್ನಣ್ಣನವರ್ ಅವರು ನಿನ್ನೆ ರಾತ್ರಿ ಲಾರಿ ಚಾಲಕನ ಮಾರುವೇಷದಲ್ಲಿ
ಬೆಂಗಳೂರು: ಕರ್ನಾಟಕದ ದಕ್ಷ ಪೊಲೀಸ್ ಅಧಿಕಾರಿ ರವಿ.ಡಿ. ಚನ್ನಣ್ಣನವರ್ ಅವರು ನಿನ್ನೆ ರಾತ್ರಿ ಲಾರಿ ಚಾಲಕನ ಮಾರುವೇಷದಲ್ಲಿ ಹೋಗಿ ಲಂಚ ಪಡೆಯುತ್ತಿದ್ದ ಭ್ರಷ್ಟ ಆರ್ ಟಿಒ ಅಧಿಕಾರಿಗಳನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅತ್ತಿಬೆಲೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಹೋಮ್ ಗಾರ್ಡ್ ವಿವೇಕ್, ಆರ್‌ಟಿಒ ಬ್ರೇಕ್ ಇನ್ ಪೆಕ್ಟರ್ ಗಳಾದ ಕರಿಯಪ್ಪ ಮತ್ತು ಜಯಣ್ಣ ಅವರನ್ನು ಲಂಚ ಪಡೆದ ಆರೋಪದ ಮೇಲೆ …
Read More »ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖ: ಸಚಿವ ಶೆಟ್ಟರ್,
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್ ಬಂದಿದೆ. ಇನ್ನೊಂದು ಸಲದ ಪರೀಕ್ಷೆ ಮಾತ್ರವೇ ಬಾಕಿ ಉಳಿದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶೆಟ್ಟರ್, ಧಾರವಾಡದ ಕೊರೊನಾ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಮೂರನೇ ಹಂತದ ಪ್ರಯೋಗಾಲಯ ಪರೀಕ್ಷೆಯಲ್ಲಿ ಆ ವ್ಯಕ್ತಿಯ ಫಲಿತಾಂಶ ನೆಗಟಿವ್ ಬಂದಿದೆ. ಇನ್ನೊಂದು ಸಲ ಪ್ರಯೋಗಾಲಯದಲ್ಲಿ …
Read More »ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ
ಕೊರೋನಾ ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಜನಸಂದಣಿ ಕಡಿಮೆಗೊಳಿಸುವ ದೃಷ್ಟಿಯಿಂದ ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಹೋಲಸೇಲ್ ತರಕಾರಿ ಮಾರಾಟಕ್ಕೆ ಸ್ಥಳ ನಿಗದಿಪಡಿಸಲಾಗಿದ್ದು, ಸೋಮವಾರದಿಂದ ನಿಗದಿತ ನಾಲ್ಕು ಸ್ಥಳಗಳಲ್ಲಿ ಮಾತ್ರವೇ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ (ಏ.೩) ನಡೆದ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು. ಸೋಮವಾರದಿಂದ ನಗರದ ಹೊರವಲಯದ ಹಿಂಡಾಲ್ಕೋ ಮೈದಾನ, ಆರ್.ಟಿ.ಓ ಮೈದಾನ, ಪೊದ್ದಾರ್ ಶಾಲಾ ಮೈದಾನ …
Read More »ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.:ಹೆಚ್ ಡಿ ರೇವಣ್
ಬೆಂಗಳೂರು: ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಲಾಠಿ ಏಟು ಬೀಳುತ್ತವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶೇ.30 ರಷ್ಟು ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಮೋದಿಯವರು ಹೇಳ್ತಾರೆ ದೀಪ ಹಚ್ಚಿ, …
Read More »ಕೋಳಿ ಮತ್ತು ಮೊಟ್ಟೆ ತಿಂದು ಕೊರೊನಾ ಸೋಂಕಿನಿಂದ ದೂರವಿರಿ : ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಮಾ.31- ಕೋಳಿ ಮತ್ತು ಮೊಟ್ಟೆ ತಿನ್ನುವುದರಿಂದ ಉಷ್ಣಾಂಶ ಹೆಚ್ಚಾಗುತ್ತದೆ, ಆ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಹಾಗಾಗಿ ಜನ ಸಾಮಾನ್ಯರು ಇನ್ನು ಮುಂದೆ ಕೋಳಿ ಮೊಟ್ಟೆ ಹೆಚ್ಚಾಗಿ ತಿನ್ನಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈವರೆಗೂ ಒಂದೇ ಒಂದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಜನ ಸಾಮಾನ್ಯರು ವದ್ಧಂತಿಗಳಿಗೆ ಕಿವಿಗೊಟ್ಟು …
Read More »ಬೆಳಗಾವಿಯ ಮೂವರಿಗೆ ಕೊರೊನಾ ಜಗದೀಶ್ ಶೆಟ್ಟರ್ ಪುಣೆಯ ರಿಪೋರ್ಟ್ ಗಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.
ಬೆಂಗಳೂರು: ದೆಹಲಿ ತಬ್ಲಿಘಿ ಜಮಾತ್ ಸಭೆಗೆ ಹೋಗಿ ಬಂದಿದ್ದ ಬೆಳಗಾವಿಯ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿ, ಬೆಳಗಾವಿಯ ಮೂವರಲ್ಲಿ ಕೊರೊನಾ ಸೋಂಕು ತಗುಲಿದೆ. ಈ ಮೂವರು ದೆಹಲಿಯ ಜಮಾಜ್ ಸಭೆಗೆ ತೆರಳಿದ್ದವರೇ ಆಗಿದ್ದಾರೆ. ಶಿವಮೊಗ್ಗದ ಲ್ಯಾಬ್‍ನಿಂದ ಬಂದಿರುವ ರಿಪೋರ್ಟ್ ನಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ …
Read More »ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿಸಲು ಕಾಲಾವಕಾಶ : ಸವದಿ
ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ …
Read More »ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ
ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …
Read More »ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ
ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್‍ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ …
Read More »
Laxmi News 24×7