Breaking News

ರಾಜಕೀಯ

ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.:ಹೆಚ್ ಡಿ ರೇವಣ್

ಬೆಂಗಳೂರು: ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಲಾಠಿ ಏಟು ಬೀಳುತ್ತವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶೇ.30 ರಷ್ಟು ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಮೋದಿಯವರು ಹೇಳ್ತಾರೆ ದೀಪ ಹಚ್ಚಿ, …

Read More »

ಕೋಳಿ ಮತ್ತು ಮೊಟ್ಟೆ ತಿಂದು ಕೊರೊನಾ ಸೋಂಕಿನಿಂದ ದೂರವಿರಿ : ಸಚಿವ ಕೆ.ಎಸ್‍.ಈಶ್ವರಪ್ಪ

ಶಿವಮೊಗ್ಗ, ಮಾ.31- ಕೋಳಿ ಮತ್ತು ಮೊಟ್ಟೆ ತಿನ್ನುವುದರಿಂದ ಉಷ್ಣಾಂಶ ಹೆಚ್ಚಾಗುತ್ತದೆ, ಆ ಮೂಲಕ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಹಾಗಾಗಿ ಜನ ಸಾಮಾನ್ಯರು ಇನ್ನು ಮುಂದೆ ಕೋಳಿ ಮೊಟ್ಟೆ ಹೆಚ್ಚಾಗಿ ತಿನ್ನಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್‍.ಈಶ್ವರಪ್ಪ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈವರೆಗೂ ಒಂದೇ ಒಂದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಜನ ಸಾಮಾನ್ಯರು ವದ್ಧಂತಿಗಳಿಗೆ ಕಿವಿಗೊಟ್ಟು …

Read More »

ಬೆಳಗಾವಿಯ ಮೂವರಿಗೆ ಕೊರೊನಾ ಜಗದೀಶ್ ಶೆಟ್ಟರ್ ಪುಣೆಯ ರಿಪೋರ್ಟ್ ಗಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

ಬೆಂಗಳೂರು: ದೆಹಲಿ ತಬ್ಲಿಘಿ ಜಮಾತ್ ಸಭೆಗೆ ಹೋಗಿ ಬಂದಿದ್ದ ಬೆಳಗಾವಿಯ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿ, ಬೆಳಗಾವಿಯ ಮೂವರಲ್ಲಿ ಕೊರೊನಾ ಸೋಂಕು ತಗುಲಿದೆ. ಈ ಮೂವರು ದೆಹಲಿಯ ಜಮಾಜ್ ಸಭೆಗೆ ತೆರಳಿದ್ದವರೇ ಆಗಿದ್ದಾರೆ. ಶಿವಮೊಗ್ಗದ ಲ್ಯಾಬ್‍ನಿಂದ ಬಂದಿರುವ ರಿಪೋರ್ಟ್ ನಲ್ಲಿ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ …

Read More »

ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿಸಲು ಕಾಲಾವಕಾಶ : ಸವದಿ

ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ …

Read More »

ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ

ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …

Read More »

ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ

ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್‍ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ …

Read More »

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಪಾಸಣೆಗೆ ಒಳಗಾಗಬೇಕು:ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಏ.2-ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.   ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ …

Read More »

ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. …

Read More »

ನಾಳೆ ದೇಶವಾಸಿಗಳಿಗಾಗಿ ಮೋದಿ ವಿಡಿಯೋ ಸಂದೇಶ

ಬೆಂಗಳೂರು: ಪ್ರಧಾನಿ ಮೋದಿ ಅವರು ನಾಳೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ಭೀತಿಯಿಂದ ಈಗಾಗಲೇ ಮೋದಿ ಅವರು, ದೇಶವನ್ನು ಏಪ್ರಿಲ್ 14ರವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಇಂದು ಕೂಡ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮಾಡಿದ್ದರು. ಇದಾದ ನಂತರ ಅವರು ಟ್ವೀಟ್ ಮಾಡಿದ್ದು, ವಿಡಿಯೋ ಸಂದೇಶ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮೋದಿ …

Read More »

ರಾಜ್ಯದಲ್ಲಿ 312 ಸ್ಲೀಪರ್​ ಕೋಚ್ ರೈಲು‌ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತನೆ

ಬೆಂಗಳೂರು : ಕೊರೊನಾ ಚಿಕಿತ್ಸೆಗೆ ಐಸೋಲೇಷನ್ ವಾರ್ಡ್​ಗಳ ಕೊರತೆ ನೀಗಿಸಲು ಆರೋಗ್ಯ ಇಲಾಖೆ ಜೊತೆ ರೈಲ್ವೆ ಇಲಾಖೆ ಕೈಜೋಡಿಸಿದ್ದು, ರಾಜ್ಯದಲ್ಲಿ 312 ಸ್ಲೀಪರ್​ ಕೋಚ್ ರೈಲು‌ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸುವ ಕೆಲಸ ಆರಂಭಿಸಲಾಗಿದೆ. ಕೋವಿಡ್ -19 ಮಹಾಮಾರಿಗೆ ಸಿಲುಕಿದವರ ಚಿಕಿತ್ಸೆಗೆ ಅಗತ್ಯವಾದ ಐಸೋಲೇಷನ್ ಕೊರತೆ ನೀಗಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ದೇಶಾದ್ಯಂತ 5 ಸಾವಿರ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸಲಾಗುತ್ತಿದೆ. ಅದರ ಭಾಗವಾಗಿ ಕೊರೊನಾ ಸೋಂಕಿತರನ್ನು ಇರಿಸಲು ನೈರುತ್ಯ …

Read More »