ಬೆಂಗಳೂರು, ಏ.2-ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎ್.ಅಶ್ವತ್ಥಾರಾಯಣ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಹೆಗಡೆ ನಗರದ ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ ನಂತರ ಈ ಸೂಚನೆ ನೀಡಿದ್ದಾರೆ. ಆಶಾ ಕಾರ್ಯರ್ತೆಯರಿಗಾದ ನೋವು ಆಲಿಸಿದ ನಂತರ …
Read More »10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಧಾರಾವಿ ಸ್ಲಂ ಮೇಲೆ ಕೊರೊನಾ ಕರಿನೆರಳು
ಮುಂಬೈ: ಸುಮಾರು 10 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, ಏಷ್ಯಾದ ಅತಿ ದೊಡ್ಡ ಸ್ಲಂ ಎನಿಸಿಕೊಂಡಿರುವ ಧಾರಾವಿಯಲ್ಲಿ ಎರಡನೇ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. 52 ವರ್ಷದ ಬಿಎಂಸಿ(ಬೃಹನ್‍ಮುಂಬೈ ಮುನಿಸಿಪಲ್ ಕಾರ್ಪೋರೇಶನ್) ಸ್ಯಾನಿಟೈಸೇಶನ್ ಕೆಲಸಗಾರನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ವರ್ಲಿ ಪ್ರದೇಶದ ನಿವಾಸಿಯಾಗಿದ್ದು, ಇತ್ತೀಚೆಗೆ ಧಾರಾವಿಯಲ್ಲಿ ಕೆಲಸ ಮಾಡಲು ವರ್ಗಾಯಿಸಲಾಗಿತ್ತು. ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದ ಹಿನ್ನೆಲೆ ಬಿಎಂಸಿ ಅಧಿಕಾರಿಗಳು ಆತನಿಗೆ ಪರೀಕ್ಷೆ ಮಾಡಿಸುವಂತೆ …
Read More »ಹಸಿವಿನಿಂದ ಬಳಲುತಿದ್ದ ಮಂದಿಗೆ 4 ಟನ್ ಆಹಾರ ಸಾಮಗ್ರಿ ವಿತರಿಸಿದ ಕೌನ್ಸಿಲರ್
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರದ ಆದೇಶಕ್ಕೆ ಸ್ಪಂದಿಸಿ ಜನರು ಮನೆಯಲ್ಲಿ ಇದ್ದಾರೆ. ಆದರೆ ಹಸಿವಿನಿಂದ ಪರಿತಪಿಸುತ್ತಿದ್ದ ಬಡಾವಣೆ ಮಂದಿಗೆ ಕೌನ್ಸಿಲರ್ ನರಸಿಂಹ ಮೂರ್ತಿ ಸ್ಪಂದಿಸಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ ರಾಯನ್ ನಗರ ನಿವಾಸಿಗಳಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಕೌನ್ಸಿಲರ್ ನರಸಿಂಹ ಮೂರ್ತಿ ಅವರು ವಿತರಣೆ ಮಾಡಿದ್ದಾರೆ. ವಾರ್ಡಿನ ಪ್ರತಿ ಜನರಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಮನೆ ಮನೆಗೆ ತೆರಳಿ …
Read More »ಬೆಳಗಿನಿಂದ ಮಧ್ಯಾಹ್ನದವರೆಗೆ ಕೊರೋನಾಗೆ 7 ರಾಜ್ಯಗಳಲ್ಲಿ 7 ಸಾವು..!
ನವದೆಹಲಿ/ಮುಂಬೈ, ಏ.2-ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು ಬೆಳಗಿನಿಂದ ಮಧಾಹ್ಯದವರೆಗೆ ಒಟ್ಟು ಏಳು ರಾಜ್ಯಗಳಲ್ಲಿ ಏಳು ಸಾವು ಸಂಭವಿಸಿದ್ದು, ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಅರುಣಾಚಲ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಈ ಸಾವುಗಳು ವರದಿಯಾಗಿವೆ. ಹರಿಯಾಣದಲ್ಲಿ ಪ್ರಥಮ ಕೋವಿಡ್-19 ಸಾವು ಸಂಭವಿಸಿದೆ. ಸಂಬಾಲ ಪ್ರದೇಶದ 67 ವರ್ಷದ ವೃದ್ದರೊಬ್ಬರನ್ನು ಹೆಮ್ಮಾರಿ ಬಲಿ ಪಡೆದಿದೆ. ಹರಿಯಾಣಗೆ ಹೊಂದಿಕೊಂಡಿರುವ …
Read More »ಬೆಂಗಳೂರು :7, 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ರದ್ದು..!
ಬೆಂಗಳೂರು : ಕೊರೊನಾ ಸೋಂಕಿನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಏಳು, ಎಂಟು ಮತ್ತು ಒಂಭತ್ತನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನ ರದ್ದು ಮಾಡಲಾಗಿದ್ದು,ಈ ಮೂರು ವರ್ಗದ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ (ಪಾಸ್) ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಗುರುವಾರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ,ಎಸ್.ಸುರೇಶ್ ಕುಮಾರ್ ಈ ಹಿಂದೆ …
Read More »ಮೋದಿ ಎರಡನೇ ಬಾರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಲಾಕ್‍ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿ
ನವದೆಹಲಿ: ಕೊರೊನಾ ವೈರಸ್ ನಿಯಂತ್ರಿಸುವ ಸಲುವಾಗಿ ಪ್ರಧಾನಿ ಮೋದಿ ಎರಡನೇ ಬಾರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಮಾಡಿ ಮಾತನಾಡಿದ್ದು ಲಾಕ್‍ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿ ಎಂದು ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಏಪ್ರಿಲ್ 14ರ ನಂತರ ಲಾಕ್‍ಡೌನ್ ಇರುತ್ತಾ ಇಲ್ಲವೋ ಎನ್ನುವುದರ ಬಗ್ಗೆ ಸ್ಪಷ್ಟವಾಗಿ ಏನು ತಿಳಿಸಿಲ್ಲ. ಈ ವೇಳೆ ಮುಂದಿನ ವಾರವೂ ಕೊರೊನಾ ಪರೀಕ್ಷೆ, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಬೇಕು. ಮೆಡಿಕಲ್ ಉತ್ಪನ್ನಗಳು ಯಾವುದೇ …
Read More »ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ:ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಾಗಿರುವ ಪರಿಣಾಮ, ಕ್ಷೇತ್ರಕ್ಕೆ ಹೊರದೇಶಗಳಿಂದ ಬಂದಿರುವವರ ಮೇಲೆ ತೆಗೆದುಕೊಂಡಿರುವ ಕ್ರಮ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಎಚ್ಚರಿಕೆಗಳ ಕುರಿತು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಚರ್ಚಿಸಿದರು. ಬೆಳಗಾವಿ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಸಭೆ ಆಯೋಜಿಸಲಾಗಿತ್ತು. ಹೊರ ದೇಶ ಹಾಗೂ ಹೊರ ರಾಜ್ಯಗಳಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 3,800 ಜನರು ಬಂದಿದ್ದಾರೆ. ಈ 3800 ಜನರ ಮೇಲೆ ನಿಗಾ …
Read More »ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತ
ಹುಕ್ಕೇರಿ ; ದೆಹಲಿಯ ನಿಜಾಮುದ್ದೀನ್ ತಬ್ಲೀಘ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡ ಓರ್ವ ಸೇರಿದಂತೆ ಇದೇ ವೇಳೆ ಅಂತಾರಾಜ್ಯಗಳಿಗೆ ಭೇಟಿ ನೀಡಿದ ತಾಲೂಕಿನ ಐವರಿಗೆ ಕಿಲ್ಲರ್ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯ ಮೇಲೆ ನಿಗಾ ವಹಿಸಲಾಗಿದೆ. ಹುಕ್ಕೇರಿ ಪಟ್ಟಣದ ಬಾಗವಾನ ಗಲ್ಲಿಯ ಓರ್ವ ವ್ಯಕ್ತಿ ಈ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಖಚಿತಪಟ್ಟ ಹಿನ್ನೆಲೆಯಲ್ಲಿ ಆತನನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಜತೆಗೆ ಇದೇ ಸಮಯದಲ್ಲಿ …
Read More »ಕಷ್ಟಕಾಲದಲ್ಲಿ ರಾಜ್ಯಕ್ಕೆ ಸಿಗುತ್ತಾ ಕೇಂದ್ರದ ನೆರವು?; ಮೋದಿ ಏರ್ಪಡಿಸಿರುವ ಸಿಎಂ ಗಳ ಸಭೆಯಲ್ಲಿ ಬಾಕಿ ಕೇಳಲಿರುವ ಬಿಎಸ್‌ವೈ
ಬೆಂಗಳೂರು (ಏಪ್ರಿಲ್ 02); ಮಾರಣಾಂತಿಕ ಕೊರೋನಾ ವೈರಸ್ ಇಡೀ ದೇಶಕ್ಕೆ ಬೆದರಿಕೆ ಒಡ್ಡಿದ್ದು ಇದನ್ನು ತಡೆಯುವ ಹಾಗೂ ಲಾಕ್‌ಡೌನ್ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬೆಳಗ್ಗೆ 11 ಗಂಟೆಗೆ ಸಿಎಂಗಳ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯಲ್ಲಿ ಯಡಿಯೂರಪ್ಪ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಕೇಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ರಾಜ್ಯಕ್ಕೆ ಬರ ಮತ್ತು ನೆರೆ ಒಂದರಹಿಂದೊಂದರಂತೆ ಅಪ್ಪಳಿಸಿತ್ತು. …
Read More »ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ
ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …
Read More »
Laxmi News 24×7