ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದ್ದ ರಾಜ್ಯ ಸರಕಾರ ಇದೀಗ ಸಂಪೂರ್ಣ ಕರ್ನಾಟಕವನ್ನು ಲಾಕ್ ಡೌನ್ ಮಾಡಿ ಆದಶ ಹೊರಡಿಸಿದೆ. ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಇದರಿಂದಾಗಿ ಇಡೀ ರಾಜ್ಯದಲ್ಲಿ ಸಾರಿಗೆ ಸಂಚಾರ ವ್ಯವಸ್ಥೆ ಸ್ಥಗಿತವಾಗಲಿದೆ. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚಾರ ಬಂದ್ ಆಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೇನೂ ಸಿಗುವುದಿಲ್ಲ. ಮಾರ್ಚ್ 31ರ ವರೆಗೆ ಇಡೀ …
Read More »ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಲ್ಲಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂತ ಜಲಾರಾಂ ಫೌಂಡೇಶನ್ ಸಹಯೋಗದಲ್ಲಿ ಮಾಸ್ಕ್ ಮತ್ತು ಡೆಟಾಲ್ ಸೋಪ್ ಗಳನ್ನು ಕಾರ್ಮಿಕರಿಗೆ ಮತ್ತು ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂತ ಜಲಾರಾಂ ಫೌಂಡೇಶನ್ ಮುಖ್ಯಸ್ಥ ಕನ್ನುಭಾಯಿ ಟಕ್ಕರ್ ಕಾರ್ಯಕ್ರಮ ಆಯಜಿಸಿದ್ದರು. ಈ ಸಂದರ್ಭದಲ್ಲಿ ಧರ್ಮ ದಾಸ್ ಏಇಓ, ಅಪ್ಪಣ್ಣವರ ಡಿವಿಜನಲ್ ಎಕ್ಸಿಕ್ಯೂಟಿವ್, ಕರೂರ, ಗದಗ …
Read More »ಬೆಂಗಳೂರಿನಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ
ಬೆಂಗಳೂರು ಮಾ. 32 : ಬೇಸಿಗೆ ಸಮಯದಲ್ಲಿ ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಕರೋನಾ ಮಹಾಮಾರಿ ರಾಜ್ಯದೆಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರಿತಪಿಸುವಂತಾಗಿದೆ. ಬೆಳಗ್ಗೆಯಿಂದಲೇ ಬಿಸಿಲ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಹಲವಾರು ಬದಲಾವಣೆಯಾಗಿ ಈ ರೀತಿ ಧಾರಾಕಾರ ಮಳೆ ಸುರಿಯುತ್ತಿದೆ ಎಂದು …
Read More »ಕೊರೊನಾ ರೆಡ್ ಅಲರ್ಟ್, 1000 ವೆಂಟಿಲೆಟರ್ ಖರೀದಿಗೆ ಮುಂದಾದ ಸರ್ಕಾರ..!
ಬೆಂಗಳೂರು, ಮಾ.23- ಕರ್ನಾಟಕದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಬೆಳಗ್ಗೆ ಒಟ್ಟು ಸೋಂಕಿತರ ಸಂಖ್ಯೆ 27ಕ್ಕೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕೊರೊನಾ ರೋಗದ ಭೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಏಕಕಾಲಕ್ಕೆ ಒಂದು ಸಾವಿರ ವೆಂಟಿಲೆಟರ್‍ಗಳನ್ನು ಖರೀದಿಸಲು ಮುಂದಾಗಿದೆ. ಇಂದು ಬೆಳಗ್ಗೆ ವಿಕಾಸಸೌಧದಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಕಂಪೆನಿಗಳ ಜೊತೆ ಚರ್ಚೆ ಮಾಡಿ, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ
ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …
Read More »ಬೆಳಗಾವಿ ಜಿಲ್ಲೆ: ಐದೂ ಪ್ರಕರಣಗಳ ವರದಿ ನೆಗೆಟಿವ್:ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮಾಹಿತಿ
ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …
Read More »ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್
ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ …
Read More »ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ
ರಾಜಕೀಯ ವೈರತ್ವವನ್ನು ಮರೆತು ಸ್ವತಃ ಯಡಿಯೂರಪ್ಪನವರೆ ಇಂದಿರಾ ಕ್ಯಾಂಟೀನಲ್ಲಿ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸ ಮಾಡ್ತಿದಾರೆ. ಈ ಸಮಯದಲ್ಲಿ ಮೋದಿ ಹೇಳಿದ್ಕೆ ನಾನ್ ಚಪ್ಪಾಳೆ ತಟ್ಟಲ್ಲ, ಆವತ್ತು ಸಿದ್ದು ಕ್ಯಾಂಟೀನ್ ಮಾಡಿದ್ಕೆ ಇವತ್ತು ಊಟ ಸಿಕ್ತಿರೋದು ಅಂತ ಕೆಳಮಟ್ಟದ ರಾಜಕೀಯ ಮಾಡೋದು ಬಿಟ್ಟು ಎಲ್ಲರು ಒಂದಾಗಿ. ಇವತ್ತು ನೀವು ಸೋಲಿಸಬೇಕಿರುವುದು ಮೋದಿನೊ, ಸಿದ್ದುನೊ, ಕಾಂಗ್ರೆಸ್ಸೊ, ಬಿಜೆಪಿನೊ ಅಲ್ಲ…. ಇಡೀ ದೇಶಕ್ಕೆ ಮಾರಕವಾಗಿರೊ ಕೊರೊನವನ್ನ! ?
Read More »ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು:B.S.Y.
ಬೆಂಗಳೂರು: ನಗರದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ, ತಿಂಡಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾ. 31ರೆವರೆಗೆ ಬಂದ್ ಮುಂದುವರೆಸಲಾಗುವುದು. ಕೊರೊನಾ ವೈರಸ್ ವಿರುದ್ದ ಹೋರಾಟ ನಡೆಸಲು ಸರ್ಕಾರ ಸನ್ನದ್ಧವಾಗಿದೆ. ವೈದ್ಯರೊಂದಿಗೆ ಸಭೆ ನಡೆಸಿದ್ದೇವೆ. ವೈದ್ಯರು ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು. 30 ಫೀಮರ್ ಕ್ಲಿನಿಕ್ ತೆರೆಯಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ …
Read More »ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ:ಲಕ್ಷ್ಮಣ ಸವದಿ
ಬೆಂಗಳೂರು : ಜನರ ಜೀವದ ಜತೆಗೆ ಚೆಲ್ಲಾಟವಾಡಿ ಪರಿಸ್ಥಿತಿ ಲಾಭ ಪಡೆದುಕೊಳ್ಳವವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ತಡೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಖಾಸಗಿ ವಾಹನಗಳ ಮಾಲೀಕರು ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆದು …
Read More »
Laxmi News 24×7