Breaking News
Home / ರಾಜಕೀಯ (page 270)

ರಾಜಕೀಯ

ಶುಕ್ರ, ಮಂಗಳನತ್ತ ಇಸ್ರೋ ಮುಂದಿನ ಚಿತ್ತ: ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ನಿಗರ್ ಶಾಜಿ ಹೇಳಿಕೆ

ತಿರುಚ್ಚಿ (ತಮಿಳುನಾಡು): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ಮಹತ್ವದ ಯೋಜನೆಗಳ ಬಗ್ಗೆ ವಿಜ್ಞಾನಿ ನಿಗರ್ ಶಾಜಿ ಮಾಹಿತಿ ಹಂಚಿಕೊಂಡಿದ್ದಾರೆ. ಶುಕ್ರ ಮತ್ತು ಮಂಗಳದಂತಹ ಗ್ರಹಗಳ ಕುರಿತು ಇಸ್ರೋ ತನ್ನ ಅನ್ವೇಷಣೆ ಮುಂದುವರಿಸಲಿದೆ ಎಂದು ಸೂರ್ಯನ ಅಧ್ಯಯನ ಬಗ್ಗೆ ಭಾರತದ ಮೊದಲ ಬಾಹ್ಯಾಕಾಶ ಯೋಜನೆಯಾದ ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ಶಾಜಿ ಹೇಳಿದ್ದಾರೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಶನಿವಾರ ‘ತಾಂತ್ರಿಕ ಮಹಿಳೆ ವಿಶೇಷ ಪ್ರಶಸ್ತಿ ಮತ್ತು ಇಂಟರ್​ನೆಟ್​ ವಾಣಿಜ್ಯೋದ್ಯಮ ಕೌಶಲ್ಯಗಳ ತರಬೇತಿ’ …

Read More »

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ. ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ …

Read More »

ಭೀಮಾ ತೀರದಲ್ಲಿ ದ್ವೇಷಕ್ಕಾಗಿ ಕೊಲೆಗೈದ ಆರೋಪಿಗಳ ಬಂಧನ

ಕಲಬುರಗಿ: ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಶಾಸಕ ಎಂವೈ ಪಾಟೀಲ್ ಅವರ ಆಪ್ತ ಮದರಾ (ಬಿ) ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ದೇವಲಗಾಣಗಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅದರಂತೆ ಇದೇ ತಾಲೂಕಿನ ಸಿದನೂರ ಗ್ರಾಮದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರೇವೂರ್ (ಬಿ) ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮದರಾ (ಬಿ) ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ …

Read More »

ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್​ ಭಾತ್ಮೀದಾರನ ಸಹಿತ ಐವರ ಬಂಧನ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಭಾತ್ಮೀದಾರನ ಸಹಿತ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್‌ ಬಂಧಿತ ಆರೋಪಿಗಳು. ಪೊಲೀಸ್ ಭಾತ್ಮೀದಾರನಿಂದಲೇ ಅಪಹರಣದ ಸಂಚು: ಸಿಸಿಬಿ ಪೊಲೀಸರ ಭಾತ್ಮೀದಾರನಾಗಿದ್ದ ಮೊಹಮ್ಮದ್​ ಖಾಸಿಂ ಮುಜಾಹಿದ್, ಸಿಸಿಬಿ ಕಚೇರಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಸೆಪ್ಟೆಂಬರ್ 2 ರಂದು ಕಾಲು ಸಿಂಗ್ ಎಂಬಾತ ತನ್ನ ಕಾರಿನಲ್ಲಿ …

Read More »

ಅ.24ರಂದು ಸಂಜೆ 4.40ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ.. ಆ ದಿನದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ!

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಅ.24 ರಂದು ಮಧ್ಯಾಹ್ನ 1.46 ರಿಂದ 2.08 ವರಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮೈಸೂರಿನ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಪೂಜೆ ಹಮ್ಮಿಕೊಳ್ಳಲಾಗಿದೆ. ಹಾಗೂ ಅರಮನೆಯ ಒಳ ಆವರಣದಲ್ಲಿ ಸಂಜೆ 4.40 ರಿಂದ 5 ರವರೆಗೆ ಸಲುವ ಶುಭ ಮೀನ ಲಗ್ನದಲ್ಲಿ ವಿಶ್ವ ವಿಖ್ಯಾತ ವಿಜಯದಶಮಿ ಮೆರವಣಿಗೆಗೆ, ಗಣ್ಯರಿಂದ ಚಿನ್ನದ ಅಂಬಾರಿಗೆ ಪುಷ್ವಾರ್ಚನೆಯ ಮೂಲಕ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ …

Read More »

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ: ಮಾಹಿತಿ ಸಂಗ್ರಹಕ್ಕೆ ತಂಡ ನೇಮಿಸಿದ ರಾಜ್ಯ BJP

ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರ ಆತ್ಮಹತ್ಯೆ ಸಂಬಂಧ ಮಾಹಿತಿ ಸಂಗ್ರಹಿಸಲು ಬಿಜೆಪಿ ರಾಜ್ಯ ತಂಡವನ್ನು ನೇಮಿಸಿದೆ‌. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನಾಳೆ (ಭಾನುವಾರ) ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ. ಉಮೇಶ್ ಜಾಧವ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, …

Read More »

ಬಾಲಿವುಡ್​ಗೆ ರಾಕಿಂಗ್​ ಸ್ಟಾರ್ ಪದಾರ್ಪಣೆ

ಹೈದರಾಬಾದ್: ಕೆಜಿಎಫ್ ಸಿನಿಮಾದ ಯಶಸ್ಸಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಸ್ಟಾರ್​ ನಟ ಯಶ್ ಈಗ ಬಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಅವರು ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ರಾಮಾಯಣ ಸಿನಿಮಾಕ್ಕೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಸಿನಿಮಾಕ್ಕೆ ಯಶ್​ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದಂಡದ ಪ್ರಕಾರ, ನಿರ್ದೇಶಕ ತಿವಾರಿ ಅವರು ರಾಮನ ಪಾತ್ರಕ್ಕಾಗಿ ರಣಬೀರ್ …

Read More »

ರಾಜ್ಯದಲ್ಲಿ ವಿದ್ಯುತ್ ಕೊರತೆ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ

ಬೆಂಗಳೂರು: ನಾವು ವೆಸ್ಟ್​ಎಂಡ್​ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ. ಜನರ ನಡುವೆ ಇದ್ದು, ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.   ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಸಂಬಂಧ ಎಕ್ಸ್​ನಲ್ಲಿ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ, ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ …

Read More »

ರೈತ ದಸರಾದಲ್ಲಿ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ; ಪ್ರಥಮ ಸ್ಥಾನ ಪಡೆದ ಬೆಂಗಳೂರಿನ ಗೀತಾ ಚೌಡಯ್ಯ

ಮೈಸೂರು: ನಾಡಹಬ್ಬ ದಸರಾದ ಅಂಗವಾಗಿ ರೈತ ದಸರಾ ಸಮಿತಿ ವತಿಯಿಂದ ಶನಿವಾರ ಜೆ.ಕೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಗೀತಾ ಚೌಡಯ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅವರ ಹಸು 46.690 ಕೆ.ಜಿ ಹಾಲು ನೀಡುವ ಮೂಲಕ 50 ಸಾವಿರ ರೂಪಾಯಿ ಮೊತ್ತದ ಚೆಕ್​ ಹಾಗೂ ಟ್ರೋಫಿಯನ್ನು ತನ್ನ ಮಾಲೀಕನಿಗೆ ದೊರಕಿಸಿಕೊಟ್ಟಿದೆ. ಮಂಡ್ಯ ಜಿಲ್ಲೆಯ ದುದ್ದಗ್ರಾಮದ ಶೀರ ಹೆಗಡೆ ಅವರ ಹಸು 36.450 ಕೆ.ಜಿ ಹಾಲು …

Read More »

ಕಲಬುರಗಿಯಲ್ಲಿ ಬ್ಯೂಟಿಷಿಯನ್ ಬರ್ಬರ ಕೊಲೆ.. 2 ನೇ ಪತಿ ಮೇಲೆ ಶಂಕೆ

ಕಲಬುರಗಿ: ಬ್ಯೂಟಿಷಿಯನ್​ ಕುತ್ತಿಗೆಗೆ ದುಪ್ಪಟ್ಟದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಾಂತಿ ನಗರದಲ್ಲಿ ನಡೆದಿದೆ. ಶಾಹಿನಾ ಬಾನು (35) ಕೊಲೆಯಾದ ಮಹಿಳೆ. ಬ್ಯೂಟಿಷಿಯನ್ ಆಗಿದ್ದ ಶಾಹಿನಾ ಬಾನು ಮೊದಲು ಸೈಯದ್ ಜಿಲಾನಿ ಎಂಬಾತನ ಜೊತೆ ಮದುವೆಯಾಗಿದ್ದು, ಒಂದು ಗಂಡು ಮಗು ಕೂಡ ಇದೆ. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿಚ್ಛೇದನ ಪಡೆದಿದ್ದಾರೆ. ಶಾಹಿನಾ ಬಾನು ಜೊತೆಗೆ ಡೈವರ್ಸ್​ ಪಡೆದ ಮೇಲೆ ಆಕೆಯ ಮಾಜಿ ಪತಿ …

Read More »