Breaking News
Home / ರಾಜಕೀಯ (page 280)

ರಾಜಕೀಯ

ಚುನಾವಣಾ ಬಾಂಡ್​ಗಳ ವಿಚಾರ.. ಸುಪ್ರೀಂ ಪಂಚ ಪೀಠದಿಂದ ನಡೆಯಲಿದೆ ವಿಚಾರಣೆ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್​​ನ ಪಂಚ ಪೀಠ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್​ ಸೋಮವಾರ ಹೇಳಿದೆ. ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಕನಿಷ್ಠ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ನಿರ್ಧಾರವನ್ನು ಇಂದು ಪ್ರಕಟಿಸಿದೆ. ಚೀಫ್​ ಜಸ್ಟಿಸ್​​ ಪ್ರಸ್ತಾಪಿಸಿದ ವಿಷಯದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಸಂವಿಧಾನದ 145 (4) ನೇ ವಿಧಿಗೆ ಸಂಬಂಧಿಸಿದಂತೆ ಈ …

Read More »

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತೆಯ ಕಡೆಯವರಿಗೆ ತಿಳಿಸಬೇಕು: ಹೈಕೋರ್ಟ್

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ದಾಖಲಾದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸಂತ್ರಸ್ತರು ಬದುಕುಳಿದಿದ್ದರೆ ಅವರಿಗೆ ಅಥವಾ ದೂರುದಾರರಿಗೆ ವಿಚಾರಣೆಯ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಿದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠ ಈ ಆದೇಶ ನೀಡಿದೆ. ಅಲ್ಲದೇ, ಪೋಕ್ಸೋ ಪ್ರಕರಣಗಳಲ್ಲಿನ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ವೇಳೆ …

Read More »

ಉದ್ಯೋಗಕ್ಕಾಗಿ ಲಂಚ ಪ್ರಕರಣದಲ್ಲಿ ಭಾಗಿಯಾದ 16 ನೌಕರರನ್ನು ವಜಾಗೊಳಿಸಿದ T.C.S.

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು …

Read More »

ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಗಲಿಕೆಗೆ ಸಂತಾಪ ಸೂಚಿಸಿದ ಜಾರಕಿಹೊಳಿ ಸಹೋದರರು

ಗೋಕಾಕ ತಾಲೂಕಿನ ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ತೀವ್ರ ನೋವಾಗಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ,ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ , ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.   ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹದಲ್ಲಿ‌ ನಾವು ಕೂಡ ಭಾಗಿಯಾಗಿದ್ದೇವೆ. ಅರಭಾವಿ …

Read More »

ಬೆಂಗಳೂರಿನಲ್ಲಿ ಮತ್ತೆ ಐಟಿಯಿಂದ ಭರ್ಜರಿ ಬೇಟೆ.. 40 ಕೋಟಿ ಹಣ ಪತ್ತೆ

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿ ಮುಂದುವರೆದಿದ್ದು, ಕಂತೆ ಕಂತೆ ನಗದು ಹಣ ಪತ್ತೆಯಾಗುತ್ತಲೇ ಇದೆ. ಭಾನುವಾರ ರಾಜಾಜಿನಗರದ ಕೇತಮಾರನಹಳ್ಳಿಯಲ್ಲಿರುವ ಬಿಲ್ಡರ್‌ವೊಬ್ಬರ ಅಪಾರ್ಟ್‌ಮೆಂಟ್ ಮೇಲೆ ನಡೆಸಿದ ದಾಳಿ ವೇಳೆ 40 ಕೋಟಿ ರೂ.ಗಿಂತ ಅಧಿಕ ನಗದು ಸಿಕ್ಕಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ಗುತ್ತಿಗೆದಾರ ಸಂತೋಷ ಕೃಷ್ಣಪ್ಪ ಅವರ ಅಪಾರ್ಟ್‌ಮೆಂಟ್ ಮೇಲೆ ನಡೆದ ದಾಳಿಯಲ್ಲಿ ಇಷ್ಟೊಂದು ಹಣ ಪತ್ತೆಯಾಗಿದೆ. ಈ ಹಣ ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ …

Read More »

ನವರಾತ್ರಿ ಹಬ್ಬ ಪ್ರಾರಂಭ: ಹೂವುಗಳ ಬೆಲೆ ಗಣನೀಯ ಏರಿಕೆ

ಬೆಂಗಳೂರು: ನಗರದಲ್ಲಿ ಗಣಪತಿ ಹಬ್ಬಕ್ಕೆ ಕುಸಿತ ಕಂಡಿದ್ದ ಹೂವಿನ ಬೆಲೆ ನವರಾತ್ರಿಗೆ ಹೆಚ್ಚಳವಾಗಿದೆ. ಎಲ್ಲೆಡೆ ಹಬ್ಬದ ಸಡಗರ ಆರಂಭವಾಗಿದ್ದು, ಮಾರುಕಟ್ಟೆಯಲ್ಲಿ ಕೆಲವು ಹೂವುಗಳ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಆಯುಧ ಪೂಜೆ, ವಿಜಯದಶಮಿಯ ಸಂದರ್ಭಕ್ಕೆ ಮಲ್ಲಿಗೆ ಮೊಗ್ಗು, ಕನಕಾಂಬರ, ಸೇವಂತಿಗೆ ಹೂವು ಸೇರಿದಂತೆ ಮತ್ತಿತರ ಹೂವಿನ ಬೆಲೆಗಳು ಗ್ರಾಹಕರ ಕೈಸುಡುವ ಸಾಧ್ಯತೆ ಇದೆ. ಕನಕಾಂಬರ ಮಲ್ಲಿಗೆ, ಸೇವಂತಿಗೆ ಮತ್ತು ಕೆಂಪು ಗುಲಾಬಿ ಹೂವುಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಕೆ.ಆರ್‌.ಮಾರುಕಟ್ಟೆಯಲ್ಲಿ ಕನಕಾಂಬರ ಹೂವು …

Read More »

ಒಂದೇ ಗರ್ಭಗುಡಿಯಲ್ಲಿ ನವದುರ್ಗೆಯರು:

ಹಾವೇರಿ : ದೇಶಾದ್ಯಂತ ಶರನ್ನಾವರಾತ್ರಿಯ ಸಂಭ್ರಮ ನಿನ್ನೆಯಿಂದ ಆರಂಭವಾಗಿದೆ. ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಹ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಡೀ ದೇಗುಲವೇ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದೆ.   ಹೌದು, ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ 9 ದುರ್ಗೆಯರನ್ನು ಸ್ಥಾಪನೆ ಮಾಡಿರುವುದು ವಿಶೇಷ. ನವರಾತ್ರಿಯ ದಿನಗಳಲ್ಲಿ ಪ್ರತಿನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ, …

Read More »

ಮೈಸೂರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಸರುವಾಸಿ: ಸಿದ್ದರಾಮಯ್ಯ

ಮೈಸೂರು: ”ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಸರಾದ ಜಿಲ್ಲೆ ಮೈಸೂರು. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದರೆ ತಪ್ಪಾಗಲಾರದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು …

Read More »

ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …

Read More »

ಇಂಗಳಿ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 29 ಲಕ್ಷ ಅನುದಾನ?:ಶಶಿಕಲಾ ಜೊಲ್ಲೆ

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ದೇವರು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಪ್ರಯತ್ನದಿಂದ ರೂ. 29 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀ ಬೀರೇಶ್ವರ ಸಹಕಾರಿ ಇಂಗಳಿ ಶಾಖೆಯ ನಿರ್ದೇಶಕ ಪ್ರಕಾಶ ಮಿರ್ಜಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಂಕರ ಪವಾರ ಮಾತನಾಡಿ, …

Read More »