Breaking News

ರಾಜಕೀಯ

2028ಕ್ಕೆ ಕಾಂಗ್ರೆಸ್​ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಈ ಕುರಿತು ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದ ದಿನ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿ‌ನ. ನಾವು ಕೂಡ ಆಚರಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮನೆಗಳ ಒತ್ತುವರಿ …

Read More »

ಸತೀಶ ಶುಗರ್ ಅವಾಡ್೯ನಲ್ಲಿಯಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಸತೀಶ ಶುಗರ್ ಅವಾಡ್೯ನಲ್ಲಿಯಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ ಚಿಕ್ಕೋಡಿ: ಸತೀಶ ಶುಗರ ಅವಾರ್ಡನಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಚಿಕ್ಕೋಡಿ ತಾಲೂಕಿನ ಹೊಸಯಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 3 ನೇ ಸ್ಥಾನ ಪಡೆದು ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ‌. ನಿನ್ನೆ ಸಾಯಂಕಾಲ ಚಿಕ್ಕೋಡಿ ಪಟ್ಟಣದ ಕಿವಡ್ ಮೈದಾನದಲ್ಲಿ ಸತೀಶ ಶುಗರ ಅವಾಡ್೯ನ ಗ್ರ್ಯಾಂಡ್ ಫಿನಾಲೆಯಲ್ಲಿ ಯಡೂರ ಗ್ರಾಮದ ಸರ್ಕಾರಿ ಹಿರಿಯ …

Read More »

ಅಧಿಕಾರ ಯಾರಿಗೂ ಶಾಶ್ವತ ಅಲ್ಲ ;ಡಿಸಿಎಂ ಡಿ.ಕೆ.ಶಿವಕುಮಾರ್

ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು., ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಎಂತೆಂಥಹ ಚಕ್ರವರ್ತಿಗಳೇ …

Read More »

ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್

ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಡೆಲಿವರಿ ಬಾಯ್ ಅರೆಸ್ಟ್ ಬೆಂಗಳೂರಿನ ಮಾಲ್‌ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಗುವಾಹಟಿ ಮೂಲದ ಡೆಲಿವರಿ ಬಾಯ್ ಮನೂಜ್ ಚಾಂದ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಡಿ.25ರಂದು ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಬಳಿ ಹೋಗಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಯುವತಿ ನೀಡಿದ ದೂರಿನ ಮೇರೆಗೆ ಮಹಾದೇವಪುರ ಪೊಲೀಸ್‌ ಠಾಣೆಯಲ್ಲಿ …

Read More »

ಬೆಳಗಾವಿಯಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ 29ನೇ ರಾಜ್ಯಮಟ್ಟದ ಜಾಂಬೋರೇಟ್ ಉದ್ಘಾಟನೆ (

ಬೆಳಗಾವಿ: “ಜಾಂಬೋರೇಟ್‌ನಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಭವಿಷ್ಯದ ಭಾರತ ನಿರ್ಮಾಣದ ಕಣ್ಣುಗಳು ನನಗೆ ಕಾಣಿಸಿದವು. ನೀವು ನಿಮ್ಮ ತಂದೆ-ತಾಯಿಯ ಆಸ್ತಿ ಅಷ್ಟೇ ಅಲ್ಲ. ಇಡೀ ದೇಶದ ಆಸ್ತಿಯನ್ನಾಗಿ ನಿಮ್ಮನ್ನು ರೂಪಿಸುವ ಕೆಲಸವನ್ನು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮಾಡುತ್ತದೆ. ಸಿಕ್ಕ ಅವಕಾಶವನ್ನು ಬಳಸಿಕೊಂಡು ಉತ್ತಮ ಭವಿಷ್ಯ ಮತ್ತು ಅತ್ಯುತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಕರೆ ಕೊಟ್ಟರು. ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದ ಬಳಿಯ ಫಿನಿಕ್ಸ್ ಶಾಲೆಯ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ …

Read More »

ಬ್ಯಾಂಕ್​ ಖಾತೆಯಲ್ಲಿದ್ದ 6,69,904 ರೂ. ಹಣ ಖಾತೆದಾರರಿಗೂ ಗೊತ್ತಿಲ್ಲದೆ ವರ್ಗಾವಣೆ

ರಾಯಚೂರು: ಬ್ಯಾಂಕ್​ ಖಾತೆಯಲ್ಲಿದ್ದ 6,69,904 ರೂ. ಹಣವು ಖಾತೆದಾರರ ಗಮನಕ್ಕೂ ಬಾರದೆ, ವರ್ಗಾವಣೆ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ರೈತ ಮಹಿಳೆ ನೀಡಿದ ದೂರಿನ ಮೇರೆಗೆ ರಾಯಚೂರು ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದ ರೈತ ಮಹಿಳೆ ಜ್ಯೋತಿ ಎಂಬುವರೇ ಹಣ ಕಳೆದುಕೊಂಡವರು. ಇವರು ಮಾನ್ವಿ ಪಟ್ಟಣದ ಕೆನರಾ ಬ್ಯಾಂಕ್​ ಖಾತೆಯಲ್ಲಿದ್ದ ಹಣ ವರ್ಗಾವಣೆ ಆಗಿರುವುದಾಗಿ ದೂರು ನೀಡಿದ್ದಾರೆ. …

Read More »

ನಾನು ಹೈಕಮಾಂಡ್ ಎಂದು ಹೇಳುವ ಧೈರ್ಯ ಖರ್ಗೆ ಅವರಿಗೆ ಇಲ್ಲ’: ಹೆಚ್.ವಿಶ್ವನಾಥ್

ಮೈಸೂರು: ‘ನಾನು ಹೈಕಮಾಂಡ್ ಎಂದು ಹೇಳುವ ಧೈರ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಸೀನಿಯರ್, ರಾಜ್ಯದ ಸಿಎಂ ಕುರ್ಚಿ ವಿಚಾರವಾಗಿ ಸರಿಯಾಗಿ ನಿರ್ಧಾರ ಕೈಗೊಳ್ಳಲು ಅವರಿಗೆ ಆಗುತ್ತಿಲ್ಲ. ದಲಿತ ಸಿಎಂ ವಿಚಾರ ಬಂದಾಗ ಡಿ.ಕೆ. ಶಿವಕುಮಾರ್ ಅವರು, ಖರ್ಗೆ ಅವರು ಸಿಎಂ ಆದರೆ ನಾನು ಬಿಟ್ಟು ಕೊಡುವೆ ಅಂದಿದ್ದರು. …

Read More »

ಕೊಪ್ಪಳದಿಂದ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​ನಲ್ಲಿ ಹಸುಗೂಸು ರವಾನೆ

ಕೊಪ್ಪಳ: ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹಸುಗೂಸನ್ನು ಹೆಚ್ಚಿನ ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿ ಕಿಮ್ಸ್​ಗೆ ಕರೆದೊಯ್ಯಲಾಗಿದೆ. ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ ವಿಜಯಲಕ್ಷ್ಮೀ ದಂಪತಿಗೆ ಹತ್ತು ಗಂಟೆಗಳ ಹಿಂದೆ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ನವಜಾತ ಶಿಶುವನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಜಿಲ್ಲಾ ಆಸ್ಪತ್ರೆಯಲ್ಲಿ ಮಗು ತಪಾಸಣೆ ಮಾಡಿದ ಬಳಿಕ ಮಗುವಿನ ಕರಳುಗಳು ಹೊರಗಡೆ ಬಂದಿರುವ ಕಾರಣ ಮಗುವಿಗೆ …

Read More »

ಹಿರೇಕೊಡಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ

ಚಿಕ್ಕೋಡಿ:ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು ಅಧಿಕೃತವಾಗಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಈ …

Read More »

ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ:ಸಚಿವ ಸಂತೋಷ ಲಾಡ್

ಚಿಕ್ಕೋಡಿ-“ಮರಾಠಾ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಿದೆ. ದೇಶದಲ್ಲಿ ಅತ್ಯಂತ ಕಟ್ಟ ಕಡೆಯ ಸ್ಥಾನದಲ್ಲಿ ಮರಾಠಾ ಸಮುದಾಯವಿದ್ದು, ಇದನ್ನು ಮೇಲೆತ್ತಲು ಸಂಘಟನೆ ಅತ್ಯವಶ್ಯಕವಾಗಿದೆ” ಎಂದು ಕಾರ್ಮಿಕ ಸಚಿವ, ಮರಾಠಾ ಸಮಾಜದ ಮುಖಂಡ ಸಂತೋಷ ಲಾಡ್ ಹೇಳಿದರು. ಚಿಕ್ಕೋಡಿ ಪಟ್ಟಣದ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಚಿಕ್ಕೋಡಿ ತಾಲ್ಲೂಕು ಮರಾಠಾ ಸಮಾಜ ಬಾಂಧವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಛತ್ರಪತಿ ಶಿವಾಜಿ …

Read More »