Breaking News
Home / ರಾಜಕೀಯ (page 290)

ರಾಜಕೀಯ

ಕರ್ನಾಟಕದಲ್ಲಿ 5 ವರ್ಷದಲ್ಲಿ 58 ಸಾವಿರ ಮಕ್ಕಳು ಶಾಲೆಗಳಿಂದ ದೂರ.. ಕೋಟಿಗಟ್ಟಲೇ ವ್ಯಯಿಸಿದರೂ ನಿಲ್ಲದ ಡ್ರಾಪ್ ಔಟ್

ಬೆಂಗಳೂರು: ಶಾಲೆ ತೊರೆದಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 7 ನೇ ಸ್ಥಾನ ಪಡೆದುಕೊಂಡಿದ್ದು, ರಾಜ್ಯಾದ್ಯಂತ ಕಳೆದ ಐದು ವರ್ಷಗಳಲ್ಲಿ 57,785 ವಿದ್ಯಾರ್ಥಿಗಳು ಶಿಕ್ಷಣ ತೊರೆದಿದ್ದಾರೆ. ವಿದ್ಯಾರ್ಥಿಗಳು ಶಾಲೆ ತೊರೆಯುವುದನ್ನು ತಡೆಯಲು ಐದು ವರ್ಷದಲ್ಲಿ ಸರ್ಕಾರದಿಂದ ಬರೋಬ್ಬರಿ 1,099.63 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ. ಆದರೂ ಮಕ್ಕಳು ಶಾಲೆ ತೊರೆಯುವುದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣವೇನು, ಸರ್ಕಾರ ಏನೆಲ್ಲಾ ಕ್ರಮವಹಿಸಲು ಮುಂದಾಗಿದೆ ಎನ್ನುವ ಕುರಿತ ಒಂದು ವರದಿ ಇಲ್ಲಿದೆ. ಶಾಲೆ ತೊರೆದ …

Read More »

ಕೇಂದ್ರ ತಂಡಕ್ಕೆ ನಮ್ಮ ವಸ್ತುಸ್ಥಿತಿಯ ಮನವಿ ಮನವರಿಕೆಯಾಗಿದೆ- ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡಕ್ಕೆ ನಾವು ಪರಿಸ್ಥಿತಿಯನ್ನು ವಸ್ತುಸ್ಥಿತಿಯಿಂದ ವಿವರಿಸಿದ್ದು, ಅವರಿಗೆ ಮನವರಿಕೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.   ವಿಧಾನಸೌಧದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಬರ ಅಧ್ಯಯನ ತಂಡ ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲಿ ವರದಿ ಸಲ್ಲಿಸಲಿದೆ. ಎಷ್ಟು ಪರಿಹಾರ ಕೊಡುತ್ತಾರೆ ನೋಡೋಣ. ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದ ತಂಡ ಪರಿಸ್ಥಿತಿ ಅವಲೋಕನ ಮಾಡಿದೆ. ಕುಡಿಯುವ …

Read More »

ಯೋಗೇಶ್ ಗೌಡ ಹತ್ಯೆ ಪ್ರಕರಣ: ಹಿಂದಿನ ತನಿಖಾಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಬಂಧನಕ್ಕೆ ಹುಡುಕಾಟ

ಧಾರವಾಡ: ಧಾರವಾಡ ಜಿಲ್ಲಾ ಪಂ‌ಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಮತ್ತೆ ತನಿಖೆಗಿಳಿದಿದ್ದಾರೆ. ಪ್ರಕರಣದ ಹಿಂದಿನ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ ಮನೆಗೆ ಇಂದು ಬೆಳಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಆಗಮಿಸಿ ಶೋಧ ಕಾರ್ಯ ನಡೆಸಿದರು.   ಧಾರವಾಡ ಮಲಪ್ರಭಾ ನಗರದಲ್ಲಿರುವ ಚೆನ್ನಕೇಶವ ಟಿಂಗರಿಕರ್ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಆದ್ರೆ ಮನೆಯಲ್ಲಿ ಟಿಂಗರಿಕರ್ ಇಲ್ಲ ಎಂದು ಹೇಳಲಾಗುತ್ತಿದೆ. ಯೋಗೇಶ್ ಗೌಡ …

Read More »

ಗ್​ ಬಾಸ್​ ಮನೆಗೆ ಎಂಎಲ್​ಎ ಪ್ರದೀಪ್​ ಈಶ್ವರ್​ ಎಂಟ್ರಿ

ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್​ ಬಾಸ್​’.. ಕನ್ನಡದ ಜನಪ್ರಿಯ ರಿಯಾಲಿಟಿ ಶೋನ 10ನೇ ಸೀಸನ್​ ಭಾನುವಾರದಿಂದ ಆರಂಭವಾಗಿದೆ. ಕಿಚ್ಚ ಸುದೀಪ್​ ಸಾರಥ್ಯದ 100 ದಿನಗಳ ಕಾರ್ಯಕ್ರಮವು ನಿನ್ನೆ ಗ್ರ್ಯಾಂಡ್​​ ಲಾಂಚ್​ ಆಗಿದೆ. ಈ ವೇಳೆಯೇ ಕಲರ್​ಫುಲ್​ ಬಿಗ್​ ಬಾಸ್​ ಮನೆಗೆ ಸ್ಪರ್ಧಿಗಳು ಪ್ರವೇಶಿಸಿದ್ದಾರೆ. ಇದೀಗ ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್​ ಈಶ್ವರ್​ ದೊಡ್ಮನೆಗೆ ಅಚ್ಚರಿಯ …

Read More »

ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವು

ಬೆಂಗಳೂರು : ಬಿಎಂಟಿಸಿ ಬಸ್ ಹರಿದ ಪರಿಣಾಮ ಮೂರು ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಗಾರ್ವೇಭಾವಿಪಾಳ್ಯ ಜಂಕ್ಷನ್​ನಲ್ಲಿ ನಡೆದಿದೆ. ಆಯಾನ್ ಪಾಷಾ (3) ಮೃತ ಮಗು ಎಂದು ಗುರುತಿಸಲಾಗಿದೆ. ಆಯಾನ್​ ಪಾಷಾ ದೊಡ್ಡಮ್ಮ ರುಸ್ಮಾರೊಂದಿಗೆ ಭಾನುವಾರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ಇವರ​ ವಾಹನಕ್ಕೆ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗೆ ಬಿದ್ದಿದ್ದು, ಈ ವೇಳೆ …

Read More »

ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಅಜಿತ್ ಪವಾರ್ ಮತ್ತು ಇತರ ಏಳು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ತ್ವರಿತ ನಿರ್ಧಾರ ಕೈಗೊಳ್ಳಲು ಸೂಚನೆಗಳನ್ನು ನೀಡುವಂತೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು …

Read More »

ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕ‌ ಧಾರವಾಡ ಉಪನಗರ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …

Read More »

ಬೆಳಗಾವಿ: ಜಮೀನಿಗೆ ತೆರಳಿದ್ದ ರೈತ ಕರಡಿ ದಾಳಿಗೆ ಬಲಿ

ಬೆಳಗಾವಿ: ಕರಡಿ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ಘೋಶೆ (ಬಿಕೆ) ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಘೋಶೆ (ಬಿಕೆ) ಗ್ರಾಮದ ರೈತ ಭಿಕಾಜಿ ಈರಪ್ಪ ಮಿರಾಶಿ(63) ಎಂದು ಗುರುತಿಸಲಾಗಿದೆ.   ಶನಿವಾರ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ರೈತ ಭಿಕಾಜಿ ಮೇಲೆ ಕರಡಿ ದಾಳಿ ನಡೆಸಿತ್ತು. ಈ ವೇಳೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನರು ಕರಡಿಯನ್ನು ಓಡಿಸಲು ಯತ್ನಿಸಿದ್ದರು. ಆದರೆ, ಕರಡಿ ದಾಳಿಯನ್ನು ಮುಂದುವರೆಸಿ ರೈತನನ್ನು ಸುಮಾರು 2 …

Read More »

ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ದೂರು ದಾಖಲಿಸಿದ ಬಂಧಿಖಾನೆ ಡಿಐಜಿಪಿ

ಬೆಳಗಾವಿ : ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ, ಬೆಂಗಳೂರು ಕಾರಾಗೃಹ ಮತ್ತು ನನ್ನ ವಸತಿ ಗೃಹದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆಂದು ಬಂಧಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ. ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಿದ್ದಾರೆ. ಮೂರು ಪ್ರತ್ಯೇಕ ಮೊಬೈಲ್ ಸಂಖ್ಯೆಗಳಿಂದ ಭಾನುವಾರ(8 ಅಕ್ಟೋಬರ್) ಕರೆ ಮಾಡಿದ ವ್ಯಕ್ತಿಯೋರ್ವ ಹಿಂಡಲಗಾ ಕೇಂದ್ರ ಕಾರಾಗೃಹದ ಹಿರಿಯ ವೀಕ್ಷಕರಾದ ಜಗದೀಶ ಗಸ್ತಿ, …

Read More »

ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್​ ಇಂಜಿನಿಯರಿಂಗ್​ಗೆ ಮಹತ್ವದ ಸ್ಥಾನವಿದೆ.: ಸುಧಾಮೂರ್ತಿ

ಬೆಳಗಾವಿ: ಜಗತ್ತಿನ ಯಾವುದೇ ಮೂಲೆಗೆ ಹೋದರೂ ಸಿವಿಲ್​ ಇಂಜಿನಿಯರಿಂಗ್​ಗೆ ಮಹತ್ವದ ಸ್ಥಾನವಿದೆ. ಹಾಗಾಗಿ, ಸಿವಿಲ್​ ಇಂಜಿನಿಯರಿಂಗ್​ ಎಂಬುದು ಮದರ್​ ಆಫ್​ ಇಂಜಿನಿಯರ್ಸ್​ ಎಂದು ಇನ್ಫೋಸಿಸ್‌ ಫೌಂಡೇಷನ್​ ಮುಖ್ಯಸ್ಥೆ, ಪದ್ಮಭೂಷಣ ಪುರಸ್ಕೃತೆ ಡಾ.ಸುಧಾಮೂರ್ತಿ ಹೇಳಿದರು. ಬೆಳಗಾವಿಯ ಕೆಎಲ್​ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ನಡೆದ ‘ದಿ ಇನಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್’ ವತಿಯಿಂದ ಹಮ್ಮಿಕೊಂಡಿದ್ದ ಸಿವಿಲ್​ ಇಂಜಿನಿಯರ್ಸ್​ 38ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಿವಿಲ್​ ಇಂಜಿನಿಯರಿಂಗ್​ ಕುರಿತು ಬಣ್ಣಿಸಿದರು. “ಹಣವೇ ಎಲ್ಲ ಖುಷಿ …

Read More »