ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. …
Read More »ಬೆಳಗಾವಿ ಪಾಲಿಕೆ ಅಧಿಕಾರಿಗಳಿಗೆ ಹೈಕೋರ್ಟ್ ‘ಪಾಠ’
ಬೆಳಗಾವಿ: ₹20 ಕೋಟಿ ತಲೆದಂಡದಿಂದ ತಪ್ಪಿಸಿಕೊಳ್ಳಲು, ಕಾಮಗಾರಿಗೆ ಬಳಸಿಕೊಂಡ ಭೂಮಿಯನ್ನು ಮರಳಿ ನೀಡಲು ಮಹಾನಗರ ಪಾಲಿಕೆ ಮುಂದಾಗಿದೆ. ಇದಕ್ಕೆ ಭೂ ಮಾಲೀಕರೂ ಒಪ್ಪಿಕೊಂಡಿದ್ದಾರೆ. ಇದರ ಮೂಲಕ ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳೂ ಕೂಡ ಹೊಸ ‘ಪಾಠ’ ಕಲಿತಂತಾಗಿದೆ. ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ಈ ಕುರಿತು ಬುಧವಾರ ನಡೆದ ವಿಚಾರಣೆ ವೇಳೆ ಎರಡೂ ಕಡೆಯ ಕಕ್ಷಿಗಾರರು ಒಪ್ಪಿಗೆ ಸೂಚಿಸಿದರು. ಈ ವ್ಯಾಜ್ಯ ಗುರುವಾರ (ಸೆ.12) ನಿಗದಿಯಾಗಿತ್ತು. ಆದರೆ, ಒಂದು ದಿನ ಮುಂಚಿತವಾಗಿಯೇ …
Read More »ಕಿತ್ತೂರು ಉತ್ಸವ’ ಬೆಳಗಾವಿಯಲ್ಲಿ ಒಂದು ದಿನ ಕಾರ್ಯಕ್ರಮ
ಚನ್ನಮ್ಮನ ಕಿತ್ತೂರು: ‘ಅ. 23 ರಿಂದ 25 ರವರೆಗೆ ಆಚರಿಸುವ ‘ರಾಣಿ ಚನ್ನಮ್ಮನ ಕಿತ್ತೂರು ಉತ್ಸವ’ದ ಅಂಗವಾಗಿ ಬೆಳಗಾವಿ ನಗರದವರ ಬೇಡಿಕೆಯಂತೆ ಒಂದು ದಿನ ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಮಾಹಿತಿ ನೀಡಿದರು. ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಕಿತ್ತೂರಲ್ಲಿಯೂ ಮೂರು ದಿನ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೇರಿ ವಿವಿಧ ಕ್ರೀಡಾಕೂಟಗಳು ನಡೆಯಲಿವೆ’ ಎಂದರು. ‘ಬಾಲಿವುಡ್ ಕಲಾವಿದರನ್ನು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಮಂತ್ರಿಸುವ ಚಿಂತನೆ ನಡೆದಿದೆ. …
Read More »ಮನೆಯಲ್ಲಿ ವನ್ಯಜೀವಿ ಮಾಂಸ, ಜಿಂಕೆ ಕೊಂಬು ಪತ್ತೆ: ಇಬ್ಬರ ಬಂಧನ
ಖಾನಾಪುರ: ತಾಲ್ಲೂಕಿನ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ಅರಣ್ಯ ಅಧಿಕಾರಿಗಳು ಗುರುವಾರ ಪತ್ತೆಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಜಾಂಬೇಗಾಳಿ ಗ್ರಾಮದ ಮಹ್ಮದಲಿ ಹಲಸಿಕರ, ಮೌಲಾಲಿ ಹಲಸಿಕರ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮತ್ತು ದಾಳಿ ಸಂದರ್ಭದಲ್ಲಿ ದೊರೆತ …
Read More »ದರ್ಶನ್ ನಡಿಗೆ ನೋಡಿ ‘ಹೌದು ಹುಲಿಯಾ’ ಎಂದ ಫ್ಯಾನ್ಸ್!
ದರ್ಶನ್ ಜೈಲಿನಲ್ಲಿ ಇದ್ದರೂ ಕೂಡ ದುರಹಂಕಾರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದರೂ ಕೂಡ ದಾಸನ ದಿಮಾಕು ಮಾತ್ರ ಕೊಂಚವೂ ಇಳಿಕೆಯಾದಂತೆ ಕಾಣಿಸುತ್ತಿಲ್ಲ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯವಾಗಿ ಕೈ ಸನ್ನೆ ಮಾಡಿದ್ದು ಕ್ಯಾಮಾರದಲ್ಲಿ ಸೆರೆಯಾಗಿದೆ. ಹೌದು… ಕಳೆದ ದಿನ (ಸೆಪ್ಟೆಂಬರ್ 12) ಚಾರ್ಜ್‌ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. …
Read More »ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : `ಧನ್ಯಶ್ರೀ’ ಯೋಜನೆಯಡಿ ಸ್ವ-ಉದ್ಯೋಗಕ್ಕೆ ಸಿಗಲಿದೆ 30,000 ರೂ. ಸಬ್ಸಿಡಿ!
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ವ-ಉದ್ಯೋಗ ಕೈಗೊಳ್ಳಲು ಸರ್ಕಾರದಿಂದ 30,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ. ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಧನ್ಯಶ್ರೀ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ. ಧನ್ಯಶ್ರೀ ಯೋಜನೆ: ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ …
Read More »ರಾಜ್ಯದ `SSLC’ ವಿದ್ಯಾರ್ಥಿಗಳೇ ಗಮನಿಸಿ : `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಪ್ರಕಟ
ಬೆಂಗಳೂರು : 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ …
Read More »ಲವ್ ಜಿಹಾದ್ ವಿರುದ್ಧ ರಣಕಹಳೆ; ಗಣೇಶೋತ್ಸವದಲ್ಲಿ ಸಾಮೂಹಿಕ ಆಣೆ ಪ್ರಮಾಣ
ಗದಗ: ಹಿಂದೂ (Hindu) ಯುವತಿಯರನ್ನು ಮುಸ್ಲಿಂ (Muslim) ಯುವಕರು ಪ್ರೀತಿಸಿ ಮತಾಂತರಿಸಿ ಲವ್ ಜಿಹಾದ್ (Love Jihad) ನಡೆಸುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಹೀಗಾಗಿ ಲವ್ ಜಿಹಾದ್ ಅನ್ನ ತಡೆಯಬೇಕು (Preventing Love Jihad) ಎಂಬ ಉದ್ದೇಶದಿಂದ ಕೆಲ ರಾಜ್ಯ ಸರ್ಕಾರಗಳು, ಬಿಜೆಪಿ, ಆರ್ಎಸ್ಎಸ್ ಕೂಡ ಹಲವು ಬಾರಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನ ನಾವು ನೋಡಿದ್ದೇವೆ. ಈಗ ರಾಜ್ಯದಲ್ಲೂ ಇಂತದ್ದೇ ಒಂದು ಜಾಗೃತಿ (Awareness) ಕಾರ್ಯಕ್ರಮ …
Read More »ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನ!
ಚಿಕ್ಕಮಗಳೂರು ಸೆಪ್ಟೆಂಬರ್ 13: ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕುವಿನಿಂದ ಹಿರಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿಬ್ಬಂದಿಯಿಂದಲೇ ಚಾಕುವಿನಿಂದ ದಾಳಿ ನಡೆದಿದ್ದು ಸ್ವಲ್ಪದರಲ್ಲೇ ಕೆಎಸ್‌ಆರ್‌ಟಿಸಿ ಡಿಸಿ ಪಾರಾಗಿದ್ದಾರೆ. ಅಷ್ಟಕ್ಕೂ ಹಲ್ಲೆಗೆ ಕಾರಣ ಏನು? ಹಲ್ಲೆಯಾಗಿದ್ದು ಎಲ್ಲಿ ಅನ್ನೋದಾದರೆ… ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆ ಈ ಘಟನೆ ನಡೆದಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬುವವ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಡಿಸಿ ಈ ಹಿಂದೆ ರಿತೇಶ್ ಹಾಜರಾತಿ ಸರಿಯಿಲ್ಲ ಎಂದು …
Read More »ಟವಲ್ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್. ರಾಜಣ್ಣ ಪ್ರಶ್ನೆ
ಹಾಸನ: ಭೂತಕಾಲ, ವರ್ತಮಾನಕಾಲ, ಭವಿಷ್ಯತ್ ಕಾಲ ಇದೆ. ಭವಿಷ್ಯ ಏನೆಂದು ಯಾರಿಗೆ ಗೊತ್ತಿದೆ?, ಸಿಎಂ ತೀರ್ಮಾನ ಮಾಡೋದು ಹೈಕಮಾಂಡ್, ಆಸೆ ಪಡೋದು ತಪ್ಪಲ್ಲ, ಆದರೆ ದುರಾಸೆ ತಪ್ಪು. ಶಾಸಕರ ಬೆಂಬಲ ಇರೋವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಖಾಲಿ ಜಾಗ ಇದ್ದರೆ ಟವಲ್ ಹಾಕಬಹುದು. ಜಾಗವೇ ಖಾಲಿ ಇಲ್ಲ, …
Read More »