Breaking News

ರಾಜಕೀಯ

ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ದಾಳಿ

ರಾಯಚೂರು ಜುಲೈ 10: ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸದ ಮೇಲೆ ಬೆಳಿಗ್ಗೆ 7 ಗಂಟೆಗೆ ದಾಳಿ ಮಾಡಿದ್ದು, ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮಂಗಳವಾರ ಎಸ್ ಐಟಿ ಅಧಿಕಾರಿಗಳು ದದ್ದಲ್‌ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇವತ್ತು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಇದೇ ಅವಧಿಯಲ್ಲೇ 18 ದಾಳಿ ನಡೆಸಿರುವ ಮಾಹಿತಿ ಇದೆ. ಜೊತೆಗೆ …

Read More »

ಸತತ ಏಳು ಬಾರಿ ಸಂಸದರಾಗಿ ಆಯ್ಕೆಸಂಪುಟದಲ್ಲಿ ಸಿಗದ ಸಚಿವ ಸ್ಥಾನಜಿಗಜಿಣಗಿ ತೀವ್ರ ಅಸಮಾಧಾನ

ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಂಗಳವಾರದಂದು ನಡೆದ ಸಂಸದರ ಕಚೇರಿಯ ಪೂಜಾ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾಗುವ ಸಂದರ್ಭದಲ್ಲಿಯೇ ನನ್ನ ಅನೇಕ ಸ್ನೇಹಿತರು ಆ ಪಕ್ಷ ದಲಿತ ವಿರೋಧಿ. ಸೇರ್ಪಡೆಯಾಗುವುದು ಬೇಡ ಎಂದು ಹೇಳಿದ್ದರು. ಇಷ್ಟಾದರೂ ನಾನು ಆ …

Read More »

ರಾಜ್ಯದಲ್ಲಿ ಮತ್ತೆ ಮೂರು ವೈದ್ಯ ಕಾಲೇಜು ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆ ಎಸ್‌ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಕಾಲೇಜು ಆರಂಭಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂ ಸಿ) ಅನುಮತಿ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಮೂರೂ ಕಾಲೇಜುಗಳು ಆರಂಭವಾಗಲಿವೆ. …

Read More »

ಬೆಳೆ ವಿಮಾ‌ ಯೋಜನೆಗೆ ಅರ್ಜಿ‌ ಆಹ್ವಾನ

ಹೊಸಕೋಟೆ: 2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅಡಿಯಲ್ಲಿ ಹೊಸಕೋಟೆ ತಾಲ್ಲೂಕಿಗೆ ಮಾವು ಮತ್ತು ದ್ರಾಕ್ಷಿ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ. ರೈತ ಬಾಂಧವರು‌ ಸ್ವಇಚ್ಛೆಯಿಂದ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕಾ ಇಲಾಖೆ ತಿಳಿಸಿದೆ. ಪ್ರತಿ ಹೆಕ್ಟೇರ್ ಮಾವಿಗೆ ₹80 ಸಾವಿರ, ದ್ರಾಕ್ಷಿಗೆ ₹2.80 ಲಕ್ಷ ವಿಮಾ ಮೊತ್ತವಾಗಿದ್ದು, ಅದರಲ್ಲಿ ಶೇ 5ರಷ್ಟು ರೈತರು ವಂತಿಗೆ ಪಾವತಿಸಬೇಕಿದ್ದು, ಅದರಂತೆ ಮಾವಿಗೆ ₹5 ಸಾವಿರ, ದ್ರಾಕ್ಷಿಗೆ ₹ 14 …

Read More »

ಬೆಳಗಾವಿ | ಬಿಟ್ ಕಾಯಿನ್ ಪ್ರಕರಣ: ದೂರುದಾರ ಕೈದಿಯ ಹೇಳಿಕೆ ದಾಖಲು

ಬೆಳಗಾವಿ: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಹೇಳಿಕೆ ಪಡೆಯಲು, ಎಸ್.ಐ.ಟಿ‌ ತಂಡವು ಇಲ್ಲಿ‌ನ ಕೇಂದ್ರ ಕಾರಾಗೃಹಕ್ಕೆ ಭೇಟಿ‌ ನೀಡಿತು ಎಂದು ಮೂಲಗಳು ಖಚಿತಪಡಿಸಿವೆ. ‘ಈ ಹಗರಣದಲ್ಲಿ ಬಂದಿಖಾನೆ ಇಲಾಖೆ ಡಿಐಜಿ ಟಿ.ಪಿ. ಶೇಷ ಭಾಗಿಯಾದ ಬಗ್ಗೆ ನಾಗೇಂದ್ರ ಅಲಿಯಾಸ್ ನಾಗ ಎಂಬ ಕೈದಿ ಎಡಿಜಿಪಿ ಅವರಿಗೆ ಜೂನ್ 26ರಂದು ದೂರು ನೀಡಿದ್ದ.‌ ಈ ಕೈದಿ ಈಗ ಇಲ್ಲಿನ‌ ಹಿಂಡಲಗಾ ಜೈಲಿನಲ್ಲಿದ್ದ ಕಾರಣ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು. ದೂರಿನ ಅರ್ಜಿ ಇಟ್ಟುಕೊಂಡು …

Read More »

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ.

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ. ಇಲ್ಲಿನ ಜನರು ಪಕ್ಕದ ಕಲಾದಗಿ, ಕಾಡರಕೊಪ್ಪ, ಲೋಕಾಪುರಕ್ಕೆ ತೆರಳಲು ನಿತ್ಯ ಯಾತನೆ ಅನುಭವಿಸುವಂತಾಗಿದೆ. ನಂದಿಹಾಳದಿಂದ ಅಕ್ಕಪಕ್ಕದ ಗ್ರಾಮಗಳು ಮತ್ತು ಹೊಲಗಳಿಗೆ ತೆರಳಲು ಇರುವುದು ಇದೊಂದೇ ರಸ್ತೆ. ಆದರೆ, ಜಿಟಿಜಿಟಿ ಮಳೆಯಾದರೂ ಅದು ಕೆಸರುಮಯವಾಗಿ ಮಾರ್ಪಡುತ್ತದೆ. ಅಪಾರ ಪ್ರಮಾಣದಲ್ಲಿ ಮಳೆನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತದೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಹೈರಾಣಾಗಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡದ …

Read More »

ಹುಬ್ಬಳ್ಳಿ: ಆಗದ ವಲಯ ವರ್ಗಾವಣೆ; ಶಿಕ್ಷಕರಿಗೆ ನಿರಾಸೆ

ಹುಬ್ಬಳ್ಳಿ: ವಲಯ ವರ್ಗಾವಣೆ ನಡೆಸದಿರಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿರುವುದು ಬಹುತೇಕ ಶಿಕ್ಷಕರಲ್ಲಿ ನಿರಾಸೆ ಮೂಡಿಸಿದೆ. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ವರ್ಗಾವಣೆ ಆಗುವ ಅವರ ನಿರೀಕ್ಷೆ ಹುಸಿಯಾಗಿದೆ. ಕರ್ನಾಟಕ ಶಿಕ್ಷಕರ ವರ್ಗಾವಣೆ ಮತ್ತು ನಿಯಂತ್ರಣ ಕಾಯ್ದೆ (ತಿದ್ದುಪಡಿ)-2022ರ ಪ್ರಕಾರ, ಹೆಚ್ಚುವರಿ ವರ್ಗಾವಣೆ ನಂತರದ ವರ್ಷದಲ್ಲಿ ವಲಯ (ಕಡ್ಡಾಯ) ವರ್ಗಾವಣೆ ಮಾಡಬೇಕು. ಈ ಪ್ರಕ್ರಿಯೆಯಲ್ಲಿ 10 ವರ್ಷಕ್ಕೂ ಹೆಚ್ಚು ಸಮಯದಿಂದ ನಗರ ಪ್ರದೇಶದಲ್ಲಿ (ಎ-ವಲಯ) ಕೆಲಸ ಮಾಡುತ್ತಿರುವ ಶಿಕ್ಷಕರನ್ನು ಗ್ರಾಮೀಣ (ಸಿ-ವಲಯ) …

Read More »

ಅವ್ಯವಸ್ಥೆಯ ಆಗರವಾದ ಕೋಟೆವಾಡಾ ರುದ್ರಭೂಮಿ

ಅಂಕೋಲಾ: ಪಟ್ಟಣದ ಕೋಟೆವಾಡದಲ್ಲಿರುವ ಹಿಂದೂ ರುದ್ರ ಭೂಮಿ ನಿರ್ವಹಣೆಯ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದ್ದು ಮಳೆಗಾಲದಲ್ಲಿ ಚಿತೆ ದಹಿಸುವುದೇ ದೊಡ್ಡ ಚಿಂತೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪಟ್ಟಣದ ಸುತ್ತ ಮುತ್ತಲಿನ ವ್ಯಾಪ್ತಿಯ ಬಹುತೇಕ ಸಮಾಜದ ಜನರು ಶವ ಸಂಸ್ಕಾರಕ್ಕೆ ಬಳಕೆ ಮಾಡುವ ಈ ರುದ್ರಭೂಮಿಯಲ್ಲಿ ಶವ ಸಂಸ್ಕಾರ ನಡೆಸುವ ಸ್ಥಳದಲ್ಲಿ ಶೆಡ್‍ನ ಚಾವಣಿ ಮಳೆ-ಗಾಳಿಗೆ ಹಾರಿ ಹೋಗಿದ್ದು, ಮಳೆಯ ನೀರು ಶವ ದಹಿಸುವ ತೊಟ್ಟಿಯಲ್ಲೇ ನೇರವಾಗಿ ಸುರಿಯುತ್ತಿದೆ. ಇದರಿಂದ ಅಂತಿಮ ಸಂಸ್ಕಾರ …

Read More »

ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ

ಕೋಲ್ಕತ್ತ: 2024-25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌-ಜೂನ್‌) ಪೂರ್ವ ರೈಲ್ವೆಯು ₹953 ಕೋಟಿ ವರಮಾನ ಗಳಿಸಿದೆ ಎಂದು ರೈಲ್ವೆ ವಲಯದ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಪ್ರಯಾಣಿಕರ ಸೇವಾ ವಿಭಾಗದಿಂದ ₹866 ಕೋಟಿ ಆದಾಯ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 9.97ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. ಈ ತ್ರೈಮಾಸಿಕದಲ್ಲಿ ಒಟ್ಟು 2.87 ಲಕ್ಷ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದು, ಶೇ 3.36ರಷ್ಟು ಏರಿಕೆಯಾಗಿದೆ ಎಂದು …

Read More »

ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.

ನವದೆಹಲಿ: ಅಂಗವಿಕಲ ವ್ಯಕ್ತಿಗಳ ಕಾಯ್ದೆಯ (ಪಿಡಬ್ಲ್ಯುಡಿ) ಪರಿಣಾಮಕಾರಿಯಾಗಿ ಜಾರಿ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ. 2009ರಲ್ಲಿ ನಾಗರಿಕ ಸೇವಾ ಪರೀಕ್ಷೆ ತೇರ್ಗಡೆಯಾಗಿರುವ, ಶೇ 100ರಷ್ಟು ಅಂಧತ್ವ ಹೊಂದಿರುವ ಅಭ್ಯರ್ಥಿಯನ್ನು ಮೂರು ತಿಂಗಳ ಒಳಗಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆಯೂ ಸರ್ಕಾರಕ್ಕೆ ಆದೇಶಿಸಿತು.   1995ರ ಪಿಡಬ್ಲ್ಯುಡಿ ಕಾಯ್ದೆಯ ನಿಬಂಧನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ‘ಎದ್ದು ಕಾಣುವಂತಹ ಕರ್ತವ್ಯಲೋಪ’ …

Read More »