Breaking News
Home / ರಾಜಕೀಯ (page 300)

ರಾಜಕೀಯ

ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಹೇಳಿಕೆ ತಪ್ಪು: ಶಾಸಕ ಬಸವರಾಜ ರಾಯರೆಡ್ಡಿ

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದರು. ವಿಧಾನಸೌಧದ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪನವರು ಮಾಹಿತಿ ಕೊರತೆಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದರು. ಅಧಿಕಾರಿಗಳನ್ನು ಸರ್ಕಾರದಲ್ಲಿ ಕಡೆಗಣಿಸಲಾಗಿದೆ. ಲಿಂಗಾಯತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂಬ …

Read More »

ಖರ್ಚಿಗೆ ಹಣವಿಲ್ಲವೆಂದು ಮೊಬೈಲ್ ಶಾಪ್​ ದೋಚಿದ್ದ ಯುವಕ

ಬೆಂಗಳೂರು : ಖರ್ಚಿಗೆ ಕಾಸಿಲ್ಲವೆಂದು ಮೊಬೈಲ್ ಶಾಪ್​ ದೋಚಿದ್ದ ಯುವಕರನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಭು (21), ಮೌಲೇಶ್ (19) ಹಾಗೂ ಅಜಯ್ (21) ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 50 ಲಕ್ಷ ಮೌಲ್ಯದ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಎಚ್‌ಎಸ್‌ಆರ್ ಲೇಔಟ್​ನ ನಿವಾಸಿಗಳಾಗಿರುವ ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಆರೋಪಿಗಳ ಪೈಕಿ ಪ್ರಭು, ಇತ್ತೀಚಿಗೆ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಗ್ಯಾಜೆಟ್ಸ್ ಕ್ಲಬ್ ಮೊಬೈಲ್ ಅಂಗಡಿಯಲ್ಲಿ …

Read More »

ರಾಯಚೂರಿನಲ್ಲಿ ಬಿಎಡ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ರಾಯಚೂರು, ಅಕ್ಟೋಬರ್​ 3: ರಾಯಚೂರು ನಗರದ ರೈಲ್ವೆ ನಿಲ್ದಾಣದ ಬಳಿ ಬಿಎಡ್ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಹನುಮಂತ (23) ಎಂಬ ವಿದ್ಯಾರ್ಥಿ ರೈಲ್ವೆ ಟ್ರಾಕ್ ಮಧ್ಯೆ ಹೆಣವಾಗಿ ಪತ್ತೆಯಾಗಿದ್ದಾನೆ. ಮೃತ ಹನುಮಂತ, ಮಾನ್ವಿ ತಾಲೂಕಿನ ಬೈಲ್ ಮರ್ಚಡ್ ಗ್ರಾಮದ ನಿವಾಸಿ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದ ಯುವಕ. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಬಿಎಡ್ ಎರಡನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡ್ತಿದ್ದ. ಹನುಮಂತ, ನಿನ್ನೆ ಸೋಮವಾರ ತಡ ರಾತ್ರಿ …

Read More »

ಕುರುಬ ಸಮುದಾಯಕ್ಕೆ 5 ಸಾವಿರ ಕೋಟಿ ಅನುದಾನದ ಗ್ಯಾರಂಟಿ ಕೊಡಿ: ಬಂಡೆಪ್ಪ ಕಾಶಂಪುರ

ಬೆಳಗಾವಿ, ಅ.3: ಕುರುಬ ಸಮುದಾಯಕ್ಕೆ ಐದು ಸಾವಿರ ಕೋಟಿ ಕುರಿಗಾರರಿಗೆ ಅನುದಾನದ ಗ್ಯಾರಂಟಿ ಕೊಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ (Bandeppa Kashempur) ಅವರು ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಸಂಘಟನೆ ವತಿಯಿಂದ ನಡೆದ ಕುರುಬ ಸಮುದಾಯದ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಎರಡು ವರ್ಷದಲ್ಲಿ ಐದರಿಂದ ಹತ್ತು ಪಟ್ಟು ಸರ್ಕಾರಕ್ಕೆ ಕೊಡುವ ಶಕ್ತಿ ನಮ್ಮ ಸಮಾಜಕ್ಕಿದೆ ಎಂದರು. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಕೊಟ್ಟಿದ್ದು ಸ್ವಾಗತ. ಈ ವೇಳೆ ಕುರುಬ …

Read More »

ಕನ್ನಡದ ಬಿಗ್​ ಬಾಸ್​ ಸೀಸನ್​ 10ಕ್ಕೆ ‘ಚಾರ್ಲಿ’ ಶ್ವಾನ ಸೇರಿದಂತೆ 17 ಸ್ಪರ್ಧಿಗಳು ಎಂಟ್ರಿಯಾಗಲಿದ್ದಾರೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ‘ಬಿಗ್​ ಬಾಸ್’​ ಕೂಡ ಒಂದು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಈವರೆಗೆ ಒಂಬತ್ತು ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್​ ಬಾಸ್​ ಇದೀಗ ಮತ್ತೆ ಬಂದಿದೆ. ಬಿಗ್​ ಬಾಸ್​ 10ನೇ ಸೀಸನ್​ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದೆ. ಈ ಹಿಂದಿನ ಎಲ್ಲಾ ಸೀಸನ್​ಗಿಂತ ಈ ಬಾರಿಯ ಬಿಗ್​ ಬಾಸ್​ ಸಂಥಿಂಗ್​ ಸ್ಪೆಷಲ್​ ಆಗಿರಲಿದೆ. ಸದ್ಯ ಪ್ರೋಮೋದಿಂದಲೇ ಕುತೂಹಲ …

Read More »

ಪಂಚಾಯಿತಿಗೊಂದು ಮದ್ಯದಂಗಡಿ: ತಮ್ಮದೇ ಸರ್ಕಾರದ ಈ ನಡೆಗೆ ಸಿಡಿದೆದ್ದ ಕಾಂಗ್ರೆಸ್ ಶಾಸಕ

ಕಲಬುರಗಿ, (ಅಕ್ಟೋಬರ್ 03): ಗ್ಯಾರಂಟಿ ಯೋಜನೆಗಳ ಆರ್ಥಿಕ ಭಾರದಿಂದ ನಲುಗುತ್ತಿರುವ ಸಿದ್ದರಾಮಯ್ಯನವರ (Siddaramaiah)  ಕಾಂಗ್ರೆಸ್ ಸರ್ಕಾರ, ಅಬಕಾರಿ ಇಲಾಖೆ ಮೂಲದಿಂದ ಹೆಚ್ಚಿನ ಆದಾಯ ಗಳಿಸಲು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್‌ ಹಾಗೂ ಸೂಪರ್‌ ಮಾರ್ಕೆಟ್‌ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ(liquor shops)  ಪರವಾನಗಿ ನೀಡಲು ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖುದ್ದು ಮಹಿಳೆಯರೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಖುದ್ದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್, …

Read More »

ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಸಾವು

ನಾಂದೇಡ್ (ಮಹಾರಾಷ್ಟ್ರ): ಅಕ್ಟೋಬರ್ 1 ರಂದು ನಾಂದೇಡ್‌ನಲ್ಲಿರುವ ಡಾ. ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಮತ್ತೆ ಅಕ್ಟೋಬರ್ 2 ರಂದು ಇದೇ ಆಸ್ಪತ್ರೆಯಲ್ಲಿ 7 ರೋಗಿಗಳು ಮೃತಪಟ್ಟಿದ್ದಾರೆ. ಪ್ರಸ್ತುತ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಂದೇಡ್‌ನ ಡಾ. ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನದಲ್ಲಿ ರೋಗಿಗಳ ಹೆಚ್ಚಳವಾಗಿದೆ. ಆಸ್ಪತ್ರೆಯಲ್ಲಿ 76 ರೋಗಿಗಳ ಸ್ಥಿತಿ ಗಂಭೀರ: ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಪ್ರಸ್ತುತ …

Read More »

ಈರುಳ್ಳಿ ವ್ಯಾಪಾರಿಗಳ 13 ದಿನಗಳ ಮುಷ್ಕರ ಅಂತ್ಯ: ಹರಾಜು ಪುನಾರಂಭ

ನಾಸಿಕ್ (ಮಹಾರಾಷ್ಟ್ರ) : ಕಳೆದ 13 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಇಲ್ಲಿನ ಈರುಳ್ಳಿ ಸಗಟು ವ್ಯಾಪಾರಿಗಳು ಸೋಮವಾರ ತಡರಾತ್ರಿ ಕೊನೆಗೂ ಹಿಂಪಡೆದಿದ್ದಾರೆ. ನವರಾತ್ರಿ ಮತ್ತು ದೀಪಾವಳಿ ಹಬ್ಬಗಳು ಹತ್ತಿರವಿರುವ ಈ ಸಮಯದಲ್ಲಿ ಮುಷ್ಕರ ಕೊನೆಗೊಂಡಿದ್ದು ಸಮಾಧಾನದ ವಿಷಯವಾಗಿದೆ. ಮಂಗಳವಾರ ಬೆಳಗ್ಗೆ ಈರುಳ್ಳಿ ತುಂಬಿದ ಲಾರಿಗಳು ಇಲ್ಲಿನ ಎಪಿಎಂಸಿಗೆ ಆಗಮಿಸಿದ್ದು, ಹರಾಜು ಪುನಾರಂಭಗೊಂಡಿದೆ. ಮುಷ್ಕರ ಹಿಂತೆಗೆದುಕೊಂಡ ಸುದ್ದಿ ಹರಡುತ್ತಿದ್ದಂತೆಯೇ ಏಷ್ಯಾದ ಅತಿದೊಡ್ಡ ಈರುಳ್ಳಿ ಮಾರುಕಟ್ಟೆ ಯಾರ್ಡ್ ಲಾಸಲ್ಗಾಂವ್ ಸೇರಿದಂತೆ ಇತರ ಮಂಡಿಗಳಿಗೆ ಈರುಳ್ಳಿ …

Read More »

ನಮ್ಮ ಅಣ್ಣನ ಸಿನಿಮಾ ನೋಡಿ ಅಂತ ಎಲ್ಲ ತಾಯಂದಿರಲ್ಲಿ ಮನವಿ ಮಾಡ್ತೀನಿ’: ಧ್ರುವ ಸರ್ಜಾ

ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರು ಅಭಿನಯಿಸಿದ ಕೊನೇ ಸಿನಿಮಾ ‘ರಾಜಮಾರ್ತಾಂಡ’ ಈಗ ಬಿಡುಗಡೆ ಆಗುತ್ತಿದೆ. ಅಕ್ಟೋಬರ್​ 6ರಂದು ಈ ಚಿತ್ರ ತೆರೆಕಾಣಲಿದೆ. ಆ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಗಿದ್ದು, ಅದರಲ್ಲಿ ಧ್ರುವ ಸರ್ಜಾ ಭಾಗಿ ಆಗಿದ್ದಾರೆ. ಚಿರು ನಿಧನದ ಬಳಿಕ ಈ ಸಿನಿಮಾಗೆ ಧ್ರುವ ಅವರೇ ಡಬ್ಬಿಂಗ್​ ಮಾಡಿಕೊಟ್ಟರು. ಈಗ ‘ರಾಜಮಾರ್ತಾಂಡ’ (Rajamarthanda) ಸಿನಿಮಾದ ಕೆಲಸಗಳು ಪೂರ್ಣಗೊಂಡಿವೆ. ಪ್ರೇಕ್ಷಕರ ಎದುರು ಬರುತ್ತಿರುವ ಈ ಸಂದರ್ಭದಲ್ಲಿ ಎಲ್ಲ ಪ್ರೇಕ್ಷಕರಿಗೂ ಧ್ರುವ ಸರ್ಜಾ ಒಂದು ಮನವಿ ಮಾಡಿಕೊಂಡಿದ್ದಾರೆ. …

Read More »

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ, ರೈತ ಸ್ಥಳದಲ್ಲೇ ಸಾವು

ಮೈಸೂರು, ಅ.02: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರಿದಿದೆ (Tiger Attack). ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ (Death). ರೈತ ಗಣೇಶ(55) ಮೃತ ದುರ್ದೈವಿ. ದನ ಮೇಯಿಸುತ್ತಿದ್ದಾಗಲೇ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಅರ್ಧ ತಿಂದು ಹುಲಿ ಬಿಟ್ಟುಹೋಗಿದೆ. ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ …

Read More »