Breaking News
Home / ರಾಜಕೀಯ (page 310)

ರಾಜಕೀಯ

ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಜನತಾ ದರ್ಶನ… :ಸತೀಶ್ ಜಾರಕಿಹೊಳಿ

ಮಂಗಳವಾರ ಬೆಳಗಾವಿಯಲ್ಲಿ ಜನತಾ ದರ್ಶನ…ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿ ಪರಿಹರಿಸಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಅವರು ಮಂಗಳವಾರ(ಸೆ.26) ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ “ಜನತಾ ದರ್ಶನ” ನಡೆಸಲಿದ್ದಾರೆ.

Read More »

ಬೆಳಗಾವಿ ಮತ್ತು ಖಾನಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಅನ್ನದಾತರ ಪ್ರತಿಭಟನೆ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಮಳೆ ಅಭಾವದಿಂದ ಸಾಲ ಸೂಲ ಮಾಡಿ ಬೆಳೆ ಬಿತ್ತಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವ ಬೆಳಗಾವಿ ಮತ್ತು ಖಾನಾಪುರವನ್ನು ಪಟ್ಟಿಗೆ ಸೇರಿಸಿ, ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದಿಂದ ಪ್ರತಿಭಟನೆ ನಡೆಯಿತು. ಹಾಳಾದ ಭತ್ತ, ಆಲೂಗಡ್ಡೆ, ಗೆಣಸು ಸೇರಿ ಇನ್ನಿತರ ಬೆಳೆಗಳನ್ನು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆ ಮೂಲಕ …

Read More »

ಹೆಚ್​ ಡಿ ಕುಮಾರಸ್ವಾಮಿ ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ತೆರಳಿ ಕಾಲಿಗೆ ಬಿದ್ದು ಬಂದಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಮಾಜಿ ಮುಖ್ಯಮಂತ್ರಿಹೆಚ್​ ಡಿಕುಮಾರಸ್ವಾಮಿ ಅವರು ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ಹೋಗಿ ಬಿಜೆಪಿಯ ಎಲ್ಲಾ ಮುಖಂಡರಿಗೆ ಕಾಲಿಗೆ ಬಿದ್ದು ಬಂದಿದ್ದಾರೆ ಎಂದು ಚಿಂಚೋಳಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಮಾಡಿದ್ದಾರೆ. ರಾಜ್ಯದ ಹಿತದೃಷ್ಠಿಯಿಂದಲ್ಲ, ಪ್ರಧಾನಿ ಬಳಿ ಅವರ ಅಸ್ತಿತ್ವ ಉಳಿಸಿಕೊಳ್ಳಲು ಹೋಗಿದ್ದಾರಾ? ಅಥವಾ ಅವರು ಕಾವೇರಿ ವಿಚಾರ ಚರ್ಚೆ ಮಾಡಿದ್ರಾ? ಎಂದು ಪ್ರಶ್ನಿಸಿದರು. ಹೋಮ್​ ಮಿನಿಸ್ಟರ್​ ಹತ್ತಿರ ಹೋದ್ರು. ಜೆ ಪಿ ನಡ್ಡಾ ಅವರ ಹತ್ತಿರ ಹೋದ್ರು. …

Read More »

ಕಾವೇರಿ ಕಿಚ್ಚು: ಎರಡು ಬಣಗಳ ನಡುವೆ ಮೂಡದ ಒಮ್ಮತ… ನಾಳೆ ಬೆಂಗಳೂರು, ಸೆ.29ಕ್ಕೆ ಕರ್ನಾಟಕ ಬಂದ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ನಾಳಿನ ಬೆಂಗಳೂರು ಬಂದ್ ಜೊತೆ ಸೆ.29ರಂದು ಕರ್ನಾಟಕ ಬಂದ್ ನಡೆಯಲಿದೆ. ಈ‌ ಮೂಲಕ ಕನ್ನಡ ಹಾಗೂ ರೈತಪರ ಸಂಘಟನೆಗಳು ಸೇರಿ ವಿವಿಧ ಸಂಘ ಸಂಸ್ಥೆಗಳು ಒಂದೇ ವಾರದಲ್ಲಿ ಎರಡು ಬಂದ್ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಿವೆ. ಕಾವೇರಿ ಕಣಿವೆಯಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕೆಆರ್​​ಎಸ್ ಜಲಾಶಯ ಸೇರಿ ವಿವಿಧ ಡ್ಯಾಂಗಳಲ್ಲಿ ನೀರು ಬರಿದಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು …

Read More »

ಬೆಂಗಳೂರಿನ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು : ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್​ಮನ್​ ಅವರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿತು.   ಕೆ ಜಿ ರಸ್ತೆಯಲ್ಲಿರುವ ಕಾವೇರಿ ಭವನದಲ್ಲಿ ಜಲ ಮಂಡಳಿ ಎದುರು ಬಿಜೆಪಿ ಪ್ರತಿಭಟನೆ ನಡೆಸಿತು. ನಂತರ ಅಧ್ಯಕ್ಷರನ್ನು ಭೇಟಿಯಾದ ಬಿಜೆಪಿ ನಿಯೋಗ, ಮುಂಬರುವ ದಿನಗಳಲ್ಲಿ ಬೆಂಗಳೂರು ಮಹಾನಗರಕ್ಕೆ …

Read More »

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ …

Read More »

ಗೌರವಯುತ ಜೀವನ ನಡೆಸಲು ನೆರವಿಗೆ ಬಾರದ ಪದಕ; ತಿನ್ನಲು ಕೂಳಿಲ್ಲದಿದ್ದರೂ ಕುಂದದ ಕುಸ್ತಿ ಪ್ರೇಮ; ಪೈಲ್ವಾನ್ ಗೆ ಬೇಕಿದೆ ಸಹಾಯ ಹಸ್ತ!

ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಬಾಗಲಕೋಟೆ: ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಇದು ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ಅಪ್ಪಾಸಿ ತೇರದಾಳ ಅವರ ಕಥೆ. 42 ವರ್ಷದ ಅಪ್ಪಾಸಿ ರಾಜ್ಯ, ರಾಷ್ಟ್ರಮಟ್ಟದ ಕುಸ್ತಿ …

Read More »

ಕಾವೇರಿ ನೀರಿಗಾಗಿ ಸೆ. 26ರಂದು ಬೆಂಗಳೂರು ಬಂದ್; ಏನಿರುತ್ತೆ, ಏನಿರಲ್ಲ?

ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ)‌ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ (Cauvery Protest) ಬಂದ್‌ ಬಗ್ಗೆ ತೀರ್ಮಾನ ತೆಗೆದುಕೊಂಡ ಬೆನ್ನಿಗೇ ನಾನಾ ಸಂಘಟನೆಗಳು ತಮ್ಮ ಬೆಂಬಲವನ್ನು ಘೋಷಣೆ ಮಾಡಿವೆ.   ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಭೆಯಲ್ಲಿ …

Read More »

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು …

Read More »

ಏನೇನೊ ‌ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ

ಹಾಸನ‌ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿ ನೀರು ಹರಿಸಲಾಗಿದೆ. ಏನೇನೊ ‌ಭಾಗ್ಯ ಕೊಟ್ಟಿರಿ, ನೀರಿನ ಭಾಗ್ಯ ಬೇಡವೇ? ಎಂದು ಸರ್ಕಾರದ ವಿರುದ್ಧ ಮತ್ತು ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ವಾಗ್ದಾಳಿ ನಡೆಸಿದ್ದಾರೆ.   ಹಾಸನ ತಾಲ್ಲೂಕಿನ ಹೇಮಾವತಿ ಜಲಾಶಯದ ಎದುರು ನಡೆಯುತ್ತಿರೊ ಪ್ರತಿಭಟನೆಯಲ್ಲಿ ಹಾಸನ ಉಸ್ತುವಾರಿ ಸಚಿವ ಎಲ್ಲಿದಿಯಪ್ಪಾ? ನೀರಾವರಿ ಸಲಹಾ ಸಮಿತಿ ಸಭೆ ಕರೆಯದೆ ಹೇಗಪ್ಪಾ ನೀರು ಬಿಟ್ರಿ? ನಿಮ್ಮ …

Read More »