Breaking News
Home / ರಾಜಕೀಯ (page 319)

ರಾಜಕೀಯ

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಕೇಂದ್ರ ಕಾನೂನು ಸಚಿವ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ ರಾಮ್​ ಮೇಘವಾಲ್​ ಮಂಡಿಸಿದರು. ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ 128ನೇ ಸಂವಿಧಾನ ತಿದ್ದುಪಡಿ ಮಸೂದೆಗೆ ಭಾರಿ ಬೆಂಬಲ ವ್ಯಕ್ತವಾಗಿತ್ತು. ಮಸೂದೆ ಮಂಡಿಸಿದ ಸಚಿವರು, ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಮಹಿಳೆಯರ ಹೆಸರಿನಲ್ಲಿ ಶೂನ್ಯ …

Read More »

ದೆಹಲಿಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ H.D.K.

ಬೆಂಗಳೂರು : ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ …

Read More »

ಕಾವೇರಿ ಪರ ದನಿ ಎತ್ತಿದ ರಾಘವೇಂದ್ರ ರಾಜ್​​ಕುಮಾರ್

ಬೆಂಗಳೂರು: ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗ ದನಿ ಎತ್ತಿದೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಟ ರಾಘವೇಂದ್ರ ರಾಜ್​​ಕುಮಾರ್, ನನ್ನ ತಂದೆ ಕೆಲ ವಿಚಾರ ಕಲಿಸಿಕೊಟ್ಟು ಹೋಗಿದ್ದಾರೆ. ನಾಡು, ನುಡಿ, ಭಾಷೆ ವಿಚಾರ ಬಂದಾಗ ಜೊತೆಗಿರಬೇಕೆಂದು ಹೇಳಿದ್ದಾರೆ. ಅದಕ್ಕಾಗಿ ಪ್ರಾಣ ಮುಡಿಪಾಗಿಡುತ್ತೇವೆ ಎಂದು ತಿಳಿಸಿದರು. ಹೋರಾಟಕ್ಕೆ ಬರುತ್ತೇವೆ: ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದೆ. ನಮ್ಮ ನಮ್ಮ ಪಾತ್ರ ಬಂದಾಗ ಜನರೇ ನಮ್ಮನ್ನು ಕರೆಸಿಕೊಳ್ಳುತ್ತಾರೆ, ಆಗ ಬರುತ್ತೇವೆ. ಕೊನೆವರೆಗೂ ನಾವು ಜನರ …

Read More »

ಹಾಲಶ್ರೀ ಮಠದಲ್ಲಿದ್ದ 56 ಲಕ್ಷ ಸೇರಿ 76 ಲಕ್ಷ ನಗದು ವಶ: ಚೈತ್ರಾಳಿಂದ 2 ಕೋಟಿ ಹಣ, ಚಿನ್ನಾಭರಣ ಜಪ್ತಿ- ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ

ಬೆಂಗಳೂರು : ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದಡಿ ಬಂಧಿತರಾಗಿರುವ 8 ಮಂದಿ ಆರೋಪಿಗಳ ವಿಚಾರಣೆಯನ್ನ ಸಿಸಿಬಿ ತನಿಖಾಧಿಕಾರಿಗಳು ಚುರುಕುಗೊಳಿಸಿದ್ದಾರೆ. ಹಾಲಶ್ರೀ ಮಠಕ್ಕೆ ಹಣ ತಲುಪಿಸುವಂತೆ ಆರೋಪಿತ ಅಭಿನವ ಹಾಲಶ್ರೀ ಚಾಲಕ ರಾಜು ಎಂಬಾತ ತನಗೆ 56 ಲಕ್ಷವನ್ನ ನೀಡಿರುವ ಬಗ್ಗೆ ಪ್ರಣವ್ ಎಂಬುವರು ಮಠಕ್ಕೆ ಹಣ ತಲುಪಿಸಿರುವ ಕುರಿತು ನಿನ್ನೆ ವಿಡಿಯೋ ಮಾಡಿದ್ದರು. ಬಳಿಕ ಸಿಸಿಬಿಗೂ ಮಾಹಿತಿ ನೀಡಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತಗೊಂಡ ಸಿಸಿಬಿ ಹಿರೇಹಡಗಲಿಯ ಹಾಲಶ್ರೀ‌ ಮಠಕ್ಕೆ‌ ತೆರಳಿ …

Read More »

ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯ ಸರ್ಕಾರ ವಾಸ್ತವ ಸ್ಥಿತಿಯನ್ನು ತಿಳಿಸುವಲ್ಲಿ ವಿಫಲ

ಮೈಸೂರು: ಸುಪ್ರೀಂ ಕೋರ್ಟ್​ನ ಬಗ್ಗೆ ನಮಗೆ ಗೌರವವಿದೆ. ಆದರೆ ನಮಗೆ ಮೊದಲು ನೀರು ಬೇಕು, ನಾವು ಬದುಕಬೇಕು. ಆನಂತರ ಬೇರೆಯವರಿಗೆ ನೀರು ಕೊಡಬೇಕು. ಆದರೆ ನಮ್ಮಲ್ಲೇ ನೀರಿಲ್ಲ. ಈ ಸಂದರ್ಭದಲ್ಲಿ ನೀರು ಕೊಡಿ ಎಂದು ಹೇಳಿದರೆ ಹೇಗೆ? ಈ ಕಾವೇರಿ ನೀರಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ರೈತ ಸಂಘದ ಮುಖಂಡ ನಂಜುಂಡೇಗೌಡ ಹೇಳಿದರು. ನಗರದ ಕಾಡಾ ಕಚೇರಿಯ ಮುಂಭಾಗ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಈಟಿವಿ ಭಾರತ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ನಂಜುಂಡೇಗೌಡ …

Read More »

ಅನಾರೋಗ್ಯದಿಂದ ಮೃತಪಟ್ಟ ಯೋಧ: ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಚಿಕ್ಕೋಡಿ: ಅನಾರೋಗ್ಯದಿಂದ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಸಿದ್ದಾಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸಿದ್ದಾಪುರ ಗ್ರಾಮದ ಯೋಧ ಸಂತೋಷ್ ಯಳಗೂಡ (30) ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಎರಡು ಗಂಟೆಗೆ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಕಾಮಾಲೆ ರೋಗದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಸಿದ್ದಾಪುರ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತಂದಿದ್ದು, ರಸ್ತೆ ಉದ್ದಕ್ಕೂ ಗ್ರಾಮದ ಜನರು ಮತ್ತು ಶಾಲೆ ಮಕ್ಕಳು ಪುಷ್ಪ …

Read More »

ನೆಲಕ್ಕೆ ಎಸೆದು ನಾಲ್ಕು ತಿಂಗಳ ಮಗುವನ್ನು ಕೊಂದ ಪೊಲೀಸ್​ ಕಾನ್​ಸ್ಟೇಬಲ್​

ಚಿಕ್ಕೋಡಿ: ವೃತ್ತಿಯಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಆಗಿರುವ ವ್ಯಕ್ತಿಯೊಬ್ಬ​ ತನ್ನ 4 ತಿಂಗಳ ಮಗುವನ್ನು ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಮುಡಲಗಿ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್​ ಕಾನ್​ಸ್ಟೆಬಲ್​ ಬಸಪ್ಪ ಬಳುಣಕಿ ತನ್ನ ಮಗುವನ್ನೇ ಕೊಂದ ಆರೋಪಿ. ಈತ ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ …

Read More »

ಒಪಿಎಸ್ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಶಿಕ್ಷಕರಿಂದ ಬೈಕ್ ರ್ಯಾಲಿ

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದ್ದು, ಬುಧವಾರ ಬೆಳಗಾವಿಗೆ ಯಾತ್ರೆಯು ಆಗಮಿಸಿತು. …

Read More »

ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಾನ್​ಸ್ಟೇಬಲ್​ ಸಾವು, ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ

ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು​ ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬೈಪಾಸ್‌ನಲ್ಲಿ ಬುಧವಾರ ನಡೆದಿದೆ. ಹುಚ್ಚೇಶ ಹಿರೇಗೌಡರ (37) ಮೃತ ಕಾನ್​ಸ್ಟೇಬಲ್. ಬೈಕ್​ ಹಿಂಬದಿ ಕುಳಿತಿದ್ದ ಮಹಿಳಾ ಕಾನ್​ಸ್ಟೇಬಲ್ ಲಕ್ಷ್ಮೀ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಬೈಕ್​ನಲ್ಲಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಪಲ್ಟಿ.. …

Read More »

ಹಾವೇರಿಯಲ್ಲಿ ಅನಾವೃಷ್ಠಿಯಿಂದ ಬೆಳೆ ಹಾಳು.. ಕೇಳುವವರಿಲ್ಲ ರೈತರ ಗೋಳು

ಹಾವೇರಿ : ಜಿಲ್ಲೆಯ ಅನ್ನದಾತರ ಗೋಳು ಕೇಳುವವರಿಲ್ಲದಂತಾಗಿದೆ. ಅನಾವೃಷ್ಠಿಯಿಂದ ಬೆಳೆಗಳು ಹಾಳಾಗಿದ್ದು, ರೈತರು ಅವುಗಳನ್ನ ಹರಗಿ ನಾಶಪಡಿಸುತ್ತಿದ್ದಾರೆ. ಇತ್ತ ಕೆಲ ರೈತರು ಕಬ್ಬನ್ನೇ ನಂಬಿದ್ದು ಮುಂಗಾರು ಕೈಕೊಟ್ಟಿದ್ದರಿಂದ ಕಬ್ಬು ಸಹ ನಿರೀಕ್ಷಿಸಿದ ಪ್ರಮಾಣದಲ್ಲಿ ಇಳುವರಿ ಬರದಂತಾಗಿದೆ. ಜಿಲ್ಲೆಯಲ್ಲಿ ಎರಡು ಸಕ್ಕರೆ ಕಾರ್ಖಾನೆಗಳಿದ್ದು, ಶಿಗ್ಗಾಂವಿ ತಾಲೂಕು ಕೋಣನಕೆರೆ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಈಗಾಗಲೇ ಟನ್ ಕಬ್ಬಿಗೆ 3070 ರೂಪಾಯಿ ನಿಗದಿ ಮಾಡಿದೆ. ಆದರೆ, ತಮ್ಮ ಕಬ್ಬಿಗೆ ಕನಿಷ್ಠ ಟನ್‌ಗೆ 3500 ರೂಪಾಯಿ …

Read More »