Breaking News
Home / ರಾಜಕೀಯ (page 336)

ರಾಜಕೀಯ

ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟ ನಿಷೇಧ: ಗೋಪಾಲ್ ರೈ

ನವದೆಹಲಿ: ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು. ಇನ್ನು ಮುಂದೆ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದರು. ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಗೆ ಯಾರಿಗೂ ಪರವಾನಗಿ ನೀಡದಂತೆ ಗೋಪಾಲ್ ರೈ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದರು.       ಜನರಲ್ಲಿನ ಜಾಗೃತಿ ಮತ್ತು ದೆಹಲಿ ಸರ್ಕಾರದ ಕ್ರಮಗಳಿಂದ ದೆಹಲಿಯಲ್ಲಿ ಮಾಲಿನ್ಯವು ನಿರಂತರವಾಗಿ ಕಡಿಮೆಯಾಗುತ್ತಿದೆ. ಆದರೆ, …

Read More »

*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ …

Read More »

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ .. ಭಯ ಬೇಡ, ಜಾಗ್ರತೆಯಿರಲಿ ಎಂದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು …

Read More »

ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು.: ಸಿದ್ದರಾಮಯ್ಯ

ಮೈಸೂರು : ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ.   ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ …

Read More »

ಮಳೆ ನಮ್ಮನ್ನು ಉಳಿಸಿದೆ’: ಭಾರತ – ಪಾಕ್ ಹಣಾಹಣಿ ಬಗ್ಗೆ ಶೋಯೆಬ್ ಅಖ್ತರ್ ಹೇಳಿಕೆ

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​​​ನಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಳೆ ಎರಡನೇ ಬಾರಿಗೆ ಅಡ್ಡಿ ಮಾಡಿದೆ. ಲೀಗ್​ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್​ ಮಾತ್ರ ಆಡಲು ಸಾಧ್ಯವಾಯಿತು. ಸೂಪರ್​ ಫೋರ್​ ಹಂತದ ಪಂದ್ಯ ನಿನ್ನೆ (ಭಾನುವಾರ) ಕೊಲಂಬೊದ ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ 24.1 ಓವರ್​ ವರೆಗೆ ಸುಸೂತ್ರವಾಗಿ ನಡೆದಿತ್ತು. ಆದರೆ ಈ ವೇಳೆ ಬಂದ ಮಳೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೇ ಸುರಿದ …

Read More »

ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.   ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೋಮವಾರ ಅರ್ಜಿ ವಜಾಗೊಳಿಸಿದೆ. ವಿವರವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. …

Read More »

 G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ.

ನವದೆಹಲಿ: G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ. ಹಿಂದೆಂದೂ ಕಾಣದಷ್ಟು ಘೋಷಣೆಗಳಿಗೆ ಸಭೆಯ ಎಲ್ಲ ಸದಸ್ಯರಿಂದ ಅನುಮೋದನೆ ಪಡೆಯಲಾಗಿದೆ. ರಷ್ಯಾ- ಉಕ್ರೇನ್​​​ ವಿಚಾರದ ಬಗ್ಗೆ ಅತ್ಯಂತ ಸಮಚಿತ್ತದ ನಿರ್ಣಯ ಕೈಗೊಳ್ಳುವಲ್ಲಿ ಜಿ-20 ಅಧ್ಯಕ್ಷತೆ ವಹಿಸಿದ್ದ ಭಾರತ ಯಶಸ್ವಿಯಾಗಿದೆ. ಒಟ್ಟಾರೆ ಶೃಂಗದ ಯಶಸ್ವಿಯಾದ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಭಾರತವನ್ನು ಹೊಗಳಿವೆ. ಜಾಗತಿಕ ದಕ್ಷಿಣದ ಧ್ವನಿ(ಗ್ಲೋಬಲ್​ ಸೌತ್​)ನ ಗುಣಗಾನ ನಡೆದಿದೆ. ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಕಾಳಜಿ ವಹಿಸುವಲ್ಲಿ ಭಾರತದ …

Read More »

ಮೀಸಲು ದಿನವೂ ಭಾರತ – ಪಾಕ್​ ಪಂದ್ಯಕ್ಕೆ ಮಳೆ ಅಡ್ಡಿ.. ಓವರ್​ ಕಡಿತಗೊಳಿಸಿ ಮ್ಯಾಚ್​ ನಡೆಯುವುದೇ?

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​​ ಸೂಪರ್​ ಫೋರ್​ ಪಂದ್ಯದ ಭಾರತ ಪಾಕಿಸ್ತಾನ ಮ್ಯಾಚ್​ಗೆ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೀಸಲು ದಿನವನ್ನು ಎಸಿಸಿ ಪ್ರಕಟಿಸಿತ್ತು. ಆದರೆ ವಿಪರ್ಯಾಸ ಎಂದರೆ ಮೀಸಲು ದಿನವೂ ಮಳೆ ಕಾಡುತ್ತಿದ್ದು, 3 ಗಂಟೆಗೆ ಆರಂಭವಾಗಬೇಕಾಗಿದ್ದ ಪಂದ್ಯ ವಿಳಂಬವಾಗಿದೆ. ನಿನ್ನೆ (ಭಾನುವಾರ) 24.1 ಓವರ್​ ವರೆಗಿನ ಇನ್ನಿಂಗ್ಸ್​ನ್ನು ಭಾರತ ಆಡಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. ನಿನ್ನೆ ಸಂಜೆ 5ರ ಸುಮಾರಿಗೆ ಆರಂಭವಾದ ಮಳೆ ಸುಮಾರು …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …

Read More »

ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳಗಾವಿ : ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಕಳೆದ ಸಪ್ಟೆಂಬರ್ 1 ರಂದು ಪ್ಲ್ಯಾಟ್ ತೋರಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಆತನ ಕಾರಿನಲ್ಲಿ ಅಪಹರಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮೂಲದ ಕುಖ್ಯಾತ ರೌಡಿ ವಿಶಾಲಸಿಂಗ್ ಚೌಹಾನ್ ( 25 ) ಬಂಧಿಸಲಾಗಿದೆ,   ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ …

Read More »