Breaking News
Home / ರಾಜಕೀಯ (page 338)

ರಾಜಕೀಯ

ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತಾರೆ :ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬಿಜೆಪಿ – ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ.‌ ಜನರ ಆಶೋತ್ತರಗಳೇನು ಎಂಬ ಬಗ್ಗೆಯೂ ಗೊತ್ತು. ಅವುಗಳನ್ನೆಲ್ಲ ಈಡೇರಿಸುತ್ತಿದ್ದು, ಒಳ್ಳೆಯ ರೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ. ಹಾಗಾಗಿ ಅವರು ಮೈತ್ರಿ ಮಾಡಿಕೊಂಡರೆ ನಾವು ಸ್ವಾಗತಿಸುತ್ತೇವೆ ಎಂದರು.   ಬಿಜೆಪಿ-ಜೆಡಿಎಸ್‌ನವರು ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಿರುವ …

Read More »

ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು : ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಹೆಸರು ಹೇಳದೆಯೇ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡದೇ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ …

Read More »

ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ: ​ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಚುನಾವಣಾ ಅಕ್ರಮದ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ತೀರ್ಪು ಕಾಯ್ದಿರಿಸಿತು. ಅಲ್ಲದೆ, ಮುಂದಿನ ಸೋಮವಾರ ಅಥವಾ ಮಂಗಳವಾರ ತೀರ್ಪು ಪ್ರಕಟಿಸಲಾಗುವುದು ಎಂದು ನ್ಯಾಯಮೂರ್ತಿಗಳು …

Read More »

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಳಿಕೆಯಾದ ಅಪಘಾತ ಪ್ರಕರಣ: ಪೊಲೀಸರ ಕಾರ್ಯ ಯಶಸ್ವಿ

ಬೆಂಗಳೂರು: ಸಾವಿನ ಹೆದ್ದಾರಿ ಎಂದೇ ಬಿಂಬಿತವಾಗಿದ್ದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಕೊನೆಗೂ ಅಪಘಾತ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇದೇ ವರ್ಷ ಮಾರ್ಚ್​ನಲ್ಲಿ‌ ಪ್ರಧಾನಿ ನರೇಂದ್ರ ಮೋದಿ ಅವರು ಹೈವೇ ಉದ್ಘಾಟಿಸಿದ್ದರು. ಈ ಮಾರ್ಗದ ಮೂಲಕ ಬೆಂಗಳೂರಿಂದ ಮೈಸೂರಿಗೆ ತೆರಳಬೇಕಾದರೆ ಮೂರುವರೆ ಗಂಟೆಯಿಂದ ಒಂದೂವರೆ ಗಂಟೆಗೆ ಇಳಿಕೆಯಾಗಿತ್ತು.‌     ಜೊತೆಗೆ ಉದ್ಘಾಟನೆಯಾದ ಆರಂಭದಿಂದಲೂ ಡೆಡ್ಲಿ ಹೆದ್ದಾರಿ ಎಂದು ಕುಖ್ಯಾತಿ ಪಡೆದಿತ್ತು. ವಾಹನಗಳ ಮಿತಿ ಮೀರಿದ ವೇಗ, ಅಗತ್ಯ …

Read More »

ಅನೈತಿಕ ಪೊಲೀಸ್​ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ತಕ್ಕ ಕಾನೂನಿನ ಶಾಸ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ನಲ್ಲಿ ತಾಯಿ ಮೇರಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ, ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತಿದೊಡ್ಡ ಭಾವೈಕ್ಯತಾ ಕೇಂದ್ರ. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ನಾನು ಈ ಜಯಂತ್ಯುತ್ಸವ ಮತ್ತು …

Read More »

ಕೌನ್ ಬನೇಗಾ ಕರೋಡ್​​​ಪತಿಯಲ್ಲಿ ಕೆಬಿಸಿಯ ಮೊದಲ ಕೋಟ್ಯಧಿಪತಿ ಇವರೇ ನೋಡಿ!

ಅಮೃತಸರ (ಪಂಜಾಬ್​): ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮ ಈಗಾಗಲೇ ಎಲ್ಲರಿಗೂ ತಿಳಿದಿರುವ ಕಾರ್ಯಕ್ರಮ. ಇದರಲ್ಲಿ 15 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟರೆ 7 ಕೋಟಿ ಗೆಲ್ಲುವ ಅವಕಾಶ ಇದೆ. ಆದರೆ ಇಲ್ಲಿಯ ವರೆಗೆ ತಲುಪಲು 14 ಪ್ರಶ್ನೆಗಳನ್ನು ದಾಟಬೇಕಿದೆ. 15ನೇ ಸರಣಿಯ ಕೌನ್ ಬನೇಗಾ ಕರೋಡ್ಪತಿಯಲ್ಲಿ ಪಂಜಾಬ್‌ನ ಖಲ್ರಾ ಎಂಬ ಸಣ್ಣ ಹಳ್ಳಿಯಿಂದ ಬಂದಿರುವ ಜಸ್ಕರನ್ ಸಿಂಗ್ ಕೋಟಿ ಗೆದ್ದಿದ್ದಾರೆ. ಈ ಆವೃತ್ತಿಯ ಮೊದಲ ಕೋಟಿ ಬಹುಮಾನ ಇದಾಗಿದೆ.     …

Read More »

ಅಂಗದ್​ನ ಜನನದ ಹಿನ್ನೆಲೆಯಲ್ಲಿ ನೇಪಾಳ ಪಂದ್ಯಕ್ಕೂ ಮುನ್ನ ಭಾರತಕ್ಕೆ ಮರಳಿದ್ದ ಬುಮ್ರಾ ಈಗ ಮತ್ತೆ ಏಷ್ಯಾಕಪ್​ ತಂಡವನ್ನು ಸೇರಿಕೊಂಡಿದ್ದಾರೆ.

ಕೊಲಂಬೊ (ಶ್ರೀಲಂಕಾ): ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಸೂಪರ್ ಫೋರ್ ಪಂದ್ಯಕ್ಕೆ ಮುನ್ನ ಭಾರತದ ವೇಗದ ಬೌಲಿಂಗ್ ಮುಂಚೂಣಿಯಲ್ಲಿರುವ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮತ್ತೆ ಸೇರಿಕೊಂಡಿದ್ದಾರೆ. ತನ್ನ ಮಗ ಮೊದಲ ಮಗುವಿನ ಜನನದ ( ಅಂಗದ್‌) ಕಾರಣ ಪಲ್ಲೆಕೆಲೆಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದ ನಂತರ ಭಾರತಕ್ಕೆ ಮರಳಿದ್ದರು. ಇದರಿಂದ ಗುಂಪು ಹಂತದ ನೇಪಾಳ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಆದರೆ, ಭಾರತ ನೇಪಾಳದ ವಿರುದ್ಧದ ಪಂದ್ಯದಲ್ಲಿ 10 ವಿಕೆಟ್​ಗಳ …

Read More »

ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ‘ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ. ಈ ವಿಷಯದಲ್ಲಿ ಅಧಿಕೃತ ಮಾಹಿತಿ ಬರುವವರೆಗೆ ನಾನು ಏನು ಹೇಳುವುದಿಲ್ಲ’ ಎಂದರು. ಶುಕ್ರವಾರ (ನಿನ್ನೆ) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಿಎಂಕೆ ನಾಯಕ ಎ ರಾಜಾ ಮತ್ತು ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ಖಂಡಿಸುವ ಪ್ರಯತ್ನ ಮಾಡಿಲ್ಲ. ಘಮಂಡಿಯಾ ಘಟಬಂಧನ ಪ್ರಚಾರ ಬಹಳಷ್ಟು ನಡೆಯುತ್ತಿದೆ. ಇದು ಅರ್ಥವಿಲ್ಲದ ಘಟಬಂಧನ …

Read More »

ಸಂಚಾರ ನಿಯಮ ಉಲ್ಲಂಘನೆ: ಶೇ.50 ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ.   ಸವಾರರು ಸದ್ಬಳಕೆ‌ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ …

Read More »

ಮೃದಂಗ ನುಡಿಸಿ ವಿಶ್ವ ಪ್ರತಿನಿಧಿಗಳನ್ನು ಸ್ವಾಗತಿಸಲಿರುವ 12 ವರ್ಷದ ಸಂಗೀತ ಕಲಾವಿದ ದಕ್ಷ್

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆಯಲಿರುವ ಔತಣಕೂಟದಲ್ಲಿ 12 ವರ್ಷದ ಬಾಲಕ ದಕ್ಷಿ ಮೃದಂಗ ಬಾರಿಸುವ ಮೂಲಕ ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಮೂಲಗಳ ಪ್ರಕಾರ, ವಿಶ್ವ ಪ್ರತಿನಿಧಿಗಳನ್ನು ಸ್ವಾಗತಿಸಲು ಆಯೋಜಿಸಲಾದ ಸಂಗೀತ ಕಛೇರಿಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಕನಿಷ್ಠ 78 ಸಂಗೀತಗಾರರು ಭಾಗವಹಿಸಲಿದ್ದಾರೆ. ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸೋಮರ್‌ವಿಲ್ಲೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ದಕ್ಷ್ ಕೂಡ ಸಂಗೀತ ಕಚೇರಿಯಲ್ಲಿ ಪ್ರದರ್ಶನ ನೀಡಲಿದ್ದಾರೆ. ಜಿ20 ಶೃಂಗಸಭೆಯ ಭಾಗವಾಗಿರುವುದು ನನಗೆ ಹೆಮ್ಮೆಯ ವಿಷಯ …

Read More »