Home / ರಾಜಕೀಯ (page 358)

ರಾಜಕೀಯ

ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರ ವಾಂತಿ ಭೇದಿಯಿಂದ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಮದುವೆ ಊಟ ಸವಿದು 100ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ವಿವಿಧ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಗ್ರಾಮದಲ್ಲಿ ಸೋಮವಾರ ಪಟೇಲ್ ಬಂಧುಗಳ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಊಟ ಮಾಡಿ ಮನೆಗೆ ವಾಪಸ್​​ ಆಗುತ್ತಿದ್ದಂತೆ ಹಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಇಡೀ ರಾತ್ರಿ ಪರದಾಟ ನಡೆಸಿದ ಬಳಿಕ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. 10ಕ್ಕೂ ಹೆಚ್ಚು ವಿವಿಧ ಖಾಸಗಿ ಆಸ್ಪತ್ರೆಗೆ …

Read More »

ಮೊದಲು ಎತ್ತುಗಳು ರೈತನ ಜೀವನಾಡಿ ಆಗಿದ್ದವು. ಆದರೆ, ಕಾಲ ಬದಲಾದಂತೆ ಈಗ ಬೈಕ್ ರೈತನ ಜೀವನಾಡಿಯಾಗಿದೆ

ಬೆಳಗಾವಿ: ಮೊದಲು ಎತ್ತುಗಳು ರೈತನ ಜೀವನಾಡಿ ಆಗಿದ್ದವು. ಆದರೆ, ಕಾಲ ಬದಲಾದಂತೆ ಈಗ ಬೈಕ್ ರೈತನ ಜೀವನಾಡಿಯಾಗಿದೆ. ಹೌದು ಎತ್ತುಗಳ ಕೊರತೆಯಿಂದಾಗಿ ಬೈಕ್ ಮೂಲಕ ತಮ್ಮ ಹೊಲದಲ್ಲಿ ಎಡೆಕುಂಟೆ ಹೊಡೆಯುವ ಮೂಲಕ ಇಲ್ಲೊಬ್ಬ ರೈತ ಮಾದರಿಯಾಗಿದ್ದಾರೆ. ಹೌದು ಸವದತ್ತಿ ತಾಲೂಕಿನ ಚಚಡಿ ಗ್ರಾಮದ ರೈತ ಮಹಾಂತೇಶ ಮಹಾದೇವಪ್ಪ ಮತ್ತಿಕೊಪ್ಪ ಎಂಬುವವರೇ ಈ ರೀತಿಯ ವಿನೂತನ ಪ್ರಯತ್ನಕ್ಕೆ ಮುಂದಾದವರು. ತಮ್ಮ ಮೂರು ಎಕರೆ ಹೊಲದಲ್ಲಿ ಗೋವಿನಜೋಳ ಬೆಳೆದಿರುವ ರೈತ ಮಹಾಂತೇಶ, ಬೈಕಿನ ಹಿಂದೆ …

Read More »

ಕಾಂಗ್ರೆಸ್​ನದ್ದು ಮೋಸದ ಗ್ಯಾರಂಟಿ, ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ಪಕ್ಕಾ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

ಹಾವೇರಿ: ಬಿಜೆಪಿಯು ಸಂಘಟನೆ ದೃಷ್ಟಿಯಿಂದ ಅತ್ಯಂತ ಬಲಿಷ್ಟವಾಗಿದೆ ಎಂದು ಮಾಜಿ ಸಚಿವ‌ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಅವರು, “ಪ್ರತಿಪಕ್ಷ ನಾಯಕ ಯಾರಾಗ್ತಾರೆ? ರಾಜ್ಯಾಧ್ಯಕ್ಷ ಯಾರಾಗ್ತಾರೆ? ಅನ್ನೋದನ್ನು ಯೋಚನೆ ಮಾಡದೇ ಲಕ್ಷಾಂತರ ಕಾರ್ಯಕರ್ತರು ಈ ದೇಶಕ್ಕೆ ಒಳ್ಳೆಯದಾಗಬೇಕು. ನಮೋ ಪ್ರಧಾನಿ ಆಗಬೇಕು ಅನ್ನೋ ದೃಷ್ಟಿಯಿಂದ ಕಾಯ್ತಾ ಇದ್ದಾರೆ. ಇಡೀ ರಾಜ್ಯದಲ್ಲಿ ಪ್ರಯತ್ನ ನಡೆಸುತ್ತಿದ್ದೇವೆ. 28ಕ್ಕೆ 28 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಳಿಕ ಗ್ಯಾರಂಟಿ ಯೋಜನೆಗಳ …

Read More »

ಹೆಸ್ಕಾಂನಲ್ಲಿ 248 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ. ಹುಬ್ಬಳ್ಳಿ ವಿದ್ಯುತ್​​ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್​ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ …

Read More »

ಪ್ರಮೋದ್ ಶೆಟ್ಟಿ’ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ

ಜಲಪಾತ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ವಿಭಿನ್ನ‌ ಪಾತ್ರ ಮಾಡುತ್ತಿದ್ದು,‌ ಈ‌ ಚಿತ್ರದಲ್ಲಿ ಅವರ ಫಸ್ಟ್​ ಲುಕ್ ರಿವೀಲ್ ಆಗಿದೆ. ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಸ್ಯಾಂಡಲ್​​ವುಡ್ ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಮೋದ್ ಶೆಟ್ಟಿ. ‌ಇದೀಗ ‘ಜಲಪಾತ’ ಎಂಬ‌ ಸಿನಿಮಾದಲ್ಲಿ ಪ್ರಮೋದ್ ವಿಭಿನ್ನ‌ ಪಾತ್ರ ಮಾಡುತ್ತಿದ್ದಾರೆ. ‌ಈ‌ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರ ಫಸ್ಟ್​ ಲುಕ್ ರಿವೀಲ್​ ಆಗಿದೆ. ನಿರ್ದೇಶಕ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿರುವ ಜಲಪಾತ ಚಿತ್ರದಲ್ಲಿ …

Read More »

ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆ: ಬೊಮ್ಮಾಯಿ ಟೀಕೆ

ಬೆಂಗಳೂರು: ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆಯಾಗಿದೆ. ಇಷ್ಟು ದಿನದಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌. ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸರ್ಕಾರದ ನೂರು ದಿನದ ಸಂಭ್ರಮವನ್ನು ಟೀಕಿಸಿ ಸರಣಿ ಟ್ಚೀಟ್ ಮಾಡಿರುವ ಬೊಮ್ಮಾಯಿ, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು …

Read More »

ಒಂದು ದಿನ ಮೊದಲೇ ಮುಂಬೈಗೆ ಮಮತಾ: ಇಂಡಿಯಾ ಸಭೆಗೂ ಮುನ್ನ ಬಿಗ್​ ಬಿ ಭೇಟಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೊಡೆತಟ್ಟಿ 28 ವಿಪಕ್ಷಗಳು ರೂಪಿಸಿಕೊಂಡಿರುವ I.N.D.I.A ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್​ 31 ಮತ್ತು ಸೆಪ್ಟೆಂಬರ್​ 1 ರಂದು ಮುಂಬೈನಲ್ಲಿ ನಡೆಯಲಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂದು ದಿನ ಮುಂಚೆ ಅಂದರೆ ಆಗಸ್ಟ್​ 30 ರಂದು ಮಹಾರಾಷ್ಟ್ರಕ್ಕೆ ಆಗಮಿಸಲಿದ್ದಾರೆ.   ಅಂದು ಬಾಲಿವುಡ್​​ನ ಖ್ಯಾತ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದು, ರಕ್ಷಾ …

Read More »

ಅಂಕೋಲಾದ ಕೆಂದಗಿ ಗ್ರಾಮಕ್ಕಿಲ್ಲ ರಸ್ತೆ: ಗಾಯಾಳುವನ್ನ ಜೋಳಿಗೆಯಲ್ಲಿಟ್ಟು 15 ಕಿ.ಮೀ ಸಾಗಿಸಿದ ಗ್ರಾಮಸ್ಥರು

ಕಾರವಾರ : ಭಾರತ ಸ್ವಾತಂತ್ರ್ಯ ಹೊಂದಿ 75 ವರ್ಷ ಕಳೆದರೂ ಇನ್ನೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳು ಬಹಳಷ್ಟಿವೆ ಎಂದರೆ ಅಚ್ಚರಿಯಾಗದೇ ಇರೋದಿಲ್ಲ. ಹೀಗೆ ರಸ್ತೆ ಸಮಸ್ಯೆಯಿದ್ದ ಗ್ರಾಮವೊಂದರಿಂದ ಗಾಯಾಳುವನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಹಳ್ಳಗಳಿಂದ ಜಲದಿಗ್ಭಂದನಕ್ಕೊಳಗಾಗಿದ್ದ ಗ್ರಾಮದಿಂದ ಸುಮಾರು 15 ಕಿ.ಮೀ ದೂರ ಹರಸಾಹಸಪಟ್ಟು, ಹಳ್ಳ ದಾಟಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗಿ ಗ್ರಾಮದ ಉಮೇಶ್ ಗೌಡ ಎಂಬುವರು​ …

Read More »

‘ಬಿಜೆಪಿಯಲ್ಲಿ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರೋದು ಸತ್ಯ,: ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು …

Read More »

ಇಸ್ರೋ ಮಹತ್ವದ ಘೋಷಣೆ: ಸೂರ್ಯನ ಅಧ್ಯಯನಕ್ಕೆ ಬಾಹ್ಯಾಕಾಶದಲ್ಲಿ ಆದಿತ್ಯ-L1 ವೀಕ್ಷಣಾಲಯ; ಸೆ.2ರಂದು ಉಡ್ಡಯನ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್​-1 ವೀಕ್ಷಣಾಲಯ ಹೊತ್ತ ರಾಕೆಟ್‌ ಅನ್ನು ಸೆಪ್ಟೆಂಬರ್​ 2ರಂದು ಬೆಳಗ್ಗೆ 11:50 ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಇಂದು (ಸೋಮವಾರ) ಘೋಷಿಸಿದೆ. ಸೂರ್ಯನ ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ಬಾಹ್ಯಾಕಾಶ ವೀಕ್ಷಣಾಲಯ ಇದಾಗಿದೆ. ಈ ಮಿಷನ್ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ …

Read More »