Breaking News
Home / ರಾಜಕೀಯ (page 368)

ರಾಜಕೀಯ

ಮಹಾತ್ಮ ಗಾಂಧಿ ಪ್ರತಿಮೆ ಹಾನಿಗೊಳಿಸಿದ ಇಬ್ಬರು ಕಿಡಿಗೇಡಿಗಳ ಬಂಧನ: ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ : ಆಗಸ್ಟ್ 21 ರಂದು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದ ಗಾಂಧಿ ವೃತ್ತದಲ್ಲಿನ ಮಹಾತ್ಮ ಗಾಂಧಿ ಮೂರ್ತಿಯನ್ನು ಧ್ವಂಸಗೊಳಿಸಿದ ಇಬ್ಬರು ಆರೋಪಿಗಳನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಮಾಧ್ಯಮಗೋಷ್ಟಿ ನಡೆಸಿ, ಬಂಧಿತ ಆರೋಪಿಗಳ ಕುರಿತು ಮಾಹಿತಿ ನೀಡಿದರು. ಆಗಸ್ಟ್ 21ರ ಬೆಳಗಿನ ಜಾವ ಕಿಡಿಗೇಡಿಗಳಿಬ್ಬರು ಬೈಕ್​ನಲ್ಲಿ ಬಂದು ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ್ದರು. …

Read More »

ಬಿಜೆಪಿ ತ್ಯಜಿಸುವ ಕುರಿತು ಸುದ್ದಿಗಳಿಗೆ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗು ಶಿವಮಾರ್ ಹೆಬ್ಬಾರ್ ಸ್ಪಷ್ಟನೆ

ಬೆಂಗಳೂರು : “ನಾನು ಪಕ್ಷ ಬಿಡುವುದೂ ಇಲ್ಲ, ಲೋಕಸಭೆ ಚುನಾವಣೆಗೂ ಸ್ಪರ್ಧಿಸುವುದಿಲ್ಲ” ಎಂದು ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಶೇ.100ರಷ್ಟು ಕಾಂಗ್ರೆಸ್​ಗೆ ಹೋಗಲ್ಲ. ನನ್ನ ಮಗನೂ ರಾಜಕೀಯಕ್ಕೆ ಬರಲ್ಲ. ಒಂದು ವೇಳೆ ಹಾಗೆ ಮಾಡಿದರೆ ಆ ದಿನವೇ ಬಂದು ನನ್ನನ್ನು ಕೇಳಿ” ಎಂದರು. “ಕೆಲವರು ಶಾಸಕ ಮುನಿರತ್ನ ಅವರ ಕ್ಷೇತ್ರದಿಂದ ಕಾಂಗ್ರೆಸ್​ಗೆ ಹೋಗಿದ್ದಾರೆ. ಇನ್ನು ಕೆಲವರು ಕೆ.ಆರ್.ಪುರಂನಿಂದಲೂ ಹೋಗಿದ್ದಾರೆ. …

Read More »

KSRTC: ಕೆಂಪು ಬಣ್ಣದ ಬಸ್​ಗಳಿಗೆ ಹೈಟೆಕ್ ಸ್ಪರ್ಶ

ಬೆಂಗಳೂರು : ಇನ್ಮುಂದೆ ಕೆಎಸ್‌ಆರ್​ಟಿಸಿಯ ಕೆಂಪು ಬಣ್ಣದ ಬಸ್​ಗಳಲ್ಲಿ ಪ್ರಯಾಸದ ಪ್ರಯಾಣಕ್ಕೆ ಗುಡ್ ಬೈ ಹೇಳಿ ಆರಾಮದಾಯಕ ಅನುಭವದ ಪ್ರಯಾಣ ಮಾಡಬಹುದಾಗಿದೆ. ಪುಷ್ ಬ್ಯಾಕ್ ಹೊರತುಪಡಿಸಿ ಬಹುತೇಕ ರಾಜಹಂಸ ಬಸ್ ಪ್ರಯಾಣದ ಅನುಭವ ನೀಡುವ ವ್ಯವಸ್ಥೆಯನ್ನು ಸಾಮಾನ್ಯ ಸಾರಿಗೆಯಲ್ಲಿ ನೀಡಲು ಸಂಸ್ಥೆ ಸಿದ್ಧತೆ ಆರಂಭಿಸಿದೆ. ಅದಕ್ಕಾಗಿಯೇ ವಿಶೇಷವಾಗಿ ವಿನ್ಯಾಸಗೊಂಡ ಪ್ರೋಟೋಟೈಪ್ ಬಸ್​ಗಳು ಅಕ್ಟೋಬರ್ ವೇಳೆಗೆ ರಸ್ತೆಗಿಳಿಯಲಿವೆ. ಹತ್ತು ಹಲವು ಪ್ರಯೋಗಗಳ ಮೂಲಕ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅತ್ಯುತ್ತಮ …

Read More »

ಕಾಂಗ್ರೆಸ್ ಆಹ್ವಾನ ನಿಜವೆಂದು ಸೋಮಶೇಖರ್ ಒಪ್ಪಿಕೊಂಡಿದ್ದಾರೆ, ಪಕ್ಷ ಬಿಡಲ್ಲ ಅಂತಲೂ ಸ್ಪಷ್ಟಪಡಿಸಿದ್ದಾರೆ: ಆರ್​ ಅಶೋಕ್

ಬೆಂಗಳೂರು: ಕಾಂಗ್ರೆಸ್ ಸೇರುವಂತೆ ಹಾಗು ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿದ್ದು ನಿಜ ಎನ್ನುವುದನ್ನು ಶಾಸಕ ಎಸ್ ಟಿ ಸೋಮಶೇಖರ್ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್​ಗೆ ಹೋಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಅವರಿಗೆ ಹೇಳಿದ್ದೇನೆ, ಅವರೂ ಕೂಡ ಪಕ್ಷ ತೊರೆಯುವುದಿಲ್ಲ ಎಂದೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ತಿಳಿಸಿದ್ದಾರೆ. ಆಪರೇಷನ್ ಹಸ್ತ ಪ್ರಯತ್ನಗಳ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲು ಆಗಮಿಸುವಂತೆ ಮಾಜಿ ಡಿಸಿಎಂ ಆರ್ ಅಶೋಕ್ ಸೂಚನೆಯಂತೆ …

Read More »

ರಕ್ಷಿತ್‌ ಶೆಟ್ಟಿ ಅಭಿನಯದ ‘ಚಾರ್ಲಿ 777’ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ನವದೆಹಲಿ: 69ನೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಇಂದು (ಗುರುವಾರ) ಪ್ರಕಟಿಸಿದೆ. ಕನ್ನಡ ಚಿತ್ರರಂಗದ ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಸಿನಿಮಾ ಉತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ‘ಆರ್​ಆರ್​ಆರ್’​ ಸಿನಿಮಾಗೆ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ, ನೃತ್ಯ ನಿರ್ದೇಶನ ಪ್ರಶಸ್ತಿಗಳ ಗೌರವ ಸಿಕ್ಕಿದೆ.     ‘ಉಪ್ಪೇನಾ’ ಸಿನಿಮಾವನ್ನು ಅತ್ಯುತ್ತಮ ತೆಲುಗು ಚಲನಚಿತ್ರವಾಗಿ ಘೋಷಿಸಲಾಗಿದೆ. ‘ಹೋಮ್’ ಅತ್ಯುತ್ತಮ ಮಲಯಾಳಂ ಚಿತ್ರ. ‘ಸರ್ದಾರ್ ಉಧಮ್’ ಅತ್ಯುತ್ತಮ ಹಿಂದಿ …

Read More »

ವಿಕ್ರಮ್ ಲ್ಯಾಂಡರ್​ಗೆ ಬಿಡಿಭಾಗಗಳ ಪೂರೈಕೆ.. ಚಂದ್ರಲೋಕಕ್ಕೂ ಹಬ್ಬಿದ ಬೆಳಗಾವಿ ಕೀರ್ತಿ

ಬೆಳಗಾವಿ: ಚಂದ್ರಯಾನ 3 ಯಶಸ್ಸಿನಲ್ಲಿ ಬೆಳಗಾವಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದು, ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಂಡ್ ಟೆಕ್ನಾಲಜಿ ಕಂಪನಿಯು ವಿಕ್ರಮ್​ ಲ್ಯಾಂಡರ್​ಗೆ ಬಿಡಿಭಾಗಗಳನ್ನು ಪೂರೈಕೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಚಂದ್ರಲೋಕಕ್ಕೂ ಹರಡುವಂತೆ ಮಾಡಿದೆ. ಇಡೀ ವಿಶ್ವವೇ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ವಿಕ್ರಮ್​ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ಮೈಲಿಗಲ್ಲು ನಿರ್ಮಿಸಿದೆ. ಇನ್ನು ಚಂದ್ರಯಾನ 3 …

Read More »

‘ಪ್ರತಿ ತಿಂಗಳು 35 ಸಾವಿರ ಲಂಚ ಕೊಡಬೇಕಾ?”..ಅಬಕಾರಿ ಇಲಾಖೆಗೆ ಪ್ರಶ್ನೆ ಮಾಡಿ ಬೆವರಿಳಿಸಿದ ಸಂಸದ ಪ್ರಜ್ವಲ್ ರೇವಣ್ಣ

ಹಾಸನ: ಪ್ರತಿ ತಿಂಗಳು ಮದ್ಯದಂಗಡಿ ಮಾಲೀಕರು ಅಬಕಾರಿ ಇಲಾಖೆಗೆ “35 ಸಾವಿರ ಲಂಚ” ಕೊಡಬೇಕಾ ಎಂದು ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗಂಭೀರವಾಗಿ ಆರೋಪ ಮಾಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅಕ್ರಮ ಮದ್ಯ ಮತ್ತು ಲಂಚ ಪಡೆಯುತ್ತಿರುವ ಬಗ್ಗೆ ಗಂಭೀರವಾಗಿ ಅಬಕಾರಿ ಇಲಾಖೆ ಮೇಲೆ ಆರೋಪ ಮಾಡಿದ ಪ್ರಜ್ವಲ್​ ರೇವಣ್ಣ ‘ಪ್ರತಿ ತಿಂಗಳು 35 ಸಾವಿರ ಲಂಚ ತಗೋತಿರಲ್ಲ, ಅದನ್ನು …

Read More »

ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್,

ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.   ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಸುಧೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ …

Read More »

ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞಾನ್; ಚಂದ್ರನ ಮೇಲೆ ಇವು ಮಾಡುವ ಕೆಲಸಗಳೇನು?

ಬೆಂಗಳೂರು: ಚಂದ್ರಯಾನ -3 ಮಿಷನ್​ನ ಲ್ಯಾಂಡರ್ ‘ವಿಕ್ರಮ್’ ಮತ್ತು ರೋವರ್ ‘ಪ್ರಜ್ಞಾನ್’ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ, ಚಂದ್ರನ ಮೇಲಿನ ಕಾರ್ಯಾಚರಣೆಯ ಒಟ್ಟಾರೆ ಯಶಸ್ಸಿಗೆ ನಿರ್ಣಾಯಕವಾದ ಲ್ಯಾಂಡರ್ ಮತ್ತು ರೋವರ್ ಇವುಗಳು ತಕ್ಷಣವೇ ಕೆಲ ಮುಖ್ಯ ಕೆಲಸಗಳನ್ನು ಮಾಡಲಿವೆ. ಏತನ್ಮಧ್ಯೆ ವಿಕ್ರಮ್ ಮತ್ತು ಪ್ರಜ್ಞಾನ್ ಇವೆರಡೂ ಯಶಸ್ವಿಯಾಗಿ ಕೆಲಸ ಮಾಡಲಿವೆ ಎಂದು ಇಸ್ರೋ ವಿಜ್ಞಾನಿಗಳು ಕೂಡ ವಿಶ್ವಾಸ ಹೊಂದಿದ್ದಾರೆ. ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಮತ್ತು ರೋವರ್ ಅನ್ನು ನಿಯೋಜಿಸುವ …

Read More »

ಬುಧವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಏರಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿವೆ.

ಮುಂಬೈ : ದೇಶೀಯ ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳು ಬುಧವಾರ ಏರಿಕೆಯೊಂದಿಗೆ ವಹಿವಾಟು ಆರಂಭಿಸಿದವು. ಆದರೆ ನಂತರ ಮಿಶ್ರ ಜಾಗತಿಕ ಮಾರುಕಟ್ಟೆ ಪ್ರವೃತ್ತಿಗಳು ಮತ್ತು ನಿರಂತರ ವಿದೇಶಿ ನಿಧಿಯ ಹೊರಹರಿವಿನ ಹಿನ್ನೆಲೆಯಲ್ಲಿ ವಹಿವಾಟಿನ ಮಧ್ಯದಲ್ಲಿ ಶೇರು ಮಾರುಕಟ್ಟೆಗಳು ಏರಿಕೆಯನ್ನು ತುಸು ಕಡಿಮೆ ಮಾಡಿಕೊಂಡವು.   ದೇಶೀಯ ಸೂಚ್ಯಂಕಗಳಾದ ಎನ್‌ಎಸ್‌ಇ ನಿಫ್ಟಿ ಮತ್ತು ಬಿಎಸ್‌ಇ ಸೆನ್ಸೆಕ್ಸ್ ಒಂದು ದಿನದ ಅಸ್ಥಿರ ವಹಿವಾಟಿನ ನಂತರ ಬುಧವಾರ ಏರಿಕೆಯಲ್ಲಿ ಕೊನೆಗೊಂಡವು. ಸೆನ್ಸೆಕ್ಸ್ 213.27 ಪಾಯಿಂಟ್ ಅಥವಾ …

Read More »