Breaking News
Home / ರಾಜಕೀಯ (page 369)

ರಾಜಕೀಯ

ದಕ್ಷಿಣ ಆಫ್ರಿಕಾದಿಂದ ‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ವೀಕ್ಷಿಸಲಿರುವ ಪ್ರಧಾನಿ

ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್‌ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …

Read More »

ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಆರಂಭ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.   ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ …

Read More »

ನಗರದಾದ್ಯಂತ ಕಳೆದ 24 ಗಂಟೆಯಲ್ಲಿ 15 ರಸ್ತೆ ಅಪಘಾತ, ಐವರ ಸಾವು

ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸಂಭವಿಸಿದ್ದು, ಹದಿನೈದು ಅಪಘಾತಗಳ ಪ್ರಕರಣಗಳು ಸಂಭವಿಸಿವೆ. ಈ ವೇಳೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ‌. ಹೆಬ್ಬಾಳದಲ್ಲಿ – 1, ರಾಜಾಜಿನಗರ – 2, ಹೆಣ್ಣೂರು – 2, ಬಸವನಗುಡಿ – 2, ಕೆ.ಆರ್ ಪುರಂ – 1 ವೈಟ್ ಫೀಲ್ಡ್ – 2 ಹುಳಿಮಾವು – 2 ಹಾಗೂ ಸದಾಶಿವನಗರ – 1 ಮೈಕೊ ಲೇಔಟ್ – 1, ಎಲೆಕ್ಟ್ರಾನಿಕ್- 1 …

Read More »

ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ಮಹಿಳಾ ಶಕ್ತಿ: 39 ಸದಸ್ಯರ ಪೈಕಿ 15 ಮಂದಿಗೆ ಸ್ಥಾನ

ನವದೆಹಲಿ : ಈ ವರ್ಷಾಂತ್ಯದ ಪಂಚರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ​, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ 84 ಜನರ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯನ್ನು ಹೊಸದಾಗಿ ರಚಿಸಿದೆ. ಅದರಲ್ಲಿ ಪಕ್ಷದ ವಿರುದ್ಧ ಬಹಿರಂಗವಾಗಿ ಬಂಡಾಯವೇಳುತ್ತಿದ್ದ ನಾಯಕರೂ ಸೇರಿದಂತೆ 15 ಮಹಿಳೆಯರಿಗೆ ಅವಕಾಶ ನೀಡಲಾಗಿದೆ. ಪಕ್ಷದ ಅತ್ಯುನ್ನತ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿಗೆ ಇಷ್ಟು ಪ್ರಮಾಣದಲ್ಲಿ ಮಹಿಳೆಯರಿಗೆ ಅವಕಾಶ ನೀಡಿದ್ದು, …

Read More »

ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ.

ಹಾವೇರಿ : ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ. ಈ ಗುಂಪುಗಳ ಬಗ್ಗೆ ಮತದಾರರಿಗೆ ಗೊತ್ತಾದರೆ, ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ. ಹೀಗಾಗಿ, ಕಾಂಗ್ರೆಸ್‌ನವರು ಘರ್​ ವಾಪ್ಸಿ ವದಂತಿ ಹಬ್ಬಿಸಿದ್ದಾರೆ ಎಂದು ಮಾಜಿ ಸಚಿವ ಬಿ. ಸಿ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಸ್ ಟಿ ಸೋಮಶೇಖರ್​ ಬಿಜೆಪಿಯ ಸಭೆಯಲ್ಲಿ ಭಾಗವಹಿಸಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಒಳ್ಳೆಯ ಮಾತನಾಡಿದ್ದಕ್ಕೆ ಈ ರೀತಿ ಪ್ರಚಾರ …

Read More »

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೆ ರಕ್ಷಣೆ ಕೊಟ್ಟಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಮಾಡುತ್ತೇವೆ. ಹಿರಿಯ ಅಧಿಕಾರಿಗಳೇ ಈ ಬಗ್ಗೆ ತನಿಖೆ ನಡೆಸುತ್ತಾರೆ. ಸಾಹಿತಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ ಒಂದು ವರ್ಗದ ಜನ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. …

Read More »

ಬಗರ್​ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್​ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್​ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …

Read More »

ಬೆಂಗಳೂರು: ವಿದ್ಯುತ್​ ಕಂಬ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ

ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಬಳಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಿಯಾ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಇಲ್ಲಿನ ಕಾಲೇಜಿನಿಂದ ಹಿಂತಿರುಗುವಾಗ ಅವಘಡ ಸಂಭವಿಸಿದೆ. ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಿಂದ ಪ್ರಿಯಾ …

Read More »

ಕೊಲೆ ಪ್ರಕರಣದಲ್ಲಿ ಪುತ್ರ ಮತ್ತು ಪತಿ ಭಾಗಿಯಾಗಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಮೈಸೂರು: ಯುವಕನ ಕೊಲೆ ಪ್ರಕರಣದಲ್ಲಿ ಮಗ ಮತ್ತು ಪತಿ ಜೈಲುಪಾಲಾದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಸಾವಿನ ವಿಚಾರ ತಿಳಿದು ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟವರನ್ನು ಸಾಮ್ರಾಟ್ ಹಾಗೂ ಆತ್ಮಹತ್ಯೆಗೆ ಶರಣಾದವರನ್ನು ಇಂದ್ರಾಣಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕಳೆದ ಶನಿವಾರ ರಾತ್ರಿ ಮೈಸೂರು ನಗರದ ವಿದ್ಯಾನಗರದ 4 ನೇ ಕ್ರಾಸ್​​ನ ನಿವಾಸಿ ಬಾಲರಾಜ್ ಎಂಬುವನನ್ನು ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. …

Read More »

ಚುನಾವಣೆಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕ್ರಿಕೆಟ್ ದಂತಕಥೆ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಸಚಿನ್​ ತೆಂಡೂಲ್ಕರ್​ ಅವರನ್ನು ಭಾರತೀಯ ಚುನಾವಣಾ ಆಯೋಗವು ತನ್ನ ರಾಷ್ಟ್ರೀಯ ರಾಯಭಾರಿ ಎಂದು ಗುರುತಿಸಿದೆ.

ನವದೆಹಲಿ: ಭಾರತ ಕ್ರಿಕೆಟ್​ ಇತಿಹಾಸದಲ್ಲಿ ಸಚಿನ್​ ತೆಂಡೂಲ್ಕರ್​ ಎಂಬುದೊಂದು ದೊಡ್ಡ ಅಧ್ಯಾಯ. ಕೋಟ್ಯಂತರ ಅಭಿಮಾನಿಗಳ ಕಣ್ಮಣಿ. ಸಚಿನ್ ಆಟವನ್ನು ನೋಡಿ ಬೆಳೆದವರು ಇಂದು ರಾಷ್ಟ್ರೀಯ ತಂಡದಲ್ಲಿ ಮಿಂಚುತಿದ್ದಾರೆ. ದೇಶಿ ಮತ್ತು ವಿದೇಶಿ ಅಭಿಮಾನಿಗಳಿಗೂ ಇವರು​ ‘ಗಾಡ್​ ಆಫ್​ ಕ್ರಿಕೆಟ್’​. ಇದೀಗ ಸಚಿನ್​ ತಮ್ಮ ಇನ್ನೊಂದು ಮಹತ್ತರ ಜವಾಬ್ದಾರಿಯುತ ನಾಗರಿಕ ಪಾತ್ರ ನಿರ್ವಹಿಸಲು ಮುಂದಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಾಸ್ಟರ್​ ಬ್ಲಾಸ್ಟರ್ ಕ್ರಿಕೆಟಿಗನನ್ನು​​ ತನ್ನ ರಾಷ್ಟ್ರೀಯ ರಾಯಭಾರಿ ಎಂದು ಗುರುತಿಸಿದೆ. 2024ರಲ್ಲಿ …

Read More »