Breaking News

ರಾಜಕೀಯ

ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ

ಬೆಂಗಳೂರು,ಆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಮುಡಾದಲ್ಲಿ …

Read More »

ಕೈದಿಗಳಿಗೆ ಇನ್ಮುಂದೆ ‘ಹಾಟ್‌ಬಾಕ್ಸ್‌’ನಲ್ಲಿ ಊಟ

ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ನೀಡುವ ಊಟವನ್ನು ಇದೇ ಮೊದಲ ಬಾರಿಗೆ ‘ಹಾಟ್‌ಬಾಕ್ಸ್‌’ನಲ್ಲಿ ಕೊಡುವುದಕ್ಕೆ ತಯಾರಿ ಆರಂಭವಾಗಿದೆ. ‘ಈ ಉಪಕ್ರಮದ ಮೂಲಕ ತಟ್ಟೆಯಲ್ಲಿ ಊಟ ಪಡೆಯುವುದು, ತಣ್ಣಗಾದ ಆಹಾರ ಸೇವಿಸುವ ಪ್ರಮೇಯ ತಪ್ಪಲಿದೆ’ ಎಂಬ ಆಶಯವನ್ನು ಇಲಾಖೆ ಹೊಂದಿದೆ. ಸದ್ಯ 810 ಕೈದಿಗಳಿರುವ ಕಾರಾಗೃಹದಲ್ಲಿ ನಿತ್ಯ ಸಂಜೆ 6.30ರೊಳಗೆ ರಾತ್ರಿ ಊಟ ವಿತರಿಸಲಾಗುತ್ತದೆ. ತಟ್ಟೆಗಳಲ್ಲಿ ಊಟ ಪಡೆಯುವ ಕೈದಿಗಳು ರಾತ್ರಿ ವೇಳೆ ಊಟ ಮಾಡುತ್ತಿದ್ದರು. ಅಷ್ಟರ ವೇಳೆಗೆ ಊಟವು …

Read More »

ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’

ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …

Read More »

KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …

Read More »

ನಮ್ಮ ಸರ್ಕಾರ ಇರುವವರೆಗೂ `ಗೃಹಲಕ್ಷ್ಮಿ’ ಯೋಜನೆ ನಿಲ್ಲಲ್ಲ : CM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ …

Read More »

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ …

Read More »

ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ?

ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ?   ಬೆಂಗಳೂರು: ದುಬಾರಿ ದರದ (ಪ್ರೀಮಿಯಂ) ಬ್ರ್ಯಾಂಡ್‌ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಮಂಗಳವಾರದಿಂದಲೇ ಪ್ರೀಮಿಯಂ ಬ್ರ್ಯಾಂಡ್‌ಗಳ ಮದ್ಯದ ದರದಲ್ಲಿ ಶೇಕಡ 15ರಿಂದ ಶೇ 20ರಷ್ಟು ಇಳಿಕೆಯಾಗಲಿದೆ.   ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ …

Read More »

ಕುಮಾರಸ್ವಾಮಿಯಷ್ಟು ಸುಳ್ಳುಗಾರ ದೇಶದಲ್ಲೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕುಮಾರಸ್ವಾಮಿಯಷ್ಟು ಸುಳ್ಳುಗಾರ ದೇಶದಲ್ಲೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ   ಬೆಳಗಾವಿ: ‘ಮುಡಾ ಪ್ರಕರಣದಿಂದ ನಾನು ಹೆದರಿದ್ದೇನೆ. ನನ್ನ ಕಾರಿನಲ್ಲೇ ದಾಖಲೆಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಬಹುಶಃ ಅವರಷ್ಟು ಸುಳ್ಳು ಹೇಳುವವರು ಈ ದೇಶದಲ್ಲೇ ಹುಟ್ಟಿಲ್ಲ. ಬೇಕಾದರೆ ನೀವೇ ನನ್ನ ಕಾರಿನಲ್ಲಿ ಬಂದು ನೋಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.   ನಗರದಲ್ಲಿ ಸೋಮವಾರ ಸಂಜೆ ಮಾತನಾಡಿದ ಅವರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ …

Read More »

ಮುಧೋಳ ನಗರಸಭೆ: ಸುನಂದಾ ಅಧ್ಯಕ್ಷೆ, ಮಹಿಬೂಬ್ ಉಪಾಧ್ಯಕ್ಷ

ಮುಧೋಳ: ಮುಧೋಳ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಗರಸಭೆ ಸಭಾಭವನದಲ್ಲಿ ಜಮಖಂಡಿ ಉಪವಿಭಾಗಧಿಕಾರಿಗಳು ಶ್ವೇತಾ ಬೀಡಿಕರ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷದ ವಾರ್ಡ್ ನಂ 30 ಸದಸ್ಯೆ ಸುನಂದಾ ಹನಮಂತ ತೇಲಿ 17 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ವಾರ್ಡ್ ನಂ 3 ರ ಪಕ್ಷೇತರ ಸದಸ್ಯ ಮಹಿಬೂಬ್ ಮುಕ್ತುಮಸಾಬ್ ಬಾಗವಾನ್ 17 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ನಾಮಪತ್ರ ಪರಿಶೀಲನೆ ಹಾಗೂ ಹಿಂಪಡೆಯಲು ಅವಕಾಶ ನೀಡಿ …

Read More »

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಸಿಎಂ ಸಿದ್ಧರಾಮಯ್ಯ

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ- ಸಿಎಂ ಸಿದ್ಧರಾಮಯ್ಯ ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ ಬಾಲಚಂದ್ರರತ್ತ ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ …

Read More »