Breaking News
Home / ರಾಜಕೀಯ (page 370)

ರಾಜಕೀಯ

ಚುನಾವಣೆ ಮುಹೂರ್ತಕ್ಕೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ರಾವ್​!

ಹೈದರಾಬಾದ್: ತೆಲಂಗಾಣ ವಿಧಾನಸಭೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆಗೂ ಮೊದಲೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್​ ಅವರು ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ಎಲ್ಲ 118 ಹುರಿಯಾಳುಗಳನ್ನು ಇಂದು (ಸೋಮವಾರ) ಘೋಷಿಸಿದರು. ಸ್ವತಃ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದರೆ, ಪುತ್ರ, ಸಚಿವ ಕೆ.ಟಿ.ರಾಮರಾವ್​ ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ. ಬಿಆರ್​ಎಸ್​ ಪಕ್ಷದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆಗೆ ಪೂರ್ವ ಸಿದ್ಧತೆ …

Read More »

ಪ್ರತಿ ವರ್ಷ ಮನೆಯಲ್ಲಿ ಜೀವಂತ ನಾಗರನಿಗೆ ಪೂಜೆ!

ಶಿರಸಿ (ಉತ್ತರಕನ್ನಡ) : ಇಂದು ನಾಗರ ಪಂಚಮಿ ಹಬ್ಬ. ಶಿರಸಿಯ ಉರಗ ಪ್ರೇಮಿಯೊಬ್ಬರು ಜೀವಂತ ನಾಗರಹಾವಿನ ಮರಿಗೆ ಹಾಲೆರೆದು ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಮೂಲಕ ಉರಗ ಲೋಕದ ವೈಶಿಷ್ಟ್ಯ ಹಾಗೂ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪ್ರಶಾಂತ್ ಹುಲೇಕಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಿಜ ನಾಗರಹಾವಿಗೆ ಹಾಲೆರೆದು ನಾಗರ ಪಂಚಮಿ ಆಚರಿಸಿದರು. ಪ್ರತಿ ವರ್ಷ ನಾಗರ ಪಂಚಮಿ …

Read More »

N.E.P. ಬದಲಿಗೆ ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯ. ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. “ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ …

Read More »

ನಮಗೆ ಒಟ್ಟು 124 ಟಿಎಂಸಿ ನೀರು ಬೇಕು; ಈಗ ಇರುವುದು 55 ಟಿಎಂಸಿ ಮಾತ್ರ: ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾವು ಮತ್ತು ತಮಿಳುನಾಡಿನವರು ಅಣ್ಣ-ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದಕ್ಕಿಂತ, ಮಾತನಾಡಿ ಬಗೆಹರಿಸಿಕೊಳ್ಳಬೇಕು ಎಂಬುದು ನನ್ನ ಆಶಯ. ತಮಿಳುನಾಡು ಮತ್ತು ಕರ್ನಾಟಕದ ಜನ ಪರಸ್ಪರ ಎರಡೂ ಕಡೆ ಜೀವನ ಮಾಡುತ್ತಿದ್ದಾರೆ. ಹೀಗಿದ್ದಾಗ ಜಗಳ ಮಾಡುವುದು ಸರಿಯೇ? …

Read More »

ವರಮಹಾಲಕ್ಷ್ಮಿ ಹಬ್ಬ: ಸರ್ಕಾರದಿಂದ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ಉಡುಗೊರೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಲ್ಲಿ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ರಾಜ್ಯದ ಮಹಿಳೆಯರಿಗೆ ಉಡುಗೊರೆಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆಗಸ್ಟ್ 25 ರಂದು ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅನುಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಹಾಗೂ ಬಳೆಗಳನ್ನು ನೀಡಲಾಗುತ್ತದೆ. ರಾಜ್ಯ ಸರ್ಕಾರದ ಸುತ್ತೋಲೆಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿನ, ಕುಂಕುಮ ಮತ್ತು ಹಸಿರು ಬಳೆಗಳನ್ನು …

Read More »

ಸದ್ದಿಲ್ಲದೇ ‘ಆಪರೇಷನ್ ಹಸ್ತ’: ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : 2019ರಲ್ಲಿ ಕಾಂಗ್ರೆಸ್, ಜೆಡಿಎಸ್ ತೊರೆದು ತಮ್ಮ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶಾಸಕರು ಬಿಜೆಪಿ ತೊರೆಯದಂತೆ ನಿಗಾ ವಹಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಬೆನ್ನಲ್ಲೇ ಸದ್ದಿಲ್ಲದೇ ‘ಆಪರೇಷನ್ ಹಸ್ತ’ ಕಾರ್ಯಾಚರಣೆ ಬಿರುಸುಗೊಂಡಿದೆ.   ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷ ತೊರೆಯದಂತೆ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ …

Read More »

ಲೋಕಸಭೆ ಚುನಾವಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ವಿಚಾರ ನಮ್ಮ ಮುಂದೆ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಇಂದು (ಸೋಮವಾರ) ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೂರು ನಿಗಮ, ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ನೀಡಬೇಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಪೈಕಿ 50 ಶಾಸಕರಿಗೆ ಹಾಗೂ 50 ಕಾರ್ಯಕರ್ತರಿಗೆ ಕೊಡಲಾಗುವುದು. ಕಾರ್ಯಕರ್ತರಿಗೆ ನೀಡಿದರೆ, ಉಳಿದವರಿಗೆ ಸಂತೋಷವಾಗುತ್ತದೆ. ಎಲ್ಲರಿಗೂ …

Read More »

ಶಾಂತಾಯಿ ವೃದ್ಧಾಶ್ರಮದ 25ನೇ ವಾರ್ಷಿಕೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

ಶಾಂತಾಯಿ ವೃದ್ಧಾಶ್ರಮದ 25ನೇ ವಾರ್ಷಿಕೋತ್ಸವವನ್ನು ಬೆಳಗಾವಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ (ಭಿಕ್ಷುಕರ ಪುನರ್ವಸತಿ ಕೇಂದ್ರ) ಆಚರಿಸಲಾಯಿತು. ಶಾಂತಾಯಿ ವೃದ್ಧಾಶ್ರಮ ಈ ವರ್ಷ ಡಿಸೆಂಬರ್‌ನಲ್ಲಿ 25ನೇ ವರ್ಷವನ್ನು ಪೂರೈಸುತ್ತಿದ್ದು, ಪ್ರತಿ ತಿಂಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಿರ್ಗತಿಕ ಪುನರ್ವಸತಿ ಕೇಂದ್ರವು 150 ಜನರ ಆರೈಕೆ ಮಾಡುತ್ತಿದ್ದು, ಸಿಬ್ಬಂದಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಸಿಬ್ಬಂದಿ ಮತ್ತು ಅಧೀಕ್ಷಕ ಮಲ್ಲೇಶಪ್ಪ ಮೇಘದಿ ಅವರನ್ನು ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, …

Read More »

ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ

ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ ನಡೆಯಿತು , ಬೆಳಗಾವಿಯ ಸದಾಶಿವ ನಗದರಲ್ಲಿನ ಆಸ್ತಿಯ ೨೦ ವರ್ಷಗಳ ಸಂಪೂರ್ಣ ಆರ್ಥಿಕ ನಿರ್ವಹಣಾ ಹಣವನ್ನು ನನ್ನ ಸ್ವಂತ ಖರ್ಚಿನಲ್ಲಿ ತುಂಬುವುದಾಗಿ ರಾಜ್ಯ ಅಧ್ಯಕ್ಷರಾದ ಶ್ರೀ ಸುರೇಶರಾವ ಸಾಠೆ ಹಾಗೂ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ತೀರ್ಮಾನಿಸಿದ್ದರು, ಮುಂದಿನ ದಿನಗಳಲ್ಲಿ ಭವ್ಯ ಹಾಸ್ಟೆಲ್ ನಿರ್ಮಾಣ ಗೊಳಿಸಿ ಕರ್ನಾಟಕ, ಮಹಾರಾಷ್ಟ, ಗೋವಾ ರಾಜ್ಯಗಳ ಗಡಿ …

Read More »

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ,: ಬೊಮ್ಮಾಯಿ

ಬೆಂಗಳೂರು: “ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು” ಎಂದರು. “ಈಗಾಗಲೇ ಟ್ರಿಬ್ಯುನಲ್ …

Read More »