ಬೆಂಗಳೂರು: “ನನಗೆ ಕಾಂಗ್ರೆಸ್ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, “ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ನವನು. …
Read More »ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ …
Read More »ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ನಮ್ಮನ್ನು ಯಾರಾದರೂ ದೆಹಲಿಗೆ ಕರೆದರೆ ನಾವು ಹೋಗುವುದಕ್ಕೆ ಸಿದ್ಧರಿದ್ದೇವೆ. ಆದರೆ ಯಾರಾದರೂ ಕರೆಯಬೇಕಲ್ಲವೇ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿಂದು ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಮಾಡುತ್ತಿದ್ದಾರೆ, ತಾವೂ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನು ಕರೆದರೆ ನಾವು ರೆಡಿ ಇದ್ದೇವೆ, ಯಾರಾದ್ರೂ ಕರೆಯಬೇಕಲ್ಲವೇ? ಎಂದು ಕೇಳಿದರು. ಇವತ್ತು ಚಿಕ್ಕೋಡಿ ನ್ಯಾಯಾಲಯದ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮವಿತ್ತು. …
Read More »ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ …
Read More »ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.90 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಳಗಾವಿ: ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ 1.90 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಶ್ರೀ ಮಹಾಲಕ್ಷ್ಮಿ …
Read More »ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ.
ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ. ಗೋಕಾಕ : ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಭಸ್ಮೆ, ಜಿಲ್ಲಾ …
Read More »ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು. ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ರವಿಂದ್ರ ಅಂಟಿನ ಸೇರಿದಂತೆ …
Read More »ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ ಅನಾವರಣ
ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ, ಬೆಳಗಾವಿ, ಲೋಕೋಪಯೋಗಿ ಇಲಾಖೆ (ಚಿಕ್ಕೋಡಿ ವಿಭಾಗ) ಹಾಗೂ ಬಾರ್ ಅಸೋಸಿಯೇಷನ್, ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ, ಬಾರ್ ಅಸೋಸಿಯೇಷನ್ ಕಟ್ಟಡದ ಉದ್ಘಾಟನೆ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ಹಸ್ತಾಂತರಿಸುತ್ತಿರುವ ಚಿತ್ರಣವಿರುವ ಗೋಡೆಯ ಮೇಲಿನ ಮ್ಯುರಲ್ ಅನ್ನು ಇಂದು ಮಾನ್ಯ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀ ಪ್ರಸನ್ನ ಬಿ. ವರಾಳೆ ಅವರ ಜೊತೆಗೆ …
Read More »ಗ್ಲಾಂಡರ್ಸ್ ಸೋಂಕಿಗೆ ರೇಸ್‌ಕೋರ್ಸ್‌ನ ಕುದುರೆ ಬಲಿ; ಮೃಗಾಲಯದಲ್ಲಿ ಕಟ್ಟೆಚ್ಚರ
ಮೈಸೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ರೇಸ್‌ಕೋರ್ಸ್‌ನಲ್ಲಿ ಮಾರಕ ಗ್ಲಾಂಡರ್ಸ್ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಎರಡು ವರ್ಷದ ಗಂಡು ಕುದುರೆ ಗ್ಲಾಂಡರ್ಸ್ ಸೋಂಕಿಗೆ ಬಲಿಯಾಗಿದೆ. ಈ ಸೋಂಕು ಮಾರಕವಾಗಿದ್ದು, ಎರಡು ಕಿ.ಮೀ ವ್ಯಾಪ್ತಿಯವರೆಗೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳ ಮೇಲೆ ನಿಗಾವಹಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಸೋಂಕು ಮೃಗಾಲಯದಲ್ಲಿರುವ ಜೀಬ್ರಾ …
Read More »ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ:
ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ: ಮುಂದಿನ ಸಿಎಂ ಆಗಲಿ ಎಂದು ನಾಗಾಸಾಧುಗಳಿಂದ ಡಿಕೆಶಿಗೆ ಆಶೀರ್ವಾದ ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ ಉತ್ತರಾಖಂಡ್ ಉತ್ತರಪ್ರದೇಶದಿಂದ ಆಗಮಿಸಿದ 10 ಸಾಧುಗಳು ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಹರಸಿದ ಸಾಧುಗಳು ಮನೆಗೆ ಬಂದವರನ್ನು ದೂರ ತಳ್ಳಲಾಗದು ಎಂದ ಡಿಕೆಶಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಇಂದು ನಾಗಾಸಾಧುಗಳು ತೆರಳಿ ವಿಶೇಷ ಆಶೀರ್ವಾದ ಮಾಡಿದ್ದು, ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ …
Read More »
Laxmi News 24×7