Home / ರಾಜಕೀಯ (page 390)

ರಾಜಕೀಯ

ಗುತ್ತಿಗೆದಾರರ ಬೇಡಿಕೆ ಈಡೇರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿ

ಬೆಂಗಳೂರು : ಗುತ್ತಿಗೆದಾರರ ಸಂಶಯ ನಿವಾರಣೆ ಮಾಡುವ ಕೆಲಸ ಬಿಟ್ಟು ರಾಜಕೀಯ ನಿವೃತ್ತಿ ಮಾತು ಹೇಳಿದ್ದಾರೆ. ಇಂತಹ ನಿಮ್ಮ ನಿವೃತ್ತಿ ಭಾಷಣವನ್ನು ನಾವು ಎಷ್ಟು ಕೇಳಿಲ್ಲ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟರು. ಮಹಾಲಕ್ಷ್ಮಿ ಲೇಔಟ್​ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ ಹಣವನ್ನು ಯಾಕೆ ಇಟ್ಟುಕೊಂಡಿದ್ದೀರಿ, 3 ತಿಂಗಳಾಗಿದೆ ತನಿಖೆಯಾಗಿರಬೇಕಲ್ಲವೇ? ನಾವು ಜನವರಿಯಲ್ಲಿ ಪಾವತಿ ಮಾಡಿ ನಂತರದ ಮೂರು …

Read More »

ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ.

ಬೆಂಗಳೂರು: ”ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ. ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು” ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ …

Read More »

ಬಿಬಿಎಂಪಿ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ: ತಾಂತ್ರಿಕ ವಿಚಾರಣೆಗೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಈ ಸಂಬಂಧ ಆಂತರಿಕ ತಾಂತ್ರಿಕ ವಿಚಾರಣೆ ನಡೆಸಲು ಪಾಲಿಕೆ ಇಂಜಿನಿಯರ್ ಇನ್ ಚೀಫ್ ಬಿ.ಎಸ್ ಪ್ರಹ್ಲಾದ್ ಅವರನ್ನು ನೇಮಿಸಲಾಗಿದೆ. ತಾಂತ್ರಿಕ ವಿಚಾರಣೆ ವರದಿಯನ್ನು ಆಗಸ್ಟ್ 31ರೊಳಗೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.     “ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ದಿನಾಂಕ: 11-08-2023 ರಂದು ಅಗ್ನಿ ಅವಘಡ ಸಂಭವಿಸಿದ್ದು, ಈ …

Read More »

13 – 15 ರವರೆಗೆ ನಡೆಯುವ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ರಾಷ್ಟ್ರದ ಜನತೆಗೆ ಮನವಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ಈ ವರ್ಷ ಆ.13 ರಿಂದ 15ರವರೆಗೆ ‘ಹರ್ ಘರ್ ತಿರಂಗಾ'(ಪ್ರತಿ ಮನೆಯಲ್ಲೂ ತ್ರಿವರ್ಣ) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶದ ಜನತೆಗೆ ಕರೆ ನೀಡಿದರು. ‘ಹರ್ ಘರ್ ತಿರಂಗ’ ವೆಬ್​ ಸೈಟ್​ನಲ್ಲಿ ತಿರಂಗದೊಂದಿಗೆ ನಿಮ್ಮ ಭಾವಚಿತ್ರಗಳನ್ನು ಅಪ್​ಲೋಡ್​ ಮಾಡಿ ಎಂದು ಪ್ರಧಾನಿ ಹೇಳಿದರು.     “ತಿರಂಗ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು …

Read More »

ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಲೋಕಾರ್ಪಣೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅಯೋಜಿಸಿದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆದಿಯಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರೆಲ್ಲ ಅಥಣಿ ಶಾಸಕ ಲಕ್ಷ್ಮಣ ಸವದಿಯವರನ್ನು (Lakshman Savadi) ಮನಸಾರೆ ಹೊಗಳಿದರು, ಕೊಂಡಾಡಿದರು. ಶಿವಕುಮಾರ್ ಮಾತಾಡಿ, ತನಗೆ ಹಲವಾರು ಕೆಲಸಗಳ ಒತ್ತಡವಿದ್ದರೂ ಸವದಿ ಬಹಳ ಅಭಿಮಾನದಿಂದ ಆಹ್ವಾನಿಸಿದ್ದರಿಂದ ಬಂದಿರುವುದಾಗಿ ಹೇಳಿದರು. ತಾವು …

Read More »

ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಆನೆದಂತ (Elephant Ivory) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಆರ್​ಎಂಸಿ ಯ‍ಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ. ಶ್ರೀಶೈಲ ಬಂಧಿತ ಆರೋಪಿ. ಆರೋಪಿ ಶ್ರೀಶೈಲ್​ ಗುರುವಾರ ಸಂಜೆ 6.30 ರ ಸುಮಾರಿಗೆ ಆರ್​ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದನು. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 7.42 ಕೆಜಿ ತೂಕದ 5 ಆನೆ …

Read More »

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ (Goond Act) ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು (CCB Police) ಆತನನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ‌ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ …

Read More »

ಫೋರ್ಜರಿ ಮಾಡಿದ್ದ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ DC ಆದೇಶ

ಬೀದರ್, (ಆಗಸ್ಟ್ 09): ಕೋರ್ಟ್​ ತೀರ್ಪು (Court Verdict) ಫೋರ್ಜರಿ ಮಾಡಿದ್ದ ಹುಮ್ನಾಬಾದ್(humnabad) ತಾಲೂಕಿನ ಬಸವತೀರ್ಥ ಮಠದ  ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ (Bidar DC) ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ  ಬಸವತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಶೀಲ್ದಾರ್​​ಗೆ ಜಿಲ್ಲಾಧಿಕಾರಿ ಗೋಂವಿದರೆಡ್ಡಿ ಸೂಚನೆ ನೀಡಿದ್ದಾರೆ. ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ …

Read More »

ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸ: ಡಿಕೆಶಿ- ಪ್ರಿಯಾಂಕಾಗೆ ಹೆಚ್ಚಿನ ಹೊಣೆ!?

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವು, ಕೈ ಹಕಮಾಂಡ್​​​ಗೆ ಭರ್ಜರಿ ಬೂಸ್ಟ್ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್​​​ ರಣೋತ್ಸಾಹದಿಂದ ಮುನ್ನುಗ್ಗುತ್ತಿದೆ. ಯಾವುದೇ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವ ಛಾತಿಯಲ್ಲಿದೆ. ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸವನ್ನು ಪಕ್ಷದ ನಾಯಕರಲ್ಲಿ ಬಲಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಮತ್ತಷ್ಟು ಸಮರ್ಥವಾಗಿ ಮುನ್ನಡೆಯಲು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಪ್ರಧಾನ …

Read More »

ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಹಠಾತ್ ಹೃದಯಾಘಾತ ಸಂಭವಿಸಿ ಪೊಲೀಸ್ ಕಾನ್​ಸ್ಟೇಬಲ್ ಮೃತಪಟ್ಟಿದ್ದಾರೆ.

ರಾಯಚೂರು: ಪೊಲೀಸ್ ಕಾನ್​ಸ್ಟೇಬಲ್​​ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ರಾತ್ರಿ ಘಟನೆ ಜರುಗಿದೆ. ಬಸವನಗೌಡ ಆಗೋಲಿ (34) ಮೃತರು. ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. …

Read More »