Breaking News
Home / ರಾಜಕೀಯ (page 400)

ರಾಜಕೀಯ

ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ

ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್​ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್​ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …

Read More »

ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ.

ಹೈದರಾಬಾದ್ (ತೆಲಂಗಾಣ) : ಹೈದರಾಬಾದ್​ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ. ಪ್ರಸಿದ್ಧ ಸ್ಮಾರಕವಾಗಿರುವ ಚಾರ್ಮಿನಾರ್​ ಮುಂಭಾಗದ ವಿದ್ಯುದ್ದೀಪದ ವ್ಯವಸ್ಥೆಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ರಾತ್ರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ್ಮಿನಾರ್ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಅದ್ಭುತವಾಗಿ ಬೆಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರೆಡ್ಡಿ, “ಇನ್ನು ಮುಂದೆ ವರ್ಷವಿಡೀ ಪ್ರತಿದಿನ ಸಂಜೆ ಚಾರ್ಮಿನಾರ್ ಅನ್ನು ವಿದ್ಯುದ್ದೀಪಗಳಿಂದ …

Read More »

ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು : ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೆಂದೂರುವೆಲ್​​ನ ಅಟ್ಲಾಂಟಿಕ್ ಅಪಾರ್ಟೆಂಟ್​​ನಲ್ಲಿ ಇಂದು ನಡೆದಿದೆ. ನಗರದಲ್ಲಿ ಕ್ವಾರೆ ಹಾಗೂ ಬಿಲ್ಡರ್ ಉದ್ಯಮದ ವ್ಯವಹಾರ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೀಡಾದವರು. ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಕೆಳಗೆ ಬಿದ್ದ ರಭಸಕ್ಕೆ ತಲೆ ಸಂಪೂರ್ಣ ಛಿದ್ರಗೊಂಡಿದೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರೆ, ಜಲ್ಲಿಕಲ್ಲು ಬಿಸ್ನೆಸ್ ಹೊಂದಿದ್ದ ಇವರು ಮಲ್ಲಿಕಟ್ಟೆಯಲ್ಲಿ ಕಚೇರಿ …

Read More »

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ.

ಬೆಳಗಾವಿ: ‘ಶಿಕ್ಷಣ, ಅವಕಾಶ ಹಾಗೂ ಯಶಸ್ಸಿನಿಂದ ಬಹು ದೂರ ಉಳಿದಿದ್ದ ಸಮುದಾಯಕ್ಕೂ ಅವಕಾಶ ಸಿಗುವಂತೆ ಮಾಡಿದ್ದು ಸಂವಿಧಾನ. ಇಂಥ ಶ್ರೇಷ್ಠ ಸಂವಿಧಾನ ರಚನೆ ಮಾಡಿರುವ ಡಾ. ಬಿ ಆರ್ ಅಂಬೇಡ್ಕರ್ ಅವರು ವಂಚಿತರ ಪಾಲಿನ ಪ್ರಜ್ಞಾಸೂರ್ಯ ಎಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಶ್ಲಾಘಿಸಿದರು. ನಗರದ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಶನಿವಾರ ಸಂಜೆ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದರು. …

Read More »

ಜಲ ಮೂಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಕರು, ಗ್ರಾಮೀಣ ಸಮುದಾಯದ ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಚಿಂತನೆ

ಬೆಂಗಳೂರು: ”ಜಲ ಮೂಲಗಳಾದ ನದಿ, ಕೆರೆ ಮತ್ತು ನಾಲೆಗಳ ಸಂರಕ್ಷಣೆಗೆ ಸ್ವಯಂ ಸೇವಕರು ಹಾಗೂ ಗ್ರಾಮೀಣ ಸಮುದಾಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಚಿಂತನೆ ನಡೆಸಿದೆ” ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದರು. ವಿಕಾಸಸೌಧದಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿದ ಆರ್ಟ್ ಆಫ್ ಲಿವಿಂಗ್ ರಿವರ್ ರಿಜ್ಯೂವಿನೇಷನ್ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕರಾದ ಡಾ. ಲಿಂಗರಾಜು ಯಾಲೆ ಅವರ ನೇತೃತ್ವದ ತಂಡದೊಂದಿಗೆ …

Read More »

ಟೊಮೆಟೊ ಬೆಳೆದು ಕೋಟ್ಯಾಧಿಪತಿಯಾದ ರೈತ

ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದ ರೈತ ಸಾಗರ ಗೋಪಾಲ ಮಗದುಮ್‌ ಎಂಬುವರು ಒಂಬತ್ತು ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದು ಈಗ ಕೋಟ್ಯಾಧಿಪತಿ ಆಗಿದ್ದಾರೆ. ತಮ್ಮ ಸ್ವಂತ ಜಮೀನು ಎರಡು ಎಕರೆ ಹಾಗೂ ಪಕ್ಕದ ರೈತರ ಏಳು ಎಕರೆ ಜಮೀನನ್ನು ಗೇಣಿ ಪಡೆದು ಒಟ್ಟು 9 ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದು ಜಿಲ್ಲೆಯ ಮಾದರಿ ರೈತನಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಮೂಲತಃ ಪಕ್ಕದ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಉಮನವಾಡಿಯ …

Read More »

ಜಾಗತಿಕವಾಗಿ ಅಕ್ಕಿ ದರ ಭಾರಿ ಹೆಚ್ಚಳ

ನವದೆಹಲಿ : ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆಯ (ಎಫ್‌ಎಒ) ಎಲ್ಲಾ ಅಕ್ಕಿ ಬೆಲೆ ಸೂಚ್ಯಂಕವು (All Rice Price Index) ತಿಂಗಳಲ್ಲಿ ಶೇಕಡಾ 2.8 ರಷ್ಟು ಹೆಚ್ಚಾಗಿ ಶೇ 19.7ಕ್ಕೆ ತಲುಪಿದೆ. ಸೆಪ್ಟೆಂಬರ್ 2011 ರ ನಂತರ ಆಲ್ ರೈಸ್ ಪ್ರೈಸ್​ ಇಂಡೆಕ್ಸ್​ನ ಅತ್ಯಧಿಕ ಮಟ್ಟ ಇದಾಗಿದೆ. ಜುಲೈ 20ರಂದು ಭಾರತವು ಸ್ಟೀಮ್​ ಮಾಡದ ಭಾರತೀಯ ಅಕ್ಕಿಯ ರಫ್ತನ್ನು ನಿಷೇಧಿಸಿದ್ದರಿಂದ ಇತರ ಮಾದರಿಯ ಅಕ್ಕಿಯ ಬೆಲೆಗಳು ಹೆಚ್ಚಾಗಬಹುದು ಎಂಬ ನಿರೀಕ್ಷೆಯಿಂದ …

Read More »

ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ಮತ್ತೊಂದು ಸಜೀವ ನಾಡಬಾಂಬ್​ ಪತ್ತೆ

ಕಾರವಾರ (ಉತ್ತರಕನ್ನಡ): ನಾಡಿನ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದ ಹಂದಿಯೊಂದನ್ನು ನಾಡಬಾಂಬ್ ಇಟ್ಟು ಹತ್ಯೆಗೈದಿರುವ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ನಡೆದಿತ್ತು. ಇದೀಗ ಅದೇ ಪ್ರದೇಶದಲ್ಲಿ ಪೊಲೀಸರು ಸಜೀವ ಬಾಂಬ್​ ಪತ್ತೆ ಮಾಡಿದ್ದು, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಿದೆ. ತಾಲೂಕಿನ ಚೆಂಡಿಯಾದ ಸ್ಮಶಾನದ ಬಳಿ ಆಗಸ್ಟ್​ 4 ರಂದು ನಾಡಬಾಂಬ್ ಸ್ಫೋಟವಾಗಿ ಹಂದಿಯೊಂದು ಸಾವನ್ನಪ್ಪಿತ್ತು. ಈ ಹಂದಿ ಗ್ರಾಮಸ್ಥರೊಂದಿಗೆ ಒಡನಾಟ ಹೊಂದಿತ್ತು. ಅದರ ಸಾವಿನಿಂದ ಇಲ್ಲಿನ …

Read More »

ನೈಸ್ ಹಗರಣದ ದಾಖಲೆಗಳನ್ನು ಪ್ರಧಾನಿ ಮೋದಿಗೆ ಕೊಡುತ್ತೇನೆ,:H.D.K

ಬೆಂಗಳೂರು : ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರ ಹೆಸರಿನಲ್ಲಿ ಕೋಟಿ, ಕೋಟಿ ಹಣ ಲೂಟಿಯಾಗಿದೆ. ನೈಸ್ ಸಂಸ್ಥೆ ವಿರುದ್ಧ ದೂರು ನೀಡಲು ಪ್ರಧಾನಿ ನರೇಂದ್ರ ಮೋದಿ …

Read More »

ಆರಗ ಜ್ಞಾನೇಂದ್ರರಿಗೆ ಬುದ್ಧಿ ಭ್ರಮಣೆಯಾಗಿದೆ:ಶಿವರಾಜ ತಂಗಡಗಿ

ಕೊಪ್ಪಳ: ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಬುದ್ಧಿ ಭ್ರಮಣೆ ಆಗಿದ್ದು, ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಅವರು ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿರುದ್ಧ ಗುಡುಗಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿ ಉಪನಾಮ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಯಿತು. ಆದರೆ ಈಗ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ …

Read More »