Breaking News
Home / ರಾಜಕೀಯ (page 440)

ರಾಜಕೀಯ

ಶಕ್ತಿ ಬಂದ ನಂತರ ಸಾರಿಗೆ ಸಂಸ್ಥೆ ಆದಾಯ ವೃದ್ಧಿಸಿದೆ: ಕೃಷ್ಣ ಬೈರೇಗೌಡ

ಬೆಂಗಳೂರು : ಶಕ್ತಿ ಯೋಜನೆಯಿಂದ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ಮೌನಕ್ರಾಂತಿ ಹೆಚ್ಚಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಮಾತನಾಡಿದ ಅವರು, ಜನ ಬಸ್​​ಗಳಲ್ಲಿ ಹೆಚ್ಚಾಗಿ ಓಡಾಡುತ್ತಿದ್ದಾರೆ. ಪ್ರವಾಸೋದ್ಯಮ ಹೆಚ್ಚಾಗುತ್ತಿದೆ. ಮಹಿಳೆಯರು ಮಾತ್ರವಲ್ಲ, ಪುರುಷ ಪ್ರಯಾಣಿಕರು ಹೆಚ್ಚಾಗಿದ್ದಾರೆ . ಶೇ. 20 ರಿಂದ 30 ರಷ್ಟು ಪ್ರಯಾಣಿಕರು ಹೆಚ್ಚಾಗಿದ್ದಾರೆ. ಇದರಿಂದ ಸಾರಿಗೆ ಸಂಸ್ಥೆಗೆ ಆದಾಯ ಬಂದಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದ ಸಾರಿಗೆ ನಿಗಮ ಸ್ವಾವಲಂಬಿ ಆಗುತ್ತದೆ. ಇಂದು …

Read More »

ಬಿಜೆಪಿಯವರು ಪ್ರತಿಪಕ್ಷದ ನಾಯಕರಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮಾಡುತ್ತಾರೆ ಎಂದು ಲಕ್ಷ್ಮಣ್ ಸವದಿ ಲೇವಡಿ ಮಾಡಿದರು.

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ತಿಂಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡಲು ಬಿಜೆಪಿ ಹೈಕಮಾಂಡ್​ಗೆ ಸಾಧ್ಯವಾಗಿಲ್ಲ. ಮತ್ತೊಂದೆಡೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿವಾರ ಕಳೆದರೂ ಇನ್ನೂ ಕೂಡ ಬಿಜೆಪಿ ಪ್ರತಿಪಕ್ಷ ನಾಯಕನ ಹೆಸರನ್ನು ಕೇಂದ್ರ ನಾಯಕರು ಬಹಿರಂಗಪಡಿಸಿಲ್ಲ. ಈ ವಿಷಯವಾಗಿಯೇ ಇಂದು ವಿಧಾನಸಭೆಯಲ್ಲಿ ಸ್ವಲ್ಪ ದಿನ ತಟಸ್ಥವಾಗಿರಿ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರೇ ಆರಂಭದಲ್ಲಿ ಪ್ರತಿಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡುತ್ತಾರೆ. …

Read More »

ಗ್ರಾಹಕರಿಗೆ ಚಿಲ್ಲರೆ ಮಳಿಗೆಗಳ ಮೂಲಕ ರಿಯಾಯಿತಿ ದರದಲ್ಲಿ ಟೊಮೆಟೊ ವಿತರಿಸಲಾಗುವುದು ಎಂದು ಗ್ರಾಹಕ

ನವದೆಹಲಿ: ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಮುಖ ಗ್ರಾಹಕ ಕೇಂದ್ರಗಳಲ್ಲಿ ಟೊಮೆಟೊ ಕಡಿಮೆ ಬೆಲೆಗೆ ಲಭ್ಯವಾಗುವಂತೆ ಮಾಡಲು, ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸುವಂತೆ ಕೇಂದ್ರ ಸರ್ಕಾರ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್)ಗೆ ಬುಧವಾರ ನಿರ್ದೇಶನ ನೀಡಿದೆ.   ‘ಕ್ವೀನ್ ಆಫ್ ಕಿಚನ್’ ಎಂದು ಕರೆಯಲ್ಪಡುವ ಟೊಮೆಟೊದ ಚಿಲ್ಲರೆ ಬೆಲೆಯೂ ಭಾರೀ ಮಳೆಯಿಂದಾಗಿ ಉಂಟಾದ …

Read More »

ಅನುದಾನಿತ ಶಾಲೆಗಳ ಫಲಿತಾಂಶ ಇಳಿಕೆ ಗಂಭೀರವಾಗಿ ಪರಿಗಣನೆ: ಮಧು ಬಂಗಾರಪ್ಪ

ಬೆಂಗಳೂರು: ಅನುದಾನಿತ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಇಳಿಯುತ್ತಿರುವುದು ದೊಡ್ಡ ಸಮಸ್ಯೆ. ಇದರ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಡಾ. ವೈ.ಎ.ನಾರಾಯಣ ಸ್ವಾಮಿ ನಿಯಮ 72ರ ಅಡಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಯನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಫಲಿತಾಂಶ ಹೆಚ್ಚಳಕ್ಕೆ 2020ರ ನಂತರದ ಖಾಲಿ …

Read More »

ಪಾಲಿಕೆ ‌ಮುಖ್ಯ ಆಯುಕ್ತರಿಂದ ಇಂದಿರಾ ಕ್ಯಾಂಟೀನ್​ಗಳ ಪರಿಶೀಲನೆ

ಬೆಂಗಳೂರು : ನಗರದ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ಕೂಡಲೇ ಕೈಗೆತ್ತಿಕೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೊದಲು ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗೆ ಭೇಟಿ …

Read More »

ರಸ್ತೆ ಇಲ್ಲ, ಜೋಳಿಗೆಯಲ್ಲಿ ವೃದ್ಧೆಯನ್ನು ಹೊತ್ತು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಚಿಕ್ಕಮಗಳೂರು : ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆಯುತ್ತಿವೆ. ಹೀಗಿದ್ದರೂ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಶುದ್ಧ ಕುಡಿಯುವ ನೀರು, ಸರಿಯಾದ ರಸ್ತೆ ಸೇರಿದಂತೆ ಇನ್ನೂ ಅನೇಕ ಅಗತ್ಯ ಕನಿಷ್ಟ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಇದಕ್ಕೆ ಹೊಸದೊಂದು ನಿದರ್ಶನ ಸಿಕ್ಕಿದೆ. ಚಿಕ್ಕಮಗಳೂರಿನ ಅರಣ್ಯ, ಪರ್ವತ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸರಿಯಾದ ರಸ್ತೆಗಳಿಲ್ಲ. ಔಷಧೋಪಚಾರಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಬೀದಿ ದೀಪಗಳಿಲ್ಲದೆ ಜನರು ಶೋಚನೀಯ ಜೀವನ ನಡೆಸುತ್ತಿದ್ದಾರೆ. ವಾಹನಗಳು ಓಡಾಡುವ ರಸ್ತೆಗಳಿಲ್ಲದ …

Read More »

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರದ ಹಿನ್ನೆಲೆ ಮೌನ ಪ್ರತಿಭಟನೆಗೆ ಅಖಿಲ ಭಾರತೀಯ ಕಾಂಗ್ರೆಸ್ ಕರೆ ನೀಡಿತ್ತು. ಇಂದು ಬುಧವಾರ ಬೆಳಗಾವಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಜಿಲ್ಲೆಯ ಕೈ ಕಾರ್ಯಕರ್ತರು ಧರಣಿ ನಡೆಸಿದರು. ಈ ವೇಳೆ ಎಂಎಲ್​ಸಿ ಬಿ.ಕೆ. ಹರಿಪ್ರಸಾದ್ ಸಾಥ್ ನೀಡಿದರು. ರಾಹುಲ್ ಗಾಂಧಿಯವರ ಸತ್ಯದ ನಡಿಗೆಯಲ್ಲಿ ನಮ್ಮ ಹೆಜ್ಜೆ, ಸರ್ವಾಧಿಕಾರಿ ಧೋರಣೆಯ ಮೋದಿಯವರಿಗೆ ಧಿಕ್ಕಾರ, ನಮ್ಮ ಹೆಜ್ಜೆ ಜನತಾ ನ್ಯಾಯಾಲಯದತ್ತ …

Read More »

ಸಂಬಳ ಬೇಕು, ಪಾಠ ಮಾತ್ರ ಮಾಡಲ್ಲ’

ಶಿಕ್ಷಕರು ಮಕ್ಕಳಿಗೆ ದೇವರ ಸಮಾನ. ತಾಯಿ ನಂತರ ಮಕ್ಕಳಿಗೆ ಶಿಕ್ಷಕರೇ ಎಲ್ಲವೂ ಎಂದರೆ ತಪ್ಪಾಗಲಾರದು. ಇಂಥಾ ಗುರುಗಳು ಯಾವಾಗಲೂ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಬೇಕು. ಅದರಲ್ಲೂ ಮಕ್ಕಳಿಗಾಗಿಯೇ ಶಾಲೆ ಇರುವುದು. ಮಕ್ಕಳಿಗೆ ಪಾಠ ಮಾಡಲು ಎಂದೇ ಶಿಕ್ಷಕರ ನೇಮಕ ಮಾಡಿ ಸಂಬಳ ನೀಡುವುದು. ಇಲ್ಲೋರ್ವ ಕಿಡಿಗೇಡಿ ಶಿಕ್ಷಕನೋರ್ವ ಸಂಬಳ ತೆಗೆದುಕೊಂಡು ಸರಿಯಾಗಿ ಪಾಠ ಮಾಡದ ಘಟನೆ ಸಂಭವಿಸಿದೆ. ಅಲ್ಲದೇ ಈ ವಿಷಯ ಯಾರಿಗೂ ಗೊತ್ತಾಗಬಾರದು ಎಂದು ತನ್ನ ಬದಲಿಗೆ …

Read More »

ಜೈನಮುನಿಹತ್ಯೆ ಮಾಡಿದ ಆರೋಪಿಗಳಿಗೆ ವರ್ಷದೊಳಗೆ ಮರಣ ದಂಡನೆ ವಿಧಿಸಬೇಕು:ಅಬ್ದುಲ್ ಅಜೀಮ್

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣದಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ಆಗಬೇಕು. ಹತ್ಯೆ ಮಾಡಿದವರ ಜತೆಗೆ ಹತ್ಯೆಗೆ ಪ್ರಚೋದನೆ, ಸಾಧನ, ಸಲಕರಣೆ ಒದಗಿಸಿದವರನ್ನೂ ಶಿಕ್ಷೆಗೆ ಒಳಪಡಿಸಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಬೆಂಗಳೂರಿನಲ್ಲಿ ಸಿಇಒ, ಎಂಡಿ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಂಗಳೂರು : ಖಾಸಗಿ ಕಂಪನಿಗೆ ನುಗ್ಗಿ ಎಂ.ಡಿ ಹಾಗೂ ಸಿಇಒ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ‌ ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರ ತಂಡ ಆರೋಪಿಗಳಾದ ಫೆಲಿಕ್ಸ್, ವಿನಯ್ ರೆಡ್ಡಿ ಹಾಗೂ ಶಿವು ಎಂಬವರನ್ನು ಕುಣಿಗಲ್ ಸಮೀಪ ಬಂಧಿಸಿದೆ. ಪ್ರಕರಣದ ವಿವರ: ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಫೆಲಿಕ್ಸ್​ನನ್ನು ಸದಾ ನಿಂದಿಸುತ್ತಿದ್ದ ಫಣೀಂದ್ರ ಇತ್ತೀಚೆಗೆ ಆತನನ್ನು ಕೆಲಸದಿಂದಲೂ ತೆಗೆದು ಹಾಕಿದ್ದರು. ಅದೇ ದ್ವೇಷಕ್ಕೆ ಫೆಲಿಕ್ಸ್, …

Read More »