Breaking News

ರಾಜಕೀಯ

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ …

Read More »

ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ

ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) ಸೇಠ್‌, …

Read More »

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ.

ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿ, ಚರ್ಚಿಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ …

Read More »

ಮೋಜು ಮಸ್ತಿಗೆ ಹೆಸರಾಗಿದ್ದ ಗೋವಾ ಈಗ ಖಾಲಿ ಖಾಲಿ

GOA : ಮೋಜು ಮಸ್ತಿಗೆ ಹೆಸರಾಗಿದ್ದ ಗೋವಾ ಈಗ ಖಾಲಿ ಖಾಲಿ – ಅಧಿಕ ದರ & ಅವ್ಯವಸ್ಥೆಗೆ ಬೇಸತ್ತ ಪ್ರವಾಸಿಗರು ..ಗೊ..ಗೋವಾ ಅಂದ್ರೆ ಅದೊಂಥರ ಜೋಶ್. ಸಾಮ್ನಯ ಸಂಧರ್ಬಗಳಲ್ಲೇ ಗಿಜಿಗುಡುವ ಗೋವಾ, ಹೊಸ ವರ್ಷದ ಸೆಲೆಬ್ರೇಶನ್ ಸಂದರ್ಭದಲ್ಲಿ ಖಾಲಿ ಖಾಲಿಯಾಗಿದೆ ಅಂದ್ರೆ ನೀವು ನಂಬುತ್ತೀರ..? ಹೀಗೆ ಕೆಲವು ವರ್ಷಗಳ ಹಿಂದೆ ನ್ಯೂ ಇಯರ್ ಅಂದ್ರೆ, ಗೋವಾ ಗೆ ಕಾಲಿಡಲು ಕಷ್ಟ ಎಂಬ ಪರಿಸ್ಥಿತಿ ಇರುತ್ತಿತ್ತು. ಅಷ್ಟರಮಟ್ಟಿಗೆ ಜನ ಕಿಕ್ಕಿರಿದು …

Read More »

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ:C.M.

ಬೆಂಗಳೂರು: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ಸಿಎಂ, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ …

Read More »

ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ

ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ ಅಂದರೆ ಇವರಿಗೆ ಇಷ್ಟ. ಪಾರಿವಾಳ ನೋಡದಿದ್ದರೆ ಮೌಲಾಲಿಗೆ ದಿನ ಕಳೆಯುವುದಿಲ್ಲವಿವಿಧ ಜಾತಿಯ ಪಾರಿವಾಳಗಳು: ಲಕ್ಕಾ, ಹ್ಯಾಂಗರ್​, ಕೇಸರ್​, ಬಾಮರ್​, ರೇಸಿಂಗ್​ ಬಾಮರ್​, ಅಮೆರಿಕನ್​​ ಲಕ್ಕಾ, ದುಬಾಸ್​, ಗಿರಿಯಾ ಬಾಜಿ ಜಾತಿಯ …

Read More »

ಬೆಳಗಾವಿಯಲ್ಲಿ ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬೆಳಗಾವಿ: ಕಾಂಗ್ರೆಸ್​​​​​​ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್​​ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. 4 ದಿನಗಳಲ್ಲಿ ಬರೋಬ್ಬರಿ 1.03 ಕೋಟಿ ರೂ. ವ್ಯಾಪಾರ ವಹಿವಾಟು ಕಂಡು ಬಂದಿದೆ. ಬೆಳಗಾವಿ ಸರ್ದಾರ ಮೈದಾನದಲ್ಲಿ ಡಿ.26ರಿಂದ ಜ. 4ರವರೆಗೆ ನಡೆಯುತ್ತಿರುವ ಸರಸ್ ಮೇಳ – ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಜನಾಕರ್ಷಣೀಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿದೆ. ಡಿ.26 ರಂದು …

Read More »

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು.‌ ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ.‌ ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …

Read More »

ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ; ಬಿ.ವೈ. ವಿಜಯೇಂದ್ರ

  ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ದಯಪಾಲಿಸಿದೆ ಆತ್ಮಹತ್ಯೆ ಭಾಗ್ಯ ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳ ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನೋಡಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಆತ್ಮಹತ್ಯೆ ಭಾಗ್ಯ ದಯಪಾಲಿಸಿದೆ. ಸರ್ಕಾರದ ಕುಮ್ಮಕ್ಕಿನಿಂದ ಆತ್ಮಹತ್ಯೆಗಳು ದಿನೇ ದಿನೇ ಹೆಚ್ಚಳವಾಗಿವೆ. ಹಿಂದೆಂದೂ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ನಾವು ನೋಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಅವರು …

Read More »

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರವೇ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಸಚಿವ ಸತೀಶ ಜಾರಕಿಹೊಳಿ

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಗ್ರಹ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಚಿವರಿಂದ ತಕ್ಷಣ ಸಿಕ್ಕ ಸ್ಪಂದನೆ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ದರ್ಶನ ಪಡೆಯಲು ಹೋಗುತ್ತಾರೆ. ಆದ್ದರಿಂದ ಉಳವಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು. …

Read More »