Breaking News
Home / ರಾಜಕೀಯ (page 479)

ರಾಜಕೀಯ

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆ ಮಾಡಿದ ಸೊಸೆ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ. ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ …

Read More »

ವಯಸ್ಸು 40 ದಾಟುತ್ತಿದ್ದಂತೆ ದುರ್ಬಲವಾಗಿ ಬಿಡುತ್ತವೆ ಮೂಳೆಗಳು

ಮಾನವನ ವಯಸ್ಸು 40 ದಾಟಿದ ನಂತರ ಮೂಳೆಗಳು ಸಹಜವಾಗಿಯೇ ದುರ್ಬಲವಾಗುತ್ತವೆ. ಅದರಲ್ಲೂ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಮೂಳೆಗಳ ದೌರ್ಬಲ್ಯದಿಂದಾಗಿ, ನಮ್ಮ ದೈನಂದಿನ ಜೀವನದ ಅಗತ್ಯ ಕೆಲಸಗಳನ್ನು ಮಾಡಲು ಕೆಲವೊಮ್ಮೆ ಕಷ್ಟವಾಗುತ್ತದೆ. ಆದ್ದರಿಂದ ಮೂಳೆಗಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿದೆ. ಅನೇಕ ಬಾರಿ ನಮ್ಮ ಕೆಲವೊಂದು ಕೆಟ್ಟ ಅಭ್ಯಾಸಗಳೇ ದುರ್ಬಲ ಮೂಳೆಗಳ ಸಮಸ್ಯೆಗೆ ಕಾರಣವಾಗುತ್ತವೆ. ಇದರಿಂದ ಸಕ್ಕರೆ ಕಾಯಿಲೆ ಕೂಡ ಬರಬಹುದು. 40 ವರ್ಷ ವಯಸ್ಸಿನ …

Read More »

ಹೆತ್ತ ತಾಯಿ ಕೊಂದು ಸೂಟ್​ ಕೇಸ್​ನಲ್ಲಿ ಶವ ತಂದು ಪೊಲೀಸರಿಗೆ ಶರಣಾದ ಮಗಳು

ಬೆಂಗಳೂರು: ತಾಯಿಯೇ ದೇವರು, ಮಕ್ಕಳಿಗೆ ತಾಯಿನೇ ಎಲ್ಲ. ಆ ತಾಯಿ ಪ್ರೀತಿಗಾಗಿ ಎಷ್ಟೋ ಜನ ಪರಿತಪಿಸುತ್ತಾರೆ. ಆದರೆ, ಇಲ್ಲೊಬ್ಬಳು ಮಾತ್ರ ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವ ತುಂಬಿಕೊಂಡು ನಿನ್ನೆ(ಸೋಮವಾರ) ರಾತ್ರಿ 11:30 ರ ಸುಮಾರಿಗೆ ನೇರವಾಗಿ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾಳೆ. ಸೆನಾಲಿ ಸೇನ್ (39) ತನ್ನ 71 ವರ್ಷ ವಯಸ್ಸಿನ ತಾಯಿ ಬೀವಾ ಪಾಲ್​ನ ಕೊಲೆ ಮಾಡಿದ ಬಳಿಕ ಪೊಲೀಸ್ ಠಾಣೆಗೆ ಬಂದು …

Read More »

ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ರಸ್ತೆ ಅಪಘಾತ.. ಹೊತ್ತಿ ಉರಿಯುತ್ತಿರುವ ಆಯಿಲ್​ ಟ್ಯಾಂಕರ್, ಸಾವು-ನೋವು! ​

ಪುಣೆ (ಮಹಾರಾಷ್ಟ್ರ): ಲೋನಾವಾಲಾ ಬಳಿಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಅಪಘಾತಕ್ಕೀಡಾಗಿ (Oil Tanker Fire) ಬೆಂಕಿ ಹೊತ್ತಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ಸೇತುವೆಯ ಕೆಳಗಿನ ಭಾಗದಲ್ಲೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಹೊರಬೀಳುತ್ತಿದೆ. ಈ ಅಪಘಾತದಲ್ಲಿ 12 ವರ್ಷದ ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ …

Read More »

ಕಲಬುರಗಿಯಲ್ಲಿ ಜಾತ್ರೆಗೆ ಆಗಮಿಸಿದ್ದ ದಂಪತಿ ವಿದ್ಯುತ್‌ ತಂತಿ ತಗುಲಿ ಸಾವು

ಕಲಬುರಗಿ: ಜಾತ್ರೆಗೆ ಆಗಮಿಸಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆಯ ಏವೂರ ತಾಂಡಾದ ನಿವಾಸಿಗಳಾದ ಶಿವು ರಾಠೋಡ (30) ಮತ್ತು ತಾರಾಬಾಯಿ ರಾಠೋಡ (26) ಮೃತರು. ಚಿತ್ತಾಪುರ ಪಟ್ಟಣದಲ್ಲಿ ನಡೆದ ಹಜರತ್ ಚಿತಾಶಹಾವಲಿ ದರ್ಗಾ ಜಾತ್ರಾ ಕಾರ್ಯಕ್ರಮಕ್ಕೆ ಇವರು ಆಗಮಿಸಿದ್ದರು. ಘಟನೆ ಹೀಗೆ ನಡೆಯಿತು..: ವಿದ್ಯುತ್ ಕಂಬದ ಆಸರೆಗೆಂದು ನೆಲದಲ್ಲಿ ಹೂತಿದ್ದ ತಂತಿಗೆ ವಿದ್ಯುತ್ ಪ್ರವಹಿಸಿದೆ. ಅಲ್ಲೇ ನೀರು ನಿಂತಿದ್ದರಿಂದ ಅವಘಡ ಸಂಭವಿಸಿದೆ. …

Read More »

ಕಾಲಗರ್ಭ ಸೇರುತ್ತಿವೆ ಪುರಾತನ ಸ್ಮಾರಕಗಳು: ಕನಕಗಿರಿ ಪುಷ್ಕರಣಿಯ ಕಥೆಯಲ್ಲ, ಇದು ವ್ಯಥೆ

ಗಂಗಾವತಿ: ಐತಿಹಾಸಿಕ ಹಿನ್ನೆಲೆಯುಳ್ಳ ಕನಕಗಿರಿ ಪಟ್ಟಣವು ಧಾರ್ಮಿಕವಾಗಿ ಮಾತ್ರವಲ್ಲದೇ ಪುರಾತನ ಸ್ಮಾರಕಗಳಿಂದ ಸಾಂಸ್ಕೃತಿಕವಾಗಿ ತನ್ನದೇ ಆದ ವೈಶಿಷ್ಟತೆ ಹೊಂದಿವೆ. ಪುರಾತತ್ವ ಇಲಾಖೆ ಮತ್ತು ಧಾರ್ಮಿಕ ದತ್ತಿ ಇಲಾಖೆಯ ನಿರ್ಲಕ್ಷ್ಯದಿಂದ ಪುರಾತನ ಸ್ಮಾರಕಗಳು, ದೇವಾಲಯಗಳು ಕ್ರಮೇಣ ಕಾಲಗರ್ಭಕ್ಕೆ ಸೇರುತ್ತಿರುವುದು ಪ್ರಜ್ಞಾವಂತ ನಾಗರಿಕರಲ್ಲಿ ಅತೀವ ಬೇಸರ ಮೂಡಿಸಿದೆ. ಹಾಲಿ ಸಚಿವ ಶಿವರಾಜ ತಂಗಡಗಿ ಮೂರು ಬಾರಿ ಸಚಿವರಾಗಿ, ಬಸವರಾಜ ದಢೇಸ್ಗೂರು ಶಾಸಕರಾಗಿ ಇದೇ ಕ್ಷೇತ್ರದಿಂದ ಆಯ್ಕೆಯಾದರೂ ಈ ಪ್ರಾಚೀನ ಸ್ಮಾರಕಗಳ ಸಂರಕ್ಷಣೆಯ ಬಗ್ಗೆ ಯಾವುದೇ …

Read More »

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಇಬ್ಬರಿಗೆ 20 ವರ್ಷ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್‌ ಆದೇಶ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ (33) ಶಿಕ್ಷೆಗೊಳಗಾದವರು. ಪ್ರಕರಣದ ವಿವರ: 2022ರ ಏಪ್ರಿಲ್​ 12ರ ಮಧ್ಯಾಹ್ನ 12.45ಕ್ಕೆ ಪಿಯುಸಿ …

Read More »

ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿ ಆರೋಪ: ಸಿಎಂ – ಡಿಸಿಎಂ ಸೇರಿ 36 ಮಂದಿಗೆ ಸಮನ್ಸ್

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.   ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್‌ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ …

Read More »

ರವಿ ಡಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸಿಎಟಿ ತಡೆಯಾಜ್ಞೆ

ಬೆಂಗಳೂರು: ಅಖಿಲ ಭಾರತ ಸೇವಾ ನಿಯಮಗಳ ಪ್ರಕಾರ ನಿಗದಿ ಪಡಿಸಿರುವ ಕನಿಷ್ಟ ಎರಡು ವರ್ಷಗಳ ಅವಧಿಗೂ ಮುನ್ನ ಕಿಯೋನಿಕ್ಸ್​​ನ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಡೆ ನೀಡಿ ಆದೇಶಿಸಿದೆ.   ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮದ(ಕಿಯೋನಿಕ್ಸ್) ವ್ಯವಸ್ಥಾಪಕ ಹುದ್ದೆಗೆ ಅಧಿಕಾರ ಸ್ವೀಕರಿಸಿದ 6 ತಿಂಗಳಲ್ಲಿ ವರ್ಗಾವಣೆ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ರವಿ ಡಿ ಚನ್ನಣ್ಣನವರ್ ಸಿಎಟಿಯಲ್ಲಿ …

Read More »

ಮಧ್ಯಪ್ರದೇಶ ಗೆಲ್ಲಲು ಕಾಂಗ್ರೆಸ್​​ನ ಕರ್ನಾಟಕ ಮಂತ್ರ.. ರಾಹುಲ್​ – ಖರ್ಗೆ ಜಂಟಿ ರ‍್ಯಾಲಿಗೆ ಮಹಾಪ್ಲಾನ್​​!

ನವದೆಹಲಿ: ಇದೇ ವರ್ಷದ ಅಂತ್ಯದಲ್ಲಿ ಅಂದರೆ ಡಿಸೆಂಬರ್​ನಲ್ಲಿ ನಾಲ್ಕೈದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಪ್ರಮುಖವಾಗಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ, ತೆಲಂಗಾಣ ಸೇರಿ ಇತರ ಕಡೆ ಎಲೆಕ್ಷನ್​ ನಡೆಯಲಿವೆ. ಪ್ರಸ್ತುತ ಕಾಂಗ್ರೆಸ್​ ನಾಯಕರು ಮಧ್ಯಪ್ರದೇಶದ ಮೇಲೆ ಚಿತ್ತ ಹರಿಸಿದ್ದಾರೆ. ಕಳೆದ ಎಲೆಕ್ಷನ್​ನಲ್ಲಿ ಅತಿಹೆಚ್ಚು ಸ್ಥಾನ ಗೆದ್ದು ಪಕ್ಷೇತರರ ಸಹಾಯದಿಂದ ಸರ್ಕಾರ ರಚಿಸಿ, ಆ ಬಳಿಕ ಸಿಂದಿಯಾ ಬಂಡಾಯದಿಂದ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್​, ಈ ಬಾರಿ ಶತಾಯ- ಗತಾಯ ಅಧಿಕಾರ ಹಿಡಿಯಬೇಕು ಎಂದು …

Read More »