Breaking News

ರಾಜಕೀಯ

ದೇವೇಗೌಡರ ತವರು ಜಿಲ್ಲೆಯಲ್ಲಿ ಜೆಡಿಎಸ್‌-ಬಿಜೆಪಿಗೆ ಟಕ್ಕರ್ ಕೊಡಲು ತಂತ್ರ

ಬೆಂಗಳೂರು, ಡಿಸೆಂಬರ್ 5: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್​ ಈಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್‌-ಬಿಜೆಪಿ ಎರಡಕ್ಕೂ ಟಕ್ಕರ್‌ ಕೊಡಲು ‘ಕೈ’ ತಂತ್ರ ಹೂಡಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತಂಡ ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ ತಂಡದ ನಡುವಣ ಮುಸುಕಿನ ಗುದ್ದಾಟದ ಮಧ್ಯೆ ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಅರಸೀಕೆರೆ …

Read More »

ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್​​ವೈಗೆ ಢವಢವ ಶುರು

ಬೆಂಗಳೂರು,   ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ.​​ ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್​​ವೈಗೆ ಢವಢವ ಶುರುವಾಗಿದೆ. ಬಿಡಿಎ ಹೌಸಿಂಗ್​ ನಿರ್ಮಾಣ …

Read More »

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್​ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ …

Read More »

2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ

ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.10ರಂದು ಸುವರ್ಣಸೌಧದ ಮುಂದೆ 5 ಸಾವಿರ ಟ್ರ್ಯಾಕ್ಟರ್‌ಗಳು ಹಾಗೂ ಸಾವಿರಾರು ಪಂಚಮಸಾಲಿ ಸದಸ್ಯರು ಸಮಾವೇಶಗೊಂಡು ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಿದ್ದಾರೆ. ಈ ಆಂದೋಲನವನ್ನು ತಡೆಯಲು ಅಥವಾ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದರೆ, …

Read More »

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಭರತೇಶ ಪ್ಯಾರಾಮೇಡಿಕಲ್ ಕಾಲೇಜು ನೂತನ ವಿದ್ಯಾಥಿಗಳಿಗೆ ಸ್ವಾಗತ ಹಾಗೂ ಅಂತಿಮ ವಿದ್ಯಾರ್ಥಿಗಳ ಬಿಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜು ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಎಲಿಮುನ್ನೊಳ್ಳಿ ಪ್ರಾಥಮಿಕ ಸಹಕಾರಿ ಸಂಘದ ಅದ್ಯಕ್ಷ ಕೆಂಪಣ್ಣ ದೇಸಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. …

Read More »

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು …

Read More »

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ

ಶಾಸಕ ಯತ್ನಾಳರ ಹೇಳಿಕೆ ಶರಣರಿಗೆ ಮಾಡಿದ ಅಪಮಾನ ತಕ್ಷಣ ಕ್ಷಮೆ ಕೇಳಲು ಸಚಿವ ಎಂ.ಬಿ.ಪಾಟೀಲ ಆಗ್ರಹ ವಿಶ್ವ ಗುರು ಬಸವಣ್ಣನವರ ಕುರಿತು ಶಾಸಕ ಯತ್ನಾಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ ತಕ್ಷಣ ಕ್ಷಮೆ ಕೋರಬೇಕೆಂದು ಸಚಿವ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ. ತಮ್ಮ ಸೊಶಿಯಲ್ ಮಿಡಿಯಾದಲ್ಲಿ ಪೊಸ್ಟ್ ಹಾಕಿರುವ ಸಚಿವ ಎಂ.ಬಿ.ಪಾಟೀಲ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಬಸವಣ್ಣ ನಮ್ಮ …

Read More »

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವ ಚರ್ಚೆ ನಡೆಯುತ್ತಿದೆ, ಇನ್ನೂ ನಿರ್ಧಾರ ಮಾಡಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಚರ್ಚೆ ನಡೀತಾ ಇರೋದು ಸತ್ಯ, ಆದರೆ ಪಕ್ಷದ ವರಿಷ್ಠರು ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ, ತನಗೆ ಜವಾಬ್ದಾರಿ ವಹಿಸುವ ನಿರ್ಧಾರವನ್ನು ಎಐಸಿಸಿ ಮಾಡಿದಾಗ ನೋಡೋಣ ಎಂದು …

Read More »

ಹೋರಾಟಕ್ಕೆ ಸಜ್ಜಾದ ನಿವೃತ್ತ ನೌಕರರು

ಬೆಳಗಾವಿ: ಕಳೆದ 25 ತಿಂಗಳ ಕಾಲಾವಧಿಯಲ್ಲಿ ನಿವೃತ್ತ ಹೊಂದಿರುವ ನೌಕರರಿಗೆ ಆರ್ಥಿಕ ನಷ್ಟವಾಗಿದೆ.‌ ಹಾಗಾಗಿ ನಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಎಂ ಪಿ ಎಂ ಷಣ್ಮುಖಯ್ಯ ಅವರು ತಿಳಿಸಿದರು.‌ ಇಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ 7ನೇ ವೇತನ ಆಯೋಗ ಬಿಡುಗಡೆ …

Read More »

ಪೇಜಾವರ ಶ್ರೀಗಳ ಭಾವಚಿತ್ರ ಸುಟ್ಟು ಆಕ್ರೋಶ

  ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಭೀಮ ಆರ್ಮಿಯ ಕರ್ನಾಟಕ ಏಕತಾ‌ ಮಿಷನ್ ‌ ವಿಜಯಪುರ ಜಿಲ್ಲಾ ಸಮಿತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ‘ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ವಿರುದ್ಧ …

Read More »