Breaking News
Home / ರಾಜಕೀಯ (page 5)

ರಾಜಕೀಯ

ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಇಲ್ಲದೆ ಜನರು ಹೈರಾಣು.

ರಾಮದುರ್ಗ : ನಗರದ ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯಿಂದ ಗ್ರಾಹಕರು ಹೈರಾಣು ಆಗಿ ತರಾಟೆಗೆ ತಗೆದುಕೊಂಡ ಘಟನೆ ಜರುಗಿದೆ, ಸರ್ಕಾರದ ಗೃಹಲಕ್ಷ್ಮಿ , ವಿಧವಾ ವೇತನ, ಅಂಗವಿಕಲರ ವೇತನ ಹಾಗೂ ಅನ್ನಭಾಗ್ಯ ಹಣ ಇತರ ಯೋಜನೆಗಳನ್ನು ಬ್ಯಾಂಕ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಈ ಕುರಿತು ರಾಮದುರ್ಗದ ತಾಲೂಕಿನ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾವಣೆ ಕುರಿತು ಖಾತರಿ ಪಡಿಸಲು, ಎನ್ ಸಿ ಪಿ ನಂಬರ ಚೇಕ್ ಮಾಡಲು ಮತ್ತು …

Read More »

ಕಿರುಕುಳ ಪ್ರಕರಣ ದಾಖಲಿಸಿದ ಸೊಸೆ ಮೇಲೆ ಅತ್ತೆಯಿಂದ ಆಯಸಿಡ್​ ದಾಳಿ

ನವದೆಹಲಿ: ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ 22 ವರ್ಷದ ಮಹಿಳೆ ಮೇಲೆ ಆಕೆಯ ಅತ್ತೆ ಆಯಸಿಡ್ ದಾಳಿ ಮಾಡಿರುವ ಘಟನೆ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ. ದಾಳಿಯಿಂದ ಮಹಿಳೆ ದೇಹ ಶೇ.25ರಷ್ಟು ಸುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಸ್ಥಳೀಯ ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯ ಎಸಗಿದ ಅತ್ತೆ ಅಂಜಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಆರೋಪಿ ಅಂಜಲಿ ಮತ್ತು ಕುಟುಂಬ ಸದಸ್ಯರು ಪರಾರಿಯಾಗಿದ್ದರು. ಆದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ, ಶುಕ್ರವಾರ …

Read More »

ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿ 7 ಜನ ಆರೋಪಿಗಳ ಪೊಲೀಸ್​ ಕಸ್ಟಡಿ ಇಂದು ಅಂತ್ಯವಾಗಲಿದೆ.

ಬೆಂಗಳೂರು: ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಏಳು ಜನ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಆರೋಪಿಗಳಾದ ಚೈತ್ರಾ ಕುಂದಾಪುರ, ಗಗನ್, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಹಾಗೂ ಚೆನ್ನನಾಯ್ಕ್​ರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾಗಿದೆ. ಮಧ್ಯಾಹ್ನದ ವೇಳೆಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ ಪೊಲೀಸರು ಅಗತ್ಯವಿದ್ದಲ್ಲಿ ಮಾತ್ರ ಪುನಃ ಕಸ್ಟಡಿಗೆ ಕೇಳುವ …

Read More »

ಸೂರತ್​ನ ಉದ್ಯಮಿ ಮನೆಯಲ್ಲಿ 600 ಕೋಟಿ ರೂ ಬೆಲೆಯ ವಜ್ರದ ಗಣಪತಿ ಪ್ರತಿಷ್ಠಾಪನೆ!

ಸೂರತ್​ (ಗುಜರಾತ್​): ಗುಜರಾತ್​ ರಾಜ್ಯದ ಸೂರತ್​ನಲ್ಲಿ ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಅಪರೂಪದ ಮತ್ತು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಗಣಪನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಕನುಭಾಯಿ ರಾಮ್​ಜಿಭಾಯಿ ಅಸೋದರಿಯಾ ಎಂಬುವವರು ಬರೋಬ್ಬರಿ 600 ಕೋಟಿ ರೂಪಾಯಿ ಬೆಲೆ ಬಾಳುವ ವಜ್ರದ ಗಣಪನನ್ನು ಕೂರಿಸಿದ್ದಾರೆ. ವಜ್ರದ ವ್ಯಾಪಾರಿಯಾಗಿರುವ ಇವರು 15 ವರ್ಷಗಳ ಹಿಂದೆ ವ್ಯಾಪಾರಕ್ಕಾಗಿ ಬೆಲ್ಜಿಯಂಗೆ ಹೋಗಿದ್ದರು. ಅಲ್ಲಿಂದ ಕಚ್ಚಾ ವಜ್ರಗಳನ್ನು ತಂದಿದ್ದರು. ಈ ವೇಳೆ ಅನುಭಾಯಿ ಅವರ ತಂದೆಗೆ ಮನೆಗೆ ತಂದಿರವ …

Read More »

ಉಪನೋಂದಣೆ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ: ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಸೇವೆ ಲಭ್ಯ

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಸೆ.23 ರಿಂದ 30ರವರೆಗೆ ಈ ಆದೇಶ ಜಾರಿಗೆಯಲ್ಲಿರಲಿದ್ದು, ಒಂದು ವಾರ ಸಾರ್ವಜನಿಕರು 12 ಗಂಟೆಗಳ ಕಾಲ ಸೇವೆ ಪಡೆಯಬಹುದಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ …

Read More »

ಪತ್ನಿ ಜೊತೆ ಸಂಬಂಧ ಶಂಕೆ: ವ್ಯಕ್ತಿಯ ಕತ್ತರಿಸಿದ ತಲೆ ಹಿಡಿದು ಪತ್ನಿಯ ತವರು ಮನೆಗೆ ಬಂದ ಪತಿ!

ಚೆನ್ನೈ(ತಮಿಳುನಾಡು): ಪತಿಯೊಬ್ಬತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದ ಮೇರೆಗೆ ವ್ಯಕ್ತಿಯೋರ್ವನ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ಗುರುವಾರ ಸಂಜೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ. ಶಿರಚ್ಛೇದ ಮಾಡಿದ್ದಲ್ಲದೇ ಕತ್ತರಿಸಿದ ತಲೆಯನ್ನು ಟುಟಿಕೋರಿನ್​ ಜಿಲ್ಲೆಯಲ್ಲಿರುವ ಪತ್ನಿಯ ತವರು ಮನೆ ಮುಂದೆ ಇಟ್ಟಿದ್ದ. ಕೃತ್ಯ ಎಸಗಿದ ಎಸ್.ವೇಲುಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಮುರುಗನ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಆಲಂಕುಳಂ ಸಮೀಪದ ರೆಡಿಯಾರಪಟ್ಟಿ ಗಿಮ್ಕುಳಂ ಗ್ರಾಮಕ್ಕೆ ಸೇರಿದ ಆರೋಪಿ ವೇಲುಸಾಮಿಯು ತೂತುಕುಡಿ ಜಿಲ್ಲೆಯ …

Read More »

ಕಾವೇರಿ ವಿವಾದದ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿರುವೆ,

ದೇವನಹಳ್ಳಿ(ಬೆಂ.ಗ್ರಾಮಂತರ): “ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿಮಂಡ್ಯ ಬಂದ್​ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ …

Read More »

ಕಾವೇರಿ ಬಿಕ್ಕಟ್ಟು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ.

ಬೆಂಗಳೂರು: ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ, …

Read More »

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ತೊಂದರೆ ಇಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಾವು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಶೇ.45ರಷ್ಟು ಮತ ಪ್ರಮಾಣ ಗಳಿಸಿದ್ದೆವು. ಅದನ್ನು ಲೋಕಸಭೆ ಚುನಾವಣೆಯಲ್ಲೂ ಉಳಿಸುವ ಸಾಧ್ಯತೆ ಇದೆ. ಅದರಿಂದ ನಮಗೇನು ತೊಂದರೆ ಆಗಲ್ಲ. ಅವರು ಮೈತ್ರಿ ಮಾಡಿಕೊಳ್ಳಲಿ. …

Read More »

ಉತ್ತರಕನ್ನಡ ಜಿಲ್ಲೆಯ 34 ಜನರಲ್ಲಿ ಇಲಿಜ್ವರ ಪತ್ತೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಜೊತೆಗೆ ಇಲಿ ಜ್ವರವೂ ಜನರಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೆಲವೇ ದಿನಗಳಲ್ಲಿ ಸುಮಾರು 34 ಜನರಲ್ಲಿ ಕಾಣಿಸಿಕೊಂಡಿರುವ ಇಲಿ ಜ್ವರ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇಲಿ ಜ್ವರದ ಬಗ್ಗೆ ಸಕಾಲದಲ್ಲಿ ಆರೋಗ್ಯ ಇಲಾಖೆ ಜಾಗೃತಿ ಮೂಡಿಸದೆ ಇದ್ದಿದ್ದರಿಂದ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಎರಡು ತಿಂಗಳಿನಿಂದ ಜ್ವರದ ಪ್ರಕರಣಗಳು …

Read More »