Home / ರಾಜಕೀಯ (page 508)

ರಾಜಕೀಯ

ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್

ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ. ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. …

Read More »

ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಹೇಳಿದ್ದೇನೆ. ಕನಿಷ್ಠ ಹತ್ತು ಜನರಿಗೆ ಅವಕಾಶ ಕೊಡಬೇಕು ಎಂದಿದ್ದೇನೆ. ಅದರಂತೆ ಈಬಾರಿ ಹೊಸಬರಿಗೂ ಅವಕಾಶ ಸಿಗಲಿದೆ ಎಂದರು. ಯಾರೆಲ್ಲ …

Read More »

ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ಸೋನಿಯಾ ಗಾಂಧಿಯವರು ಶಿಮ್ಲಾ ಪ್ರವಾಸದಿಂದ ನಿನ್ನೆಯಷ್ಟೇ ದೆಹಲಿಗೆ ವಾಪಸ್ ಆಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು …

Read More »

ವಿಧಾನಸಭೆ ಸೋಲಿನ ಶಾಕ್​ನಿಂದ ಇನ್ನೂ ಹೊರಬಾರದ ಬಿಜೆಪಿ: ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕರ ನೇಮಕ ವಿಳಂಬ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಆಘಾತದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ಹೊರಬರಲು ಸಾಧ್ಯವಾಗಿಲ್ಲ. ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ವಾರಗಳಾಗುತ್ತಿದೆ. ಹೀಗಿದ್ರೂ ಪಕ್ಷದ ಮುಖಂಡರಲ್ಲಿ ಸೋಲಿನ ಛಾಯೆ ಮರೆಯಾಗಿಲ್ಲ. ಚುನಾವಣೆಯಲ್ಲಿ ಆಡಳಿತ ಪಕ್ಷವಾಗಿದ್ದ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಜನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆದಿದೆ. …

Read More »

ತಾಳಗುಪ್ಪ- ಬೆಂಗಳೂರು ರೈಲಿನ ಇಂಜಿನ್-ಬೋಗಿಗಳ ಸಂಪರ್ಕ ಕಡಿತ; ತಡವಾಗಿ ಸಂಚಾರ

ಶಿವಮೊಗ್ಗ: ತಾಳಗುಪ್ಪ- ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಇಂಜಿನ್ ಹಾಗೂ ಬೋಗಿಗಳ ನಡುವೆ ಸಂಪರ್ಕ ತಪ್ಪಿದ್ದು ತಡವಾಗಿ ಸಂಚರಿಸಿದೆ. ರೈಲು ಇಂದು ಬೆಳಗ್ಗೆ 7.15 ಕ್ಕೆ ಶಿವಮೊಗ್ಗ ನಿಲ್ದಾಣ ಬಿಟ್ಟಿತ್ತು. ಭದ್ರಾವತಿಗೆ ಬೆಳಗ್ಗೆ 7:40 ರ ಸುಮಾರಿಗೆ ತಲುಪಬೇಕಿತ್ತು. ಭದ್ರಾವತಿ ಪಟ್ಟಣ ಸಮೀಪದ ಬಿಳಕಿ ಕ್ರಾಸ್ ಬಳಿ ನಿಧಾನವಾಗಿ ಚಲಿಸುತ್ತಾ ನಿಂತು ಬಿಟ್ಟಿದೆ. ಪ್ರಯಾಣಿಕರು ಏನಾಯಿತು ಎಂದು ನೋಡುವಷ್ಟರಲ್ಲಿ ಇಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ್ದು ಗೋಚರಿಸಿದೆ. ಇದನ್ನರಿತ ಲೋಕೊ …

Read More »

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನೋರ್ವ ಬಲಿಯಾಗಿದ್ದಾನೆ.

ಮಂಡ್ಯ: ಇಂಡಿಯನ್​ ಪ್ರೀಮಿಯರ್ ಲೀಗ್​ (ಐಪಿಎಲ್) ಬೆಟ್ಟಿಂಗ್ ವಿಚಾರದಲ್ಲಿ ಹಣಕ್ಕಾಗಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ (25) ಕೊಲೆಯಾದ ದುರ್ದೈವಿಯಾಗಿದ್ದು, ಈತ ಎಳನೀರು ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಐಪಿಎಲ್​ ಬೆಟ್ಟಿಂಗ್​ ಹಣ ಪಡೆಯಲೆಂದು ಬುಧವಾರ ಪುನೀತ್​ ತನ್ನ ಕೆಲ ಸ್ನೇಹಿತರೊಂದಿಗೆ ಹುಲಿಗೆರೆಪುರ ಗ್ರಾಮಕ್ಕೆ ತೆರಳಿದ್ದ. ಆದರೆ, ಈ ಸಂದರ್ಭದಲ್ಲಿ ಸೌಮ್ಯ ಬಾರ್ …

Read More »

ಮೂರ್ನಾಲ್ಕು ತಿಂಗಳಿಂದ ಸಿಗದ ಸಂಬಳ: ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರು

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿಂದ ಸಂಬಳ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದಾರೆ. ಬಿರು ಬಿಸಲು, ಕೊರೆವ ಚಳಿ ಲೆಕ್ಕಿಸದೆ ಇವರು ಕೆಲಸ ಮಾಡುತ್ತಾರೆ. ಆದರೆ ಸುಮಾರು 3-4 ತಿಂಗಳಿಂದ ಸಂಬಳವಿಲ್ಲದೆ ಪರದಾಡುವಂತಾಗಿದೆ ಎಂದು ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ತೀವ್ರ ಬೇಸರ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ನೀಡುವ ಗೌರವ ಧನ …

Read More »

ವಿಜಯಪುರದಲ್ಲಿ ಹಿಟ್​ &​ ರನ್ ಪ್ರಕರಣ​: ಅತ್ತೆ-ಅಳಿಯ ಸಾವು, ಇಬ್ಬರು ಮಕ್ಕಳಿಗೆ ಗಾಯ

ವಿಜಯಪುರ: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪರಾಧ ಘಟನೆಗಳು ನಡೆದಿವೆ. ಒಂದು ಪ್ರಕರಣದಲ್ಲಿ ಟಿಪ್ಪರ್​ ಚಾಲಕನ ಅತಿವೇಗದ ಚಾಲನೆಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬೇಸಗೆ ರಜೆಗೆಂದು ಮನೆಗೆ ಬಂದಿದ್ದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿಯ ವಿವರ ಇಲ್ಲಿದೆ. ಅಪಘಾತದಲ್ಲಿ ಅತ್ತೆ-ಅಳಿಯ ಸಾವು: ಬೈಕ್​ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಗುರುವಾರ …

Read More »

A.I.C.C. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದ ಬೆಳಗಾವಿ ಶಾಸಕರು

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿತು. ನವದೆಹಲಿಯ ಖರ್ಗೆ ನಿವಾಸಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ, ಶಾಸಕರುಗಳಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್, ಮಹೇಂದ್ರ ತಮಣ್ಣವರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಖರ್ಗೆ …

Read More »

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ …

Read More »