Breaking News
Home / ರಾಜಕೀಯ (page 509)

ರಾಜಕೀಯ

ಜಾತ್ರೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಹೃದಯಾಘಾತದಿಂದ ಸಾವು.!

ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುತ್ಯಾಲಮ್ಮ ಜಾತ್ರೆಯಲ್ಲಿ ಏರ್​ ಬಲೂನ್​ ಜಂಪಿಂಗ್​​ ಆಟವಾಡುತ್ತಿದ್ದ ಬಾಲಕ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕ ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಮಂಜುನಾಥ್ ಎಂಬುವರ ಪುತ್ರ 9 ವರ್ಷದ ಶ್ರೇಯಸ್​ ಎಂದು ತಿಳಿದುಬಂದಿದೆ. ಶ್ರೇಯಸ್​ ತನ್ನ ತಾಯಿ ಜೊತೆಗೆ ಜಾತ್ರೆಗೆ ಹೋಗಿದ್ದನು ಎನ್ನಲಾಗಿದೆ. ಜಾತ್ರೆಯಲ್ಲಿ ಮಕ್ಕಳ ಮನೋರಂಜನೆಗಾಗಿ ಹಾಕಲಾಗಿರುವ ವಿವಿಧ ಆಟಗಳಲ್ಲಿ ತೊಡಗಿದ್ದ. ಏರ್​ ಬಲೂನ್​ ಜಂಪಿಂಗ್​ ಮಾಡುತ್ತಿದ್ದಾಗ ಶ್ರೇಯಸ್​ಗೆ ಹೃದಯಾಘಾತವಾಗಿದೆ. ನಿತ್ರಾಣಗೊಂಡು …

Read More »

ಸಿಬಿಐ ನೂತನ ನಿರ್ದೇಶಕರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

ನವದೆಹಲಿ: ಕೇಂದ್ರೀಯ ತನಿಖಾ ದಳದ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್​ ಅಧಿಕಾರಿ ಪ್ರವೀಣ್ ಸೂದ್​ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್​ ಮಹಾನಿರ್ದೇಶಕರಾಗಿದ್ದ ಪ್ರವೀಣ್​ ಸೂದ್ ಅವರನ್ನು ಮೇ 14ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಇಂದಿಗೆ ಮುಕ್ತಾಯವಾಗಿದೆ.  

Read More »

ಒಂದು ಕೈ, ಎರಡೂ ಕಾಲು ಕಳೆದುಕೊಂಡ ಛಲದಂಕ ಮಲ್ಲನಿಗೆ UPSC ಪರೀಕ್ಷೆಯಲ್ಲಿ 917ನೇ ರ‍್ಯಾಂಕ್‌!

ಉತ್ತರ ಪ್ರದೇಶ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ ಬಹುನಿರೀಕ್ಷಿತ ನಾಗರಿಕ ಸೇವಾ ಪರೀಕ್ಷೆ 2022 ನೇ ಸಾಲಿನ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಕಸ್ವಾ ಕುರವ್ಲಿ ಎಂಬ ಪ್ರದೇಶದ ನಿವಾಸಿ ಸೂರಜ್ ತಿವಾರಿ ಎಂಬವರು 2017 ರಲ್ಲಿ ಸಂಭವಿಸಿದ ಅಪಘಾತದಲ್ಲಿ ತಮ್ಮ ಎರಡೂ ಕಾಲುಗಳು ಮತ್ತು ಒಂದು ಕೈ ಕಳೆದುಕೊಂಡಿದ್ದರೂ ಸಹ ಛಲಬಿಡದೆ ಸತತ ಪರಿಶ್ರಮ ಹಾಕಿ ಓದಿ ಇದೀಗ 917 ನೇ ಸ್ಥಾನ …

Read More »

ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ರವಿ ಅಲಿಯಾಸ್ ಮತ್ತಿರವಿ (42) ಕೊಲೆಯಾದವರು. ಲಗ್ಗೆರೆ ಬಳಿಯ ಚೌಡೇಶ್ವರಿ ನಗರದಲ್ಲಿ ಬುಧವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಬೈಕ್​ಗಳಲ್ಲಿ ಬಂದ ಐವರು ರವಿಯನ್ನು ಕೊಂದಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಟೆಂಪೋ ಟ್ರಾವೆಲ್ಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆ ಮಾಡುತ್ತಿದ್ದ ರವಿ, ಕಾಂಗ್ರೆಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಆ ಬಳಿಕ ಸಿಎಂಎಚ್ …

Read More »

ಪತಿರನ ಬೌಲಿಂಗ್​ಗಾಗಿ 4 ನಿಮಿಷ ಆಟ ನಿಲ್ಲಿಸಿದ ಧೋನಿ!: ಗವಾಸ್ಕರ್​ ಪ್ರತಿಕ್ರಿಯೆ ಹೀಗಿದೆ..

ಚೆನ್ನೈ: ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಪಂದ್ಯದ ವೇಳೆ ಮೈದಾನದಲ್ಲಿ ಮಾಡುವ ಚಾಣಾಕ್ಷ ತಂತ್ರಗಳು ಒಂದೆರಡಲ್ಲ. ಅವುಗಳು ಎದುರಾಳಿ ತಂಡವನ್ನು ಸೋಲಿನ ದವಡೆಗೆ ಸಿಲುಕಿಸುತ್ತವೆ. ಆದರೆ, ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ತಂಡದ ಬೌಲರ್​ಗಾಗಿ ನಾಲ್ಕು ನಿಮಿಷ ಆಟವನ್ನು ಬೇಕಂತಲೇ ನಿಲ್ಲಿಸಿದ್ದರು. ಧೋನಿ ತಳೆದ ಈ ನಿರ್ಧಾರ ಚರ್ಚೆಗೀಡು ಮಾಡಿದೆ. ಇದು ದೋನಿಯದ್ದಲ್ಲ, ಅಂಪೈರ್​ಗಳ ತಪ್ಪು ಎಂದು ಹಿರಿಯ ಕ್ರಿಕೆಟಿಗ ಸುನೀಲ್​ ಗವಾಸ್ಕರ್​ ಟೀಕಿಸಿದ್ದಾರೆ. ಏನಾಯ್ತು?: ಗುಜರಾತ್​ ವಿರುದ್ಧದ ಪಂದ್ಯದಲ್ಲಿ 16 ನೇ …

Read More »

ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ: ಇಬ್ಬರು ಸಾವು

ತುಮಕೂರು: ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆ ಈ ಅವಧಿಯಲ್ಲಿ ಬಹುತೇಕ ಜನರು ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಪ್ರವಾಸ ಕೈಗೊಳ್ಳುವುದು ಸಹಜ. ಅಂತೆಯೇ ರಾಯಚೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ 11 ಜನರಿಗೆ ಮಾರ್ಗಮಧ್ಯೆ ಜವರಾಯ ಅಡ್ಡಿಯಾಗಿದ್ದಾನೆ. ರಸ್ತೆಯಲ್ಲಿ ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) …

Read More »

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ: ಸ್ಪೀಕರ್ ಯು ಟಿ ಖಾದರ್

ಮಂಗಳೂರು: ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ಟ್ರೈನಿಂಗ್ ಕ್ಯಾಂಪ್ ಆಯೋಜಿಸಲಾಗುವುದು ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಹೇಳಿದರು.   ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶೇ.70ರಷ್ಟು ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳೇನು?. ಅದನ್ನು ಹೇಗೆ ಪಾಲನೆ ಮಾಡಬೇಕು, ವಿಧಾನಸಭೆಯ ಚರ್ಚೆಯಲ್ಲಿ ಗೌರವ ಹೆಚ್ಚಿಸಿಕೊಂಡು …

Read More »

ಪೂರ್ಣ ಪ್ರಮಾಣದ ಸಂಪುಟ ರಚನೆಗೊಳ್ಳದ ಹೊರತು, ಸಚಿವರಿಗೆ ಖಾತೆ ಹಂಚಿಕೆಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹೊರತು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ ಸಿಎಂ ಮತ್ತು ಡಿಸಿಎಂ ಸೇರಿದಂತೆ ಹಾಲಿ ಎಂಟು ಜನ ಸಚಿವರುಗಳಿಗೆ ಯಾವುದೇ ಖಾತೆ ಹಂಚಿಕೆ ಮಾಡಲು ತನ್ನ ಒಪ್ಪಿಗೆ ನೀಡದಿರುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ.   ದೆಹಲಿಯಲ್ಲಿ ಬುಧವಾರದಿಂದ ಮಂತ್ರಿಮಂಡಲ ವಿಸ್ತರಣೆ ಸಂಬಂಧ ಸರಣಿ ಸಭೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿ ಪಕ್ಷದ ಹೈಕಮಾಂಡ್ ನಡೆಸುತ್ತಿದ್ದಾರೆ. ಪೂರ್ಣ ಪ್ರಮಾಣದ ಮಂತ್ರಿ …

Read More »

ಅಶ್ವತ್ಥನಾರಾಯಣ ವಿರುದ್ಧ ಮತ್ತೊಮ್ಮೆ F.I.R.

ಮೈಸೂರು : ಟಿಪ್ಪು ಸುಲ್ತಾನ್ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದ ಅಂದಿನ ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಅಶ್ವತ್ಥನಾರಾಯಣ ಇಂತಹ ಹೇಳಿಕೆ ನೀಡಿದ್ದರು. ಫೆ.17ರಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಅವರ ವಿರುದ್ಧ ದೂರು ನೀಡಿದ್ದರೂ ಕ್ರಮವಾಗಿರಲಿಲ್ಲ. ಹಾಗಾಗಿ ಬುಧವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ ಮತ್ತೊಮ್ಮೆ ದೂರು …

Read More »

ನಿತಿನ್​ ಗಡ್ಕರಿಗೆ ಕೊಲೆ ಬೆದರಿಕೆ: ಹಿಂಡಲಗಾ ಜೈಲಿನ ಕೈದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಎನ್‌ಐಎ

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ. ಇದಾದ ಬಳಿಕ ಮಾರ್ಚ್​ …

Read More »