Breaking News
Home / ರಾಜಕೀಯ (page 511)

ರಾಜಕೀಯ

ಸತೀಶ್‌ ಜಾರಕಿಹೊಳಿ ಅವರನ್ನು ಆಶೀರ್ವದಿಸಿದ ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ. ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ …

Read More »

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾದಗಿರಿ: ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಲ್ಲಕಿ ಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಯಲ್ಲಕಿ ಗೌಡ ಪಿರಿಯಾಪಟ್ಟಣದ ಬ್ಯಾಂಕ್ನಲ್ಲಿ ರೂ.15 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ರೂ.6 …

Read More »

ಪಂಚಮಸಾಲಿ ಲಿಂಗಾಯತ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು: ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಯ ಕೈಗೊಂಡಿದೆ. ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಗಳನ್ನು ಕೈಗೊಂಡಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಪೂರ್ವಭಾವಿ …

Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ …

Read More »

ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ …

Read More »

ಇದು ಸಮ್ಮಿಶ್ರ ಸರ್ಕಾರ, ತುಂಬಾ ದಿನ ಇರಲ್ಲ: ಆರ್. ಅಶೋಕ್ ಸ್ಫೋಟಕ ಭವಿಷ್ಯ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಕೆ ಶಿವಕುಮಾರ್ ಗರಂ ಆಗಿದ್ದಕ್ಕೆ ಬಿಜೆಪಿ ಶಾಸಕ ಆರ್. ಅಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ಕರೆದು ಅಧಿಕಾರಿಗಳಿಗೆ ಆ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಮೊದಲ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಅಂದ್ರ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ ಅನ್ನುವಂತಾಗಿದೆ. ಬಿಜೆಪಿ, ಕಾಂಗ್ರೆಸ್, …

Read More »

ಟಿಕೆಟ್‌ಗೆ ದುಡ್ಡುಕೊಡಲ್ಲ: ಕಂಡಕ್ಟರ್‌ ಜೊತೆಗೆ ಅಜ್ಜಿ ಗಲಾಟೆ ವಿಡಿಯೋ ವೈರಲ್‌

ರಾಯಚೂರು: ಮಸ್ಕಿಯಿಂದ ಸಿಂಧನೂರುಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಗೆ ಅಜ್ಜಿಯೊಬ್ಬರು ಪ್ರಯಾಣದ ಹಣವನ್ನು ನೀಡಲು ನಿರಾಕರಿಸಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಅಜ್ಜಿ ಕಂಡಕ್ಟರ್‌ ಜೊತೆಗೆ ಕಿರಿಕ್‌ ಮಾಡಿದ್ದು, ಆದೇಶವನ್ನು ಮಾಡಿದ್ದು, ನಮ್ಮ ಶಾಸಕರು ಹೇಳಿದ್ದಾರೆ, ಹೀಗಾಗಿ ನಾನು ಯಾಕೆ ಟಿಕೆಟ್‌ ತಗೊಳ್ಳಬೇಕು ಅಂತ ವಾಗ್ದಾಳಿ ನಡೆಸಿದ್ದಾರೆ.   ಅಂದ ಹಾಗೇ ಕಾಂಗ್ರೆಸ್ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣ ಮಾಡುವ ಮಹಿಳಾ ಪ್ರಯಾಣಿಕರಿಗೆ …

Read More »

ಡಿ.ಕೆ.ಶಿ. ಸಿದ್ದರಾಮಯ್ಯ ಸಂಜೆ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ಇಂದು ಮಧ್ಯಾಹ್ನವೇ ಡಿ.ಕೆ.ಶಿವಕುಮಾರ ದೆಹಲಿಗೆ ಹೊರಟಿದ್ದಾರೆ. ಸಿದ್ದರಾಮಯ್ಯ ಸಂಜೆ ತೆರಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಚಿವಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದೆಹಲಿಗೆ ಆಹ್ವಾನಿಸಿದೆ ಎಂದು ಗೊತ್ತಾಗಿದೆ. ಗುರುವಾರ ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ನಾಯಕರೊಂದಿಗೆ ಸಭೆ ನಿಗದಿಯಾಗಿದೆ.   ಡಿ.ಕೆ.ಶಿವಕುಮಾರ ಅವರು ಮಧ್ಯಾಹ್ನ 2.55ರ ವಿಮಾನವನ್ನೇರಲಿದ್ದಾರೆ. …

Read More »

ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಮಂತ್ರಿವಾದಿ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರಗೂರಿನಲ್ಲಿ ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್ ದೀಪಕ್​ ಲಂಡ್ಗೆ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ : …

Read More »

ನಿಮ್ಮ ತಕ್ಕಡಿ ಸಮವಾಗಿರಲಿ’: ನೂತನ ಸ್ಪೀಕರ್​ಗೆ ಮಾಜಿ ಸಿಎಂ ಬೊಮ್ಮಾಯಿ‌ ಸಲಹೆ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಾಸಕ ಯು.ಟಿ. ಖಾದರ್ ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿ, ‘ನಿಮ್ಮ ತಕ್ಕಡಿ ಸಮವಾಗಿ ಇರಲಿ’ ಎಂದು ಸಲಹೆ ನೀಡಿದರು. ವಿಧಾನಸಭೆಯಲ್ಲಿ ಇಂದು ನೂತನ ಸ್ಪೀಕರ್ ಆಯ್ಕೆಯ ಬಳಿಕ ಮಾತನಾಡಿದ ಅವರು, ‘ಕರ್ನಾಟಕದ ವಿಧಾನಮಂಡಲ ತನ್ನದೇ ಆದ ಘನತೆ ಹೊಂದಿದೆ. ಇಂತಹ ಮಹತ್ವದ ಸದನದ ಸಭಾಧ್ಯಕ್ಷರಾಗಿ ನೀವು ಆಯ್ಕೆಯಾಗಿರುವುದಕ್ಕೆ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮಗೆ 20 ವರ್ಷದ ರಾಜಕೀಯ …

Read More »