ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. …
Read More »ಬೆಂಗಳೂರು ಕಟ್ಟಡ ಕುಸಿತ’ ಪ್ರಕರಣ : ಮೃತ 8 ಜನರ ಕುಟುಂಬಕ್ಕೆ ತಲಾ ‘2 ಲಕ್ಷ’ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.!
ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ. ಈವರೆಗೆ ಕಟ್ಟಡದ …
Read More »ವಾಲ್ಮೀಕಿ’ ಸಮುದಾಯಕ್ಕೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ …
Read More »ವಿಧಾನ ಪರಿಷತ್ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ …
Read More »ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ಓಪನ್
ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ. …
Read More »ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ
ಬೆಳಗಾವಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Read More »ಸಿಪಿವೈ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು …
Read More »ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ. ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್ …
Read More »ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಹೋರಾಟ ರೈತ ಮಕ್ಕಳಿಗೆ ಮೀಸಲು ನ್ಯಾಯ ಒದಗಿಸುವ ಹೋರಾಟವಾಗಿದೆ. ಸಾಮಾಜಿಕ ನ್ಯಾಯ, ಮೀಸಲು ಬಗ್ಗೆ ಸಕಾರಾತ್ಮಕ ಚಿಂತನೆ ಹೊಂದಿದ ಮುಖ್ಯಮಂತ್ರಿಯವರು ಮೀಸಲು ಬೇಡಿಕೆಗೆ ಕಾಲಮಿತಿ ಕ್ರಮದ ಭರವಸೆ ನೀಡದಿರುವುದು ಬೇಸರ-ನೋವು ತರಿಸಿದೆ. ಸಮಾಜದ ಕೆಲವರು ಮೀಸಲು ಹೋರಾಟವನ್ನು ಟ್ರಂಪ್‌ಕಾರ್ಡ್ ಆಗಿಸಿಕೊಂಡು ಅಧಿಕಾರಕ್ಕೇರಿ, ಹೋರಾಟವನ್ನೇ ಮರೆತಿದ್ದಾರೆ, ಮೌನ ತಾಳಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಸರಕಾರ 2ಡಿ ಮೀಸಲು ನೀಡಲು ಮುಂದಾದರೂ, 2ಎ ಮೀಸಲು ಹೋರಾಟ ಜೀವಂತವಾಗಿರಿಸಿ 2ಡಿ …
Read More »ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!
ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು. ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. …
Read More »
Laxmi News 24×7