Breaking News

ರಾಜಕೀಯ

ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!

ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್‌ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …

Read More »

ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ

ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್‌-ಮಿಲಾದ್‌ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್‌-ಮಿಲಾದ್‌ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್‌-ಮಿಲಾದ್‌ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …

Read More »

ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ …

Read More »

ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ.   ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್‌ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …

Read More »

ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ

ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …

Read More »

ಕಲ್ಯಾಣ ಕರ್ನಾಟಕದ ಭಾಗದ ವಿವಿಧೆಡೆ ಮಳೆ

ಕಲಬುರಗಿ: ಹಲವು ದಿನಗಳ ಬಿಡುವಿನ ಬಳಿಕ ಕಲ್ಯಾಣ ಕರ್ನಾಟಕದ ಹಲವೆಡೆ ಶನಿವಾರ ಮಳೆಯಾಗಿದೆ. ಕಲಬುರಗಿ, ಬೀದರ್ ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ ಹಾಗೂ ಸಂಜೆ ಉತ್ತಮ ಮಳೆಯಾಗಿದೆ. ಗುಡುಗು ಸಹಿತ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲೂ ಜೋರು ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ಬೆಳಿಗ್ಗೆ ವರುಣ ಅಬ್ಬರಿಸಿದ್ದಾನೆ. ಕಲಬುರಗಿ ನಗರದಲ್ಲಿ ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಕಲಬುರಗಿಯಲ್ಲಿ ಬೆಳಿಗ್ಗೆ ತೀಕ್ಷ್ಣ …

Read More »

30 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ: ಫ್ರಿಡ್ಜ್‌ನಲ್ಲಿ ಮೃತದೇಹ ಬಚ್ಚಿಟ್ಟ ಆರೋಪಿ!

ಬೆಂಗಳೂರು: ನಗರದ ಮಲ್ಲೇಶ್ವರದ ಪೈಪ್‌ಲೈನ್‌ನ ಕೆ.ವಿ.ರಸ್ತೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರನ್ನು 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ, ಅವರ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ತಡವಾಗಿ ಪತ್ತೆಯಾಗಿದೆ. ಮಹಾಲಕ್ಷ್ಮಿ(29) ಕೊಲೆಯಾದವರು. ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು, ಪರಾರಿಯಾಗಿರುವ ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ತಜ್ಞರು, ಶ್ವಾನದಳ ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ದೆಹಲಿಯಲ್ಲಿ ನಡೆದಿದ್ದ ಶ್ರದ್ದಾ …

Read More »

ಲೋಕಾಯುಕ್ತ ಹೆಸರಿನಲ್ಲಿ ಹಣ ಕೇಳಿದರೆ ದೂರು ನೀಡಿ: ಲೋಕಾಯುಕ್ತ

ಬೆಂಗಳೂರು: ‘ಲೋಕಾಯುಕ್ತದ ಹೆಸರಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ನೌಕರರಿಗೆ ಕರೆ ಮಾಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಂತಹ ಕರೆ ಬಂದರೆ ತಕ್ಷಣವೇ ಗಮನಕ್ಕೆ ತನ್ನಿ’ ಎಂದು ಲೋಕಾಯುಕ್ತವು ಹೇಳಿದೆ. ‘ಸರ್ಕಾರಿ ನೌಕರರಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಅಥವಾ ಪ್ರಕರಣ ರದ್ದುಪಡಿಸಲು ಹಣ ನೀಡುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ. ಲೋಕಾಯುಕ್ತದಿಂದ ಯಾವುದೇ ವ್ಯಕ್ತಿಗಳು ಹಾಗೆ ಕರೆ ಮಾಡುವುದಿಲ್ಲ. ಅಂತಹ ಕರೆ ಬಂದರೆ, …

Read More »

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಪಿ.ಎಸ್.ಐ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಸುರೇಶ ಬಾಬಾಸಾಬ ಖೋತ (59) ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ಹೆಚ್ಚುವರಿ ಪಿಎಸ್‌ಐಯಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಬಂದೋಬಸ್ತ್ ಮುಗಿಸಿಕೊಂಡು ಮರಳಿ ಮನೆಗೆ ಬಂದಾಗ ಹೃದಯಾಘಾತವಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸದಲ್ಲಿ ಘಟನೆ ನಡೆದಿದ್ದು ತಕ್ಷಣವೇ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪಿಎಸ್‌ಐ ಸಾವನ್ನಪ್ಪಿದ್ದರಿಂದ …

Read More »