Breaking News

ರಾಜಕೀಯ

ಪೋಕ್ಸೊ ಪ್ರಕರಣ: ಶಿಕ್ಷಕ ಅಮಾನತು

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪೋಕ್ಸೊ ಪ್ರಕರಣದಡಿ ಬಂಧಿತನಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮೊಹಮ್ಮದ್ ಸಾದಿಕ್ ಮೀಯಾಬೇಗ್ (39) ಎಂಬುವನನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಬಿ. ಎ. ಮೇಕನಮರಡಿ ತಿಳಿಸಿದ್ದಾರೆ.   10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದರು.

Read More »

ರಾಜಿ ಸಂಧಾನ: 27,376 ಪ್ರಕರಣಗಳು ಇತ್ಯರ್ಥ

ಬಾಗಲಕೋಟೆ: ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ 27,376 ‍ಪ್ರಕರಣಗಳನ್ನು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ವಿವಿಧ ನ್ಯಾಯಾಲಯಗಳಲ್ಲಿನ 7,151 ಪೈಕಿ 4,819 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 24,107 ಪೈಕಿ 22,557 ಪ್ರಕರಣಗಳು ಇತ್ಯರ್ಥ ಮಾಡಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ವಿ.ವಿಜಯ ನೇತೃತ್ವದಲ್ಲಿ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ₹25.11 ಕೋಟಿ ಮೊತ್ತದ ಪ್ರಕರಣಗಳಿಗೆ …

Read More »

ಗೃಹಲಕ್ಷ್ಮಿ’ ಯೋಜನೆ ನಿತ್ಯ, ನಿರಂತರ : 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್ ಹೇಳಿಕೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ …

Read More »

ಮಂಡ್ಯದಲ್ಲಿ ಮತ್ತೊಂದು ಗಲಾಟೆ

ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಪೆಟ್ರೋಲ್ ಬಾಂಬ್ ಎಸೆತ ಘಟನೆ ಮಾಸುವ ಬೆನ್ನಲ್ಲೇ ಮಂಡ್ಯದಲ್ಲಿ ತಡರಾತ್ರಿ ಮತ್ತೊಂದು ವಿವಾದ ನಡೆದಿದೆ. ಪಾಂಡವಪುರದಲ್ಲಿರುವ ಆರ್‌ಎಸ್‌ಎಸ್‌ ಕಚೇರಿಗೆ ಏಕಾಏಕಿ ನುಗ್ಗಿದ ಪೊಲೀಸರು ಅಲ್ಲಿದ್ದವರನ್ನು ವಶಕ್ಕೆ ಪಡೆಯಲು ವಿಫಲ ಯತ್ನ ನಡೆಸಿದ್ದಾರೆ. ರೊಚ್ಚಿಗೆದ್ದ ಕಾರ್ಯಕರ್ತರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಶರಣ್ ಪಂಪ್‌ವೆಲ್ ಮಂಡ್ಯಕ್ಕೆ ಬಂದಿದ್ದಾರೆಂಬ ಮಾಹಿತಿಯ ಮೇಲೆ ಪೊಲೀಸರು ಆರ್‌ಎಸ್‌ಎಸ್‌ ಕಚೇರಿಗೆ ತೆರಳಿದ್ದರು. ಆದರೆ …

Read More »

ಮೂಡದ ಜಾಗೃತಿ; ಜೀವಜಲ ಕಲುಷಿತ

ಬೆಳಗಾವಿ: ನಗರದ ಜಲಮೂಲಗಳನ್ನು ರಕ್ಷಣೆ ಮಾಡುವಲ್ಲಿ ಈ ವರ್ಷವೂ ಮಹಾನಗರ ಪಾಲಿಕೆ ಹಿಂದೆ ಬಿದ್ದಿದೆ. ನಗರದಲ್ಲಿ ಎಲ್ಲೆಂದರಲ್ಲಿ ಪಿಒಪಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಈಗಾಗಲೇ ಐದು ದಿನಗಳ ಗಣಪತಿಗಳನ್ನು ವಿಸರ್ಜನೆಯೂ ಮಾಡಲಾಗಿದೆ. ಈ ಬಾರಿಯೂ ನದಿ, ಹಳ್ಳ, ಬಾವಿ, ಕೆರೆಗಳಲ್ಲಿಯೇ ವಿಸರ್ಜನೆ ಮಾಡಿದ್ದು ಬಹುಪಾಲು ಕಡೆ ಕಂಡುಬಂದಿದೆ. ‘ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಿ. ಪರಿಸರ ಸ್ನೇಹಿ ಮೂರ್ತಿಗಳನ್ನು ನಿರ್ದಿಷ್ಟವಾದ ಹೊಂಡಗಳಲ್ಲೇ ವಿಸರ್ಜಿಸಿ. ಒಂದುವೇಳೆ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ)ನಿಂದ ತಯಾರಿಸಿದ್ದ ಮೂರ್ತಿಗಳಿದ್ದರೆ, …

Read More »

ಶಿಕ್ಷಕರಿಗೆ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ ಪ್ರದಾನ

ಚಿಕ್ಕೋಡಿ: ‘ಶಿಕ್ಷಕರು ಮಕ್ಕಳಿಗೆ ಗುರಿಯ ಬಗ್ಗೆ ಹೇಳಿಕೊಡಬೇಕು. ಮಕ್ಕಳಲ್ಲಿ ಏಕಾಗ್ರತೆ ಮೂಡಿಸಬೇಕು, ನಗು ನಗುತ್ತ ಪಾಠ ಮಾಡಬೇಕು’ ಎಂದು ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪದ್ಮಶ್ರೀ ರೂಗೆ ಸಲಹೆ ನೀಡಿದರು. ಪಟ್ಟಣದ ಆರ್.ಡಿ ಹೈಸ್ಕೂಲ್‌ನ ಧೋಂಡಿರಾಜ್ ಸಭಾ ಭವನದಲ್ಲಿ ರೋಟರಿ ಕ್ಲಬ್ ಸಹಯೋಗದಲ್ಲಿ ಶನಿವಾರ ‘ರಾಷ್ಟ್ರ ನಿರ್ಮಾಣ ಪ್ರಶಸ್ತಿ’ಯನ್ನು ಶಿಕ್ಷಕರಿಗೆ ವಿತರಿಸಿ ಅವರು ಮಾತನಾಡಿದರು. ಶಿಕ್ಷಕ ಉಮೇಶ ತೋಟದ ಮಾತನಾಡಿ, ‘ಶಿಕ್ಷಕರನ್ನು ಮಕ್ಕಳು ಅನುಕರಣೆ ಮಾಡುತ್ತಾರೆ. ಹೀಗಾಗಿ …

Read More »

ಲೋಕ ಅದಾಲತ್‌: 400 ಬಾಕಿ ಪ್ರಕರಣ ಇತ್ಯರ್ಥ

ಸವದತ್ತಿ: ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಅದಾಲತ್‌ನಲ್ಲಿ ಬಾಕಿ ಇರುವ 1388 ಪ್ರಕರಣಗಳನ್ನು ಕೈಗೆತ್ತಿಕೊಂಡು 400 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿ ಸುಮಾರು ₹ 94 ಲಕ್ಷದಷ್ಟು ವಸೂಲಾತಿ ಮಾಡಲಾಯಿತು. 3440 ವ್ಯಾಜ್ಯಪೂರ್ವ ಪ್ರಕರಣಗಳ ಪೈಕಿ 702ನ್ನು ಇತ್ಯರ್ಥಪಡಿಸಿ ಸುಮಾರು ₹ 1.15 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ನ್ಯಾಯಾಧೀಶ ಶಶಿಧರ ಎಂ. ಗೌಡ ತಿಳಿಸಿದರು. ಈ …

Read More »

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಎಂದೂ ಒಪ್ಪಲ್ಲ, ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್‌ ಕೊಟ್ಟಿದ್ದೇ ಬಿವೈ ವಿಜಯೇಂದ್ರ:ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಬಿಜೆಪಿ ( BJP) ನಾಯಕರ ಜೊತೆ ಆರ್‌ಎಸ್‌ಎಸ್ (RSS) ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರತಿಕ್ರಿಯೆ ನೀಡಿದ್ದು, ಈ ಸಂದರ್ಭದಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಗುಡುಗಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಿರುದ್ದ ಮತ್ತೊಮ್ಮೆ ಗುಡುಗಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ (BJP State President) ಎಂದು ಒಪ್ಪಿಲ್ಲ ಒಪ್ಪುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.   ವಿಜಯೇಂದ್ರವ ರಾಜ್ಯಾಧ್ಯಕ್ಷ ಸ್ಥಾನ …

Read More »

ಗೋಣಿಚೀಲದ ಪ್ಯಾಂಟ್! ಈ ಪಲಾಝೋ ಬೆಲೆ ಕೇವಲ 60 ಸಾವಿರ ರೂ.

ನವದೆಹಲಿ: ಫ್ಯಾಷನ್ ವೇಗವಾಗಿ ಬದಲಾಗುವ ಒಂದು ವಿಷಯವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ಇರುತ್ತದೆ, ಫ್ಯಾಶನ್ ತುಂಬಾ ವೇಗವಾಗಿ ಬದಲಾಗುತ್ತದೆ. ಕೆಲವೊಮ್ಮೆ ಇಂತಹ ಕೆಲವು ಫ್ಯಾಷನ್‌ಗಳು ಜನರನ್ನು ಬೆಚ್ಚಿ ಬೀಳಿಸುತ್ತವೆ. ಇದೀಗ ಅಂತಹ ಒಂದು ಫ್ಯಾಶನ್ ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯವರೆಗೆ ನೀವು ಅನೇಕ ರೀತಿಯ ಬಟ್ಟೆಗಳಿಂದ ಮಾಡಿದ ಪಲಾಝೋ ಪ್ಯಾಂಟ್​​ಗಳನ್ನು ನೋಡಿರಬಹುದು. ನೀವು ವಿವಿಧ ಬಣ್ಣಗಳು ಮತ್ತು ಬೆಲೆಗಳ ಪಲಾಜೋಗಳನ್ನು ನೋಡಿರಬೇಕು ಮತ್ತು ಖರೀದಿಸಿರಬೇಕು. ಆದರೆ ನೀವು …

Read More »

ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋ ಇದೆಚಾಲುವರಾಜು ಸ್ಫೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ. ಅವುಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಾಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ, ಮಾತನಾಡಿದ ಚಲುವರಾಜು, ಮುನಿರತ್ನ ಅವರ ಇನ್ನೂ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ. ಶಾಸಕ ಮುನಿರತ್ನ ಕಳೆದ ಮೂರು ವರ್ಷಗಳಿಂದ ತನಗೆ ಕೊಡಬಾರದ ಹಿಂಸೆ …

Read More »