ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್ ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …
Read More »ರಾಜ್ಯ ಸರ್ಕಾರ ಗಲಾಟೆ ಮಾಡುವವರಿಗೆ ಶಕ್ತಿ, ಕುಮ್ಮಕ್ಕು ನೀಡುತ್ತಿದೆ’
ಶಿವಮೊಗ್ಗ ಸೆಪ್ಟೆಂಬರ್ 12: ಮಂಡ್ಯ ನಾಗಮಂಗಲ ಗಲಾಟೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ವಿರುದ್ಧ ವಿಪಕ್ಷಗಳ ವಾಗ್ದಾಳಿಗೆ ಕಾರಣವಾಗಿದೆ. ಮಂಡ್ಯ ಗಲಭೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ದೂರಲಾಗುತ್ತಿದೆ. ಈ ಬಗ್ಗೆ ಶಾಸಕ ಚನ್ನಬಸಪ್ಪ ಪ್ರತಿಕ್ರಿಯೆ ನೀಡಿದ್ದು ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಶಾಸಕ ಚನ್ನಬಸಪ್ಪ, ನಾಗಮಂಗಲ ಗಲಾಟೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. …
Read More »ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ
ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 13ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ …
Read More »ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ …
Read More »KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ
ಬೆಂಗಳೂರು: ಕೆಎಸ್‌ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೆಎಸ್‌ಆರ್ಟಿಸಿ ಅಧಿಕೃತ ವೆಬ್ಸೈಟ್www.ksrtcjob.karnataka.gov.inನಲ್ಲಿ ಕರೆ ಪತ್ರ ಸೆಪ್ಟೆಂಬರ್ 13ರ ಮಧ್ಯಾಹ್ನ 1 ಗಂಟೆಯಿಂದ ಲಭ್ಯವಾಗಲಿದೆ. ಅಭ್ಯರ್ಥಿಗಳು ಆ ಕರೆತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ …
Read More »ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಬಲವರ್ಧನೆಗೆ ಕ್ರಮ: ದಿನೇಶ ಗುಂಡೂರಾವ್
ಖಾನಾಪುರ(ಬೆಳಗಾವಿ ಜಿಲ್ಲೆ): ‘ಒಂದು ಮಗು ಸಾಧನೆಯತ್ತ ಹೆಜ್ಜೆಹಾಕಲು ಉತ್ತಮ ಆರೋಗ್ಯ ಹಾಗೂ ಶಿಕ್ಷಣ ಅಗತ್ಯ. ರಾಜ್ಯದಲ್ಲಿ ಆದ್ಯತೆ ಮೇರೆಗೆ ಆರೋಗ್ಯ ವ್ಯವಸ್ಥೆ ಬಲವರ್ಧನೆಗೆ ಕ್ರಮ ವಹಿಸುತ್ತಿದ್ದೇವೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಿರ್ಮಿಸಿದ 60 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿ ಹಾಗೂ ನಬಾರ್ಡ್ ಯೋಜನೆಯಡಿ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು …
Read More »ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬುಧವಾರ ಹೇಳಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ನಾಯಕತ್ವ ಬದಲಾದರೆ ಸಿಎಂ ಆಗುವ ರೇಸ್‌ಗೆ ಕಾಂಗ್ರೆಸ್‌ನ ಕೆಲ …
Read More »ಕಸ ತಂದು ಸುರಿದ ಲಾರಿ ಚಾಲಕನಿಗೆ ₹5,000 ದಂಡ
11: ಜಾಸ್ತಿ ಮೈಮೇಲೆ ಬಿಟ್ಟುಕೊಂಡ್ರೆ ತಲೆ ಮೇಲೆ ಕುಳಿತುಕೊಂಡುಬಿಡ್ತಾರೆನ್ನುವ ಮಾತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಹೊರ ರಾಜ್ಯದವರದ್ದೇ ದರ್ಬಾರ್ ಆಗ್ಬಿಟ್ಟಿದೆ. ಆದ್ರೆ ಕನ್ನಡಿಗರು ಒಮ್ಮೆ ತಾಳ್ಮೆ ಕಳೆದುಕೊಂಡರೆ, ಮೆರೆಯುವವರ ಬುಡಕ್ಕೆ ಬೆಂಕಿ ಇಡುತ್ತಾರೆನ್ನುವುದು ತಿಳಿದಿರಬೇಕಾಗುತ್ತದೆ. ಇದೀಗ ಕೇರಳದಿಂದ ಕಸ ತಂದು ರಾಜ್ಯದಲ್ಲಿ ಸುರಿದ ಲಾರಿ ಚಾಲಕನಿಗೆ ಗುಂಡ್ಲುಪೇಟೆ ಪುರಸಭೆ ದಂಡ ವಿಧಿಸಿ, ಛೀಮಾರಿ ಹಾಕಿದೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ …
Read More »ಸೆ.15 ರಂದು ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ
ಸಿಂಧನೂರು: ‘ನಗರದಲ್ಲಿ ಕಿತ್ತೂರುರಾಣಿ ಚನ್ನಮ್ಮ ವೃತ್ತ ಹಾಗೂ ನೂತನ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.15 ರಂದು ನಡೆಯಲಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು. ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಅವರು, ‘ಸೆ.15 ರಂದು ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನದಿಂದ ಚನ್ನಮ್ಮ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ವಾಸವಿ ಕಲ್ಯಾಣ ಮಂಟಪದಲ್ಲಿ …
Read More »ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ
ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …
Read More »
Laxmi News 24×7