ಬೆಂಗಳೂರು: ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರ ಬರೆದಿದ್ದಾರೆ. ಯುವಜನತೆಯನ್ನು ಹಾಳು ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಆನ್ಲೈನ್ ಗೇಮ್ ಮತ್ತು ಬೆಟ್ಟಿಂಗ್ ಮತ್ತಿತರ ಆಯಪ್ ಗಳನ್ನು ನಿರ್ಬಂಧಿಸಬೇಕೆಂದು ಕೋರಿದ್ದಾರೆ. ಮಕ್ಕಳು, ಯುವಜನತೆ ಆನ್ಲೈನ್ ಬೆಟ್ಟಿಂಗ್ ಆಯಪ್ ಗಳ ವ್ಯಸನಿಗಳಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಮತ್ತು ಅವರ ಕುಟುಂಬದವರ …
Read More »ಮಾನವೀಯ ಮೌಲ್ಯಗಳೊಂದಿಗೆ ಪ್ರಾಮಾಣಿಕ ಬದುಕು ಕಟ್ಟಿಕೊಳ್ಳಿ; ಜ| ಸಂತೋಷ್ ಹೆಗ್ಡೆ
ಶಿರ್ವ: ದುರಾಸೆ ದೇಶದಲ್ಲಿ ರೋಗವಾಗಿ ಬೆಳೆಯುತ್ತಿದ್ದು, ಯುವಜನತೆ ಹೆತ್ತವರ ಸಹಕಾರದೊಂದಿಗೆ ಇದ್ದುದರಲ್ಲಿಯೇ ಸಂತಸ ಪಡುವ ಗುಣಗಳನ್ನು ಬೆಳೆಸಿಕೊಂಡಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ.ಮಾನವೀಯತೆ ಇದ್ದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕ ಬದುಕು ಕಟ್ಟಿಕೊಳ್ಳುವುದ ರೊಂದಿಗೆ ಸಮಾಜದ ಭಾವನೆಗಳನ್ನು ಬದಲಾಯಿಸಬಹುದು ಎಂದು ಸರ್ವೋತ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜ| ಎನ್.ಸಂತೋಷ್ ಹೆಗ್ಡೆ ಹೇಳಿದರು. ಅವರು ಸೆ.1 ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ …
Read More »ಕೋವಿಡ್ ಹಗರಣದ ತನಿಖೆಯಾಗಲಿ, ನಮಗೆ ಯಾವುದೇ ತೊಂದರೆಯಿಲ್ಲ: ಜೋಶಿ
ಹುಬ್ಬಳ್ಳಿ: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಮಾಡಲಿ ನಮಗೆ ಯಾವುದೇ ತೊಂದರೆಯಿಲ್ಲ. ಯಾರಾದರು ಭ್ರಷ್ಟಾಚಾರ ಮಾಡಿದ್ದರೆ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೋವಿಡ್ ಕಾಲದ ಹಗರಣದ ಬಗ್ಗೆ ಇವರಿಗೆ ನೆನಪಾಗಲಿಲ್ಲವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ …
Read More »ಧರ್ಮ ಗೌರವಿಸುವ ಜನರೊಂದಿಗೆ ವ್ಯಾಪಾರ ಮಾಡಿ: ಯತ್ನಾಳ್
ವಿಜಯಪುರ: ಹಬ್ಬ-ಹರಿದಿನಗಳು ಸೇರಿ ಇತರ ದಿನಗಳಲ್ಲೂ ಸನಾತನ ಹಿಂದೂ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯವನ್ನು ಗೌರವಿಸುವ, ಪ್ರೀತಿಸುವ ಹಾಗೂ ಉಳಿಸಿ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಮ್ಮ ಹಿಂದೂ ಧರ್ಮ ನಮ್ಮ ದೇಶದ ಒಂದು ಜೀವನದ ಪದ್ದತಿ, ಸಂಸ್ಕೃತಿಯಾಗಿದೆ. ದೇಶದ ಸುರಕ್ಷತೆ, ಅಭಿವೃದ್ಧಿ ಜತೆಗೆ ಧರ್ಮದ ಉಳಿವಿಗಾಗಿ, ನಮ್ಮ ಧರ್ಮವನ್ನು ಗೌರವಿಸುವ, ದೇಶಾಭಿಮಾನ ಹೊಂದಿರುವ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರಿಂದ ಹಿಡಿದು, ದೊಡ್ಡ …
Read More »ʼಸಿಎಂ ಕುರ್ಚಿʼಗೆ ಕರ್ಚೀಫ್ ಹಾಕಿದ ಮತ್ತೊಬ್ಬ ನಾಯಕ; ಯಾರು?
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿರುವುದರ ನಡುವೆಯೇ ಈ ರೇಸ್‌ಗೆ ಮತ್ತೊಬ್ಬ ಕಾಂಗ್ರೆಸ್ ನಾಯಕ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಕುರ್ಚಿಯ ಪ್ರಬಲ ಆಕಾಂಕ್ಷಿ ಎನ್ನುವ ಗುಸುಗುಸು ಇದೆ. ಇದಲ್ಲದೆ ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ಸಿಎಂ ಆಗುವ ಬಗ್ಗೆ ಕನಸು ಕಾಣುತ್ತಿದ್ದಾರೆ. ಈಗ ಈ ಸಿಎಂ ರೇಸ್‌ಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೂಡ ಇಳಿದಿದ್ದಾರೆ. ತಾವು ಕೂಡ ಸಿಎಂ ಆಗಬೇಕು ಎನ್ನುವ …
Read More »ಗದಗ- ಬೆಟಗೇರಿ ನಗರಸಭೆ | ಗದ್ದುಗೆ ಗುದ್ದಾಟ: ಎರಡೂ ಪಕ್ಷದಿಂದ ‘ಚತುರ ನಡೆ’
ಗದಗ: ಇಲ್ಲಿನ ಗದಗ- ಬೆಟಗೇರಿ ನಗರಸಭೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ಮೊದಲನೇ ಅವಧಿ ಮುಗಿದು, ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡ ನಂತರದಿಂದ ಇಲ್ಲೀವರೆಗೆ ಹಲವು ರಾಜಕೀಯ ಮೇಲಾಟಗಳು, ಆರೋಪ- ಪ್ರತ್ಯಾರೋಪಗಳು, ಕಾನೂನು ಹೋರಾಟಗಳು ನಡೆದಿದ್ದು, ನಗರಸಭೆ ಗದ್ದುಗೆ ಏರಲು ಎರಡೂ ಪಕ್ಷಗಳು ನಡೆಸಿರುವ ಚತುರ ನಡೆಗಳು ಚುನಾವಣಾ ಕಣವನ್ನು ರಂಗೇರಿಸಿವೆ. ಇದರ ಮಧ್ಯೆ, ಮೀಸಲಾತಿ ಪ್ರಕಟಗೊಂಡು 23 ದಿನಗಳ ಬಳಿಕ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಧಾರವಾಡದ ಹೈಕೋರ್ಟ್ …
Read More »ಜಮಾತ್-ಇ-ಇಸ್ಲಾಮಿ ಹಿಂದ್‌ನಿಂದ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ
ಬೆಳಗಾವಿ: ‘ಜಮಾತ್-ಇ-ಇಸ್ಲಾಮಿ ಹಿಂದ್’ ವತಿಯಿಂದ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ 30ರವರೆಗೆ ನಡೆಯಲಿದೆ’ ಎಂದು ಸಂಘಟನೆಯ ರಾಜ್ಯ ಮಹಿಳಾ ಘಟಕದ ಸಲಹಾ ಪರಿಷತ್ತಿನ ಸದಸ್ಯೆ ಸಾಜೀದುನ್ ನಿಸ್ಸಾ ಲಾಲ್ಮಿಯ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಗಳು ದೇಶದ ಶಾಂತಿ ಮತ್ತು ಪ್ರಗತಿಗೆ ಧಕ್ಕೆ ತರುತ್ತಿವೆ. ಮಹಿಳೆಯರ ಆತ್ಮಹತ್ಯೆಗಳ ಪ್ರಮಾಣವೂ ಏರಿಕೆಯಾಗಿದೆ. ಸಮಾಜದಲ್ಲಿ ಸ್ತ್ರೀಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ. ನೈತಿಕ ಮೌಲ್ಯಗಳ …
Read More »ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದ ತಹಶೀಲ್ದಾರ್ ಮೋಹನ ಭಸ್ಮೆ
ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದು ತಹಶೀಲ್ದಾರ್ ಮೋಹನ ಭಸ್ಮೆ ಕರೆ ನೀಡಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಗಣೇಶ ಚತುರ್ಥಿಯಲ್ಲಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರ ಭಾವನೆಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಹಬ್ಬದ …
Read More »ಗ್ರಾಮೀಣರ ಆರ್ಥಿಕ ಬೆಳವಣಿಗೆಗೆ ಸಂಘ ಸಹಾಯಕ: ಟಿ.ಬಿ. ಕೆಂಚರಡ್ಡಿ
(ಮೂಡಲಗಿ): ‘ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಸಂಘಗಳು ಬಹಳಷ್ಟು ಅನುಕೂಲವಾಗಿವೆ’ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಟಿ.ಬಿ. ಕೆಂಚರಡ್ಡಿ ಹೇಳಿದರು. ಇಲ್ಲಿಯ ಗುರ್ಲಾಪುರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ 20ನೇ ವಾರ್ಷಿಕ ಸಭೆಯ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ, ಸಿಬ್ಬಂದಿ, ಠೇವಣಿದಾರರು ಮತ್ತು ಸದಸ್ಯರ ಪರಸ್ಪರ ಸಹಕಾರ ಮತ್ತು ವಿಶ್ವಾಸ ಮುಖ್ಯ’ ಎಂದರು. ಸಂಘದ ಅಧ್ಯಕ್ಷ ಶಿವಬಸು ಇಟ್ನಾಳ ಮಾತನಾಡಿ, …
Read More »ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ
ಬೆಂಗಳೂರು: ಲೊಕೇಷನ್ ಕಳುಹಿಸಿದ ಜಾಗಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅಶೋಕನಗರದಲ್ಲಿ ಈ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಮೊಹಮ್ಮದ್ ಶಫಿ ಎಂದು ಗುರುತಿಸಲಾಗಿದೆ. ಕೊರಿಯರ್ ಮಾಡಲು ಕಳುಹಿಸಿದ ಲೊಕೇಷನ್ ಗೆ ಬರದೇ ಲ್ಯಾಂಡ್ ಮಾರ್ಕ್ ಕೇಳಿದ್ದಕ್ಕೆ ಕೋಪಗೊಂಡು ದುಷ್ಕರ್ಮಿ ಯುವಕನಿಗೆ ಚಾಕು ಇರಿದಿದ್ದಾನೆ. ಅಟ್ಟಾಡಿಸಿಕೊಂಡು ಚಾಕು ಇರಿದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅಶೋಕನಗರ ಠಾಣೆಯಲ್ಲಿ …
Read More »
Laxmi News 24×7