Breaking News

ರಾಜಕೀಯ

ಮುಡಾ ನಿವೇಶನ ಹಂಚಿಕೆ : ಸ್ಫೋಟಕ ಆಡಿಯೋ ಬಿಡುಗಡೆ

ಬೆಂಗಳೂರು,ಆ.30- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಗಂಭೀರ ಆರೋಪ ಮಾಡಿದ್ದು, ಆಡಿಯೋ ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಲವಾರು ಮಾಹಿತಿಗಳನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಹಾಗೂ ಮುಡಾದಲ್ಲಿ …

Read More »

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ …

Read More »

ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. ಎಂಡಿಎಂಎ ಸೇರಿದಂತೆ ಹಲವು ಮಾದಕ ವಸ್ತು ಹಾಗೂ ಕಾರು ಸಮೇತ ಪೊಲಿಸರು ಮೂವರನ್ನು ಬಂಧಿಸಿದ್ದಾರೆ. ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಾಡಿಗೆ ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ …

Read More »

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ!

ದರ್ಶನ್ ವಿಚಾರಕ್ಕೆ ಪ್ರಭಾವಿ ಸಚಿವರಿಗೆ ಸಿಎಂ ತರಾಟೆ! ಬೆಂಗಳೂರು ಆಗಸ್ಟ್ 30: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶದ್‌ಗೆ ರಾಜಾತಿಥ್ಯ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಭಾವಿ ಸಚಿವರೊಬ್ಬರಿಗೆ ತರಾಟೆ ತೆಗೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಜೈಲಿನಲ್ಲಿ ದರ್ಶನ್‌ಗೆ ಐಶಾರಾಮಿ ವ್ಯವಸ್ಥೆ ನೀಡಿರುವುದರ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆ ಸಿಎಂ ಗರಂ ಆಗಿದ್ದು, ಆ ಸಚಿವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ನೋಡಪ್ಪ ಇಂತಹ ವಿಚಾರಕ್ಕೆ …

Read More »

ರಾಜ್ಯದಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ :ಅರ್ಚಕ ಸ್ಥಳದಲ್ಲೇ ಸಾವು!

ಗದಗ : ರಾಜ್ಯದ್ಲಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) ಮೃತಪಟ್ಟಿದ್ದಾರೆ.   ಬೆಳಿಗ್ಗೆ ಚಹಾ ಕುಡಿಯಲೆಂದು ಮನೆಯಿಂದ ಹೊರ ಹೋಗಿದ್ದ ಮಲ್ಲಯ್ಯ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ …

Read More »

ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ’

ಗುಳೇದಗುಡ್ಡ: ಕಾರ್ಮಿಕರು ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಕಟ್ಟಡ ಸೇರಿದಂತೆ ಇತರೆ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.   ಪಟ್ಟಣದ ಹೊಸಪೇಟೆ ಸಂಗನಬಸವೇಶ್ವರ ನಗರದಲ್ಲಿ ‌ಗುರುವಾರ ಲಕ್ಷ್ಮಿ ಕಟ್ಟಡ ಕಾರ್ಮಿಕರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳು ನೈಜ ಕಟ್ಟಡ ಕಾರ್ಮಿಕರಿಗೆ …

Read More »

‘ಭಕ್ತಿ ಸಮರ್ಪಣೆಗೆ ಇಷ್ಟಲಿಂಗ ಪೂಜೆ’

ಧಾರವಾಡ: ‘ಪರಮಾತ್ಮನ ಆರಾಧನೆಗೆ ಇಷ್ಟಲಿಂಗ ಪೂಜೆ ಅವಶ್ಯ’ ಎಂದು ಮುಂಡಗೋಡದ ಅತ್ತಿವೇರಿ ಬಸವಧಾಮದ ಬಸವೇಶ್ವರಿ ಮಾತಾಜಿ ಹೇಳಿದರು. ನಗರದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಬಸವೇಶ್ವರ ಧರ್ಮ ಫಂಡ ವತಿಯಿಂದ ಗುರುವಾರ ಏರ್ಪಡಿಸಿದ್ದ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ‘ಇಷ್ಟಲಿಂಗ ಪೂಜೆ ಮಾಡಲು ಜಾತಿ, ಮತ, ಪಂಥ, ಭೇದ ಇಲ್ಲ. ಇದು ದೇವರಿಗೆ ಭಕ್ತಿ ಸಮರ್ಪಿಸುವ ವಿಧಾನ’ ಎಂದರು. ಬಸವೇಶ್ವರ ಧರ್ಮ ಫಂಡ ಅಧ್ಯಕ್ಷ ಎಸ್.ಆರ್. …

Read More »

ರಾಜಭವನ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ನಮಗೆ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ’ ಎಂದು ಹೇಳಿದರು. ‘ಕಾಂಗ್ರೆಸ್‌ ಎಂದೆಂದಿಗೂ ಬಡವರ …

Read More »

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು. ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.   ‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ …

Read More »

ಗ್ರಾಮೀಣಾಭಿವೃದ್ಧಿಯಲ್ಲಿ ರಾಜಕಾರಣ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ರಾಜಕೀಯ ಆರಂಭಿಸಿದ ದಿನದಿಂದಲೂ ನಾನು ದ್ವೇಷ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ಒಂದೇ ನಮ್ಮ ಮೂಲಮಂತ್ರ. ದ್ವೇಷ ರಾಜಕಾರಣ ನನ್ನ ಶಬ್ದಕೋಶದಲ್ಲೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ತಾಲ್ಲೂಕಿನ ಮೋದಗಾದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಸಂಜೀವಿನಿ ಸೇವಾ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ‘ಭಾರತ ದೇಶ ಹಳ್ಳಿಗಳ ದೇಶ. ಹಳ್ಳಿಗಳು …

Read More »