ಯಾದಗಿರಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕಾರಣಕ್ಕೆ ಯಾದಗಿರಿ ನಗರದಲ್ಲಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ ಏಕಾಂಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ ನಗರದ ಸುಭಾಷ್ಚಂದ್ರ ಬೋಸ್ ವೃತ್ತದ ಬಳಿ ಸಿದ್ದರಾಮಯ್ಯನವರ ಅಭಿಮಾನಿ ರಾಜಕುಮಾರ ಎಂಬಾತ ಏಕಾಂಗಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾನೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಸತ್ಯಾಗ್ರಹ ಕೈಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜಭವನವನ್ನು ದುರುಪಯೋಗಿಸಿಕೊಂಡು ರಾಜ್ಯ ಮುಖ್ಯಮಂತ್ರಿಗಳ …
Read More »ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿ 14 ವರ್ಷದ ಬಳಿಕ ಮತ್ತೆ ಬಂಧನ !
ಕೊಪ್ಪಳ: ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧಿಯಾಗಿ 2010 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಲಕಲ್ ಮೂಲದ ನಿವಾಸಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಎಂಬ ಖೈದಿಯನ್ನು ಜಿಲ್ಲಾ ಪೊಲೀಸರು ಬರೊಬ್ಬರಿ 14 ವರ್ಷಗಳ ಬಳಿಕ ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ವಿಚಾರಣಾ ಖೈದಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಇಲಕಲ್ ನಿವಾಸಿಯಾಗಿದ್ದ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ದ 2009ರಲ್ಲಿ ಕೇಸ್ ದಾಖಲಾಗಿತ್ತು. ಈತನನ್ನು ಕೊಪ್ಪಳ …
Read More »ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!
ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಯ ಸಂಚಲನ ಸೃಷ್ಟಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಾನು ಕಲಿತ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ದತ್ತು ಪಡೆದು ಅದಕ್ಕೆ ಹೊಸ ಕಳೆ ನೀಡಿದ್ದಾರೆ. ಕಾಂತಾರ ಚಿತ್ರದ ನಟನೆಗಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿರುವ ಅವರು ಕಳೆದ ಸ್ವಾತಂತ್ರ್ಯೋತ್ಸವ ದಿನದಂದೂ ಶಾಲೆಗೆ ಭೇಟಿ ನೀಡಿದ್ದರು. …
Read More »ಹುಬ್ಬಳ್ಳಿ | ರಕ್ಷಾಬಂಧನ: ರಂಗಿನ ರಾಖಿ ಮೆರುಗು
ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರ, ಕೊಳಲು ಉದುವ ಕೃಷ್ಣ, ಗಣಪ, ಕಣ್ಣು ಕುಕ್ಕುವ ಸ್ಟೋನ್ಗಳು, ರುದ್ರಾಕ್ಷಿ, ನವಿಲುಗರಿ, ಮುತ್ತಿನಲ್ಲಿ ಪೋಣಿಸಿದ ರಾಖಿಗಳು ಮಾರುಕಟ್ಟೆಯಲ್ಲಿ ಅಂದ ಹೆಚ್ಚಿಸಿಕೊಂಡಿವೆ. ಸರಳ, ಸುಂದರ ಹಾಗೂ ಸಾಮಾಜಿಕ ಜಾಲತಾಣಗಳಾದ ಇನ್ಸ್ಟ್ರಾಗ್ರಾಮ, ವಾಟ್ಸ್ಆಯಪ್, ಫೇಸ್ಬುಕ್ ಚಿಹ್ನೆ ಇರುವ ರಾಖಿಗಳು ಆಕರ್ಷಿಸುತ್ತಿವೆ. ಹುಬ್ಬಳ್ಳಿಯ ದುರ್ಗದಬೈಲ್, ಜನತಾ ಬಜಾರ್ ಮತ್ತು ಹಳೇಹುಬ್ಬಳ್ಳಿ ಮಾರುಕಟ್ಟೆಗಳಲ್ಲಿ ತರಹೇವಾರಿ ರಾಖಿಗಳು ಮಾರಾಟಕ್ಕಿದ್ದು, ಮಹಿಳೆಯರು, ಸಹೋದರಿಯರು ತಮ್ಮ ನೆಚ್ಚಿನ ಸಹೋದರರಿಗೆ ರಾಖಿ ಖರೀದಿಸುವ ದೃಶ್ಯ ಕಂಡಿತು. …
Read More »ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ಸಬ್ಸಿಡಿ : ಅರ್ಜಿ ಸಲ್ಲಿಸಲು ಆಗಸ್ಟ್ 31 ಲಾಸ್ಟ್ ಡೇಟ್
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ …
Read More »ರಾಜ್ಯಾದ್ಯಂತ ಸಿಡಿದೆದ್ದ `ಕೈ’ ಕಾರ್ಯಕರ್ತರು : ರಾಜ್ಯಪಾಲರ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ!
ಮೈಸೂರು : ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲೆಯ ತಗಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ …
Read More »ರಸ್ತೆಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಜರುಗಿಸಿ:ಮೊಹಮ್ಮದ್ ರೋಷನ್
ಬೆಳಗಾವಿ: ‘ನಗರದಲ್ಲಿ ಕೈಗಾರಿಕೆಯವರು ರಸ್ತೆ ಬದಿ ತ್ಯಾಜ್ಯ ಎಸೆಯುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೈಗಾರಿಕೆ ಇಲಾಖೆಯ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಕಾರ್ಖಾನೆಗಳ ತ್ಯಾಜ್ಯವನ್ನು ಮರುಬಳಕೆ ಮಾಡಲು ಅವಕಾಶವಿಲ್ಲ. ಹಾಗಾಗಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಅನ್ವಯ, ತ್ಯಾಜ್ಯ ವಿಲೇವಾರಿಗೆ …
Read More »155 ರೈತರಿಗೆ ಕೃಷಿ ಪರಿಕರ ವಿತರಣೆ
ಯಮಕನಮರಡಿ: ರೈತರಿಗೆ ಕಡಿಮೆ ಖಚ್ಚಿನಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಣೆ ಮತ್ತು ಸರ್ಕಾರ ರಿಯಾಯಿತಿ ದರದಲ್ಲಿ ರೈತರಿಗೆ ಅನುಕೂಲವಾಗುವಂತಹ ಸಲಕರಣೆಗಳನ್ನು ನೀಡುತ್ತಿದ್ದು, ಅವರ ಆರ್ಥಿಕಮಟ್ಟ ಸುಧಾರಣೆಗೆ ಅನಕೂಲವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಮೀಪದ ಹತ್ತರಗಿ ಸುಕ್ಷೇತ್ರದ ಕಾರಿಮಠದಲ್ಲಿ ಶನಿವಾರ ನಡೆದ ಹುಕ್ಕೇರಿ ಕೃಷಿ ಇಲಾಖೆಯ ಸಹಯೋಗದಲ್ಲಿ ಯಮಕನಮರಡಿ ಹೊಬಳಿ ಮಟ್ಟದ 155 ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳ ಸವಲತ್ತು ವಿತರಣಾ …
Read More »ಧರ್ಮ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಧ್ಯ’
ಮೂಡಲಗಿ: ‘ಧರ್ಮದ ಜಾಗೃತಿ ಇದ್ದರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲಸಲು ಸಾಧ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು. ತಾಲ್ಲೂಕಿನ ಯಾದವಾಡದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಗಜಾನನ ಮಂದಿರದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾಪನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಯ ಬಗ್ಗೆ ಅಧಿವೇಶದನದಲ್ಲಿ ಪ್ರಸ್ತಾಪಿಸಿರುವೆ. ಸಂಸದರ ಅಭಿವೃದ್ಧಿ ನಿಧಿಯಿಂದ ಯಾದವಾಡಕ್ಕೆ ಸಮುದಾಯ ಭವನ …
Read More »ಅನುದಾನ ಹಂಚಿಕೆ ತಾರತಮ್ಯ: ಆಕ್ರೋಶ
ಬೆಳಗಾವಿ: ಮಹಾನಗರ ಪಾಲಿಕೆಯ ಬಜೆಟ್ನಲ್ಲಿ ಎಲ್ಲ 58 ವಾರ್ಡ್ಗಳಿಗೂ ಅನುದಾನ ಸರಿಯಾಗಿ ಹಂಚಿಕೆ ಆಗಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ನಾಯಕರು, ಆಡಳಿತಾರೂಢ ಪಕ್ಷವನ್ನು ತರಾಟೆ ತೆಗೆದುಕೊಂಡರು. ಆಯ್ದ 37 ವಾರ್ಡ್ ಸದಸ್ಯರಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದೂ ಆಕ್ಷೇಪ ವ್ಯಕ್ತಪಡಿಸಿದರು. ಮೇಯರ್ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಶನಿವಾರ ನಡೆದ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಕೆಲಕಾಲ ಬಿಸಿ ಚರ್ಚೆ …
Read More »
Laxmi News 24×7