Breaking News

ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ : ಮೇ. 10 ರಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ( Karnataka Assembly Election 2023 ) ದಿನಾಂಕ ಪ್ರಕಟವಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ನಡೆಯಲಿದೆ. ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.   ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ …

Read More »

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು. ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ …

Read More »

BJPಯಿಂದ ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.     ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.   ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು …

Read More »

ಮನೆಯ ಕೋಣೆಯಲ್ಲೇ ನೇತಾಡುತ್ತಿತ್ತು ಪತ್ನಿಯ ಶವ; ಪತಿಯ ವಿರುದ್ಧ ಆರೋಪ

ಬೆಂಗಳೂರು: ಮಹಿಳೆಯೊಬ್ಬಳು ತನ್ನ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದು, ಪತಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.   ರಶ್ಮಿ (32) ಸಾವಿಗೀಡಾದ ಮಹಿಳೆ. ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈಕೆ ತಾನು ವಾಸವಿದ್ದ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾಳೆ. ಈಕೆ ಖಾಸಗಿ ಕಂಪನಿಯ ಇಂಜಿನಿಯರ್ ಅರವಿಂದ್ ಎಂಬಾತನ ಪತ್ನಿ.   ಮಂಡ್ಯ ಮೂಲದ …

Read More »

ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ …

Read More »

ಅಥಣಿಯಲ್ಲಿ ಲಕ್ಷಣ ಸವದಿ v/s ರಮೇಶ್‌ ಜಾರಕಿಹೊಳಿ ಫೈಟ್;‌ ಹೈಕಮಾಂಡ್‌ ಹೇಳಿದ್ದಂತೆ ಎಲ್ಲರು ಕೇಳಬೇಕು; ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷಣ ಸವದಿ ಮತ್ತು ರಮೇಶ್‌ ಜಾರಕಿಹೊಳಿ ನಡುವೆ ಫೈಟ್‌ ಶುರುವಾಗಿದೆ. ಈ ವಿಚಾರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಎಲ್ಲ ಪಕ್ಷದಲ್ಲೂ ಟಿಕೆಟ್‌ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಆದರೆ ಟಿಕೆಟ್‌ ಹಂಚಿಕೆ ಆದ್ಮೇಲೆ ಅಸಮಾಧಾನ ಉಂಟಾಗುವುದು. ಸಹಜ. ಆದರೆ ಇದಲ್ಲವನ್ನೂ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳುತ್ತದೆ ಅದನ್ನು ಎಲ್ಲರೂ ಕೇಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ

ಬಾಗಲಕೋಟೆ: ನಿನ್ನೆ ರಾತ್ರಿ ಹೃದಯಾಘಾತದಿಂದ ಬಿದರಿ ಕಲ್ಮಠದ ಶಿವಲಿಂಗ ಶ್ರೀಗಳು ಲಿಂಗೈಕ್ಯ ಆಗಿದ್ದಾರೆ. ಶಿವಲಿಂಗ ಸ್ವಾಮೀಜಿಗಳಿಗೆ 67 ವರ್ಷ ವಯಸ್ಸಾಗಿತ್ತು. ಬಿದರಿ ಕಲ್ಮಠ ಅಪಾರ ಭಕ್ತರ ಬಳಗ ಹೊಂದಿದೆ. ಶಿವಲಿಂಗ ಸ್ವಾಮೀಜಿ ಐದನೇಯವರಾಗಿ ಪೀಠ ಅಲಂಕರಿಸಿದ್ದರು. ಬಿದರಿಯಲ್ಲಿ ಮೂಲ ಮಠ ಇತ್ತು. 13-11-1986ರಲ್ಲಿ ಬಿದರಿ ಮಠದ ಪೀಠ ಅಲಂಕರಿಸಿದ್ದರು. ಈ ಮಠದ ಶಾಖೆಗಳು ಸವದತ್ತಿ, ಗುಲಗಾಲಜಂಬಗಿಯಲ್ಲಿಯೂ ಇವೆ. ಸದ್ಯ ಮಠದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಇಂದು ಸಂಜೆ ಶ್ರೀಗಳ ಅಂತ್ಯಕ್ರಿಯೆಯನ್ನು …

Read More »

ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!

ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ. ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 …

Read More »

ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು

ದೊಡ್ಡಬಳ್ಳಾಪುರ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾರನ್ನೂ ತಪಾಸಣೆ ಮಾಡಿದ್ದಾರೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. …

Read More »

ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್​ …

Read More »