Breaking News

ರಾಜಕೀಯ

ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಿ; ಆ.12ಕ್ಕೆ ಮುಧೋಳ ಬಂದ್ ಎಚ್ಚರಿಕೆ

ಮುಧೋಳ (ಬಾಗಲಕೋಟೆ ಜಿಲ್ಲೆ) : ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸದಿದ್ದರೆ ಆಗಸ್ಟ್‌ 12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ‌ ನಿರ್ಧಾರ ಪ್ರಕಟಿಸಿದರು. ನಗರದ ಜಿಎಲ್‌ಬಿಸಿ ಪ್ರವಾಸಿ‌ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ‌ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ‌ ಒತ್ತಾಯಿಸಿ ಆ.7ರಂದು …

Read More »

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ …

Read More »

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ,

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ, ಅಂತೂ ಉತ್ತರ ಪ್ರದೇಶ ಪೊಲೀಸರು 9 ಮಹಿಳೆಯರನ್ನು ಕೊಲೆ ಮಾಡಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ಹುಡುಕಾಟಕ್ಕೆ 22 ಪೊಲೀಸ್ ತಂಡಗಳಿದ್ದವು, 1.5 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲಾಗಿತ್ತು. 24 ಗಂಟೆಯೂ ಪೊಲೀಸರು ಈ ವಿಚಾರದ ಮೇಲೆ ನಿದ್ದೆಗೆಟ್ಟು ಕೆಲಸ ಮಾಡಿದ್ದರು, ಕೆಲ ಬರೇಲಿ ಜಿಲ್ಲೆಯಲ್ಲಿ 9 ಮಹಿಳೆಯರನ್ನು ಕತ್ತು ಹಿಸುಕಲು ಸೀರೆಗಳನ್ನು ಬಳಸುತ್ತಿದ್ದನು ಸೀರೆಯ ಗಂಟನ್ನು …

Read More »

ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ

ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. , ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ …

Read More »

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್​ ಹವಾ. ಆದರೆ ನಟಿ ರವೀನಾ ಟಂಡನ್​ ಅವರು ಈ ಮೊದಲು ಶಾರುಖ್​ ಖಾನ್​ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್ ಮತ್ತು ರವೀನಾ ಟಂಡನ್​ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್​ ಅವರು …

Read More »

ಮಕ್ಕಳಿಗೆ ಮೊಟ್ಟೆ ಕೊಟ್ಟು ಕಸಿದುಕೊಳ್ಳುವ ಅಂಗನವಾಡಿ ಕಾರ್ಯಕರ್ತರ ಇಬ್ಬರು ಅಮಾನತು

ಕೊಪ್ಪಳ, ಆಗಸ್ಟ್​.10: ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲಿ (Egg) ವಂಚನೆ ಆರೋಪ ಕೇಳಿ ಬಂದಿದ್ದು ಅಂಗನವಾಡಿ (Anganwadi) ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ‌ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು …

Read More »

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ 200 ವರ್ಷವಾಯ್ತು,

ಕಿತ್ತೂರು ಸ್ವತಂತ್ರ ಸಂಸ್ಥಾನವಾಗುವುದು ಬ್ರಿಟಿಷರಿಗೆ ಬೇಕಿರಲಿಲ್ಲ. ಯುದ್ಧ ಸಿದ್ಧತೆಗಳನ್ನು ಪೂರೈಸಿಕೊಳ್ಳುವವರೆಗೆ ಸಂಧಾನದ ಮಾತು ಆಡುತ್ತಿದ್ದ ಬ್ರಿಟಿಷರು ತಮ್ಮ ಯುದ್ಧ ಖೈದಿಗಳು ಬಿಡುಗಡೆ ಆಗುತ್ತಲೇ ಆಧುನಿಕ ಯುದ್ಧ ಸಾಮಗ್ರಿಗಳೊಂದಿಗೆ ಯುದ್ಧ ಆರಂಭಿಸಿಯೇ ಬಿಟ್ಟರು. ಬ್ರಿಟಿಷರಿಗೆ ಕಿತ್ತೂರು ಕೋಟೆಯಲ್ಲಿದ್ದ ವಿದ್ರೋಹಿಗಳು ಕೈಜೋಡಿಸಿದರು. ಕೋಟೆಯಲ್ಲಿದ್ದ ಮದ್ದಿನ ಮನೆಯಲ್ಲಿ ಮೋಸ ಮಾಡಿಬಿಟ್ಟರು. ಬ್ರಿಟಿಷರ ಫಿರಂಗಿಗಳು ಕಿತ್ತೂರಿನ ಕೋಟೆಯ ಭಾಗಗಳನ್ನು ಕೆಡವಿದವು. ಕಿತ್ತೂರು ಕಾಪಾಡಲು, ದೇಶವಾಸಿಗಳ ರಕ್ಷಣೆಗೆ ಚೆನ್ನಮ್ಮ ಯತ್ನಿಸುತ್ತಿದ್ದರೆ ಕಿತ್ತೂರು ಸೈನಿಕರು ಕೆಚ್ಚೆದೆಯಿಂದ ಹೋರಾಟ ಮುಂದುವರಿಸಿದರು. …

Read More »

ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದೇಕೆ?

ಬೆಂಗಳೂರು, ಆಗಸ್ಟ್ 10: ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗದೇ ಇರುವುದು, ಎರಡ್ಮೂರು ತಿಂಗಳುಗಳಿಂದ ಬಾಕಿ ಇರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಣ ವರ್ಗಾವಣೆ ಯಾಕೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು …

Read More »

ಗಂಡ ಬಿಟ್ಟಿ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕಾರು ಚಾಲಕನಿಂದ ಮೋಸ

ಬೆಂಗಳೂರು, : ಗಂಡನನ್ನು ಬಿಟ್ಟು ಬಾಳು ಕಟ್ಟಿಕೊಂಡಿದ್ದ ಮಹಿಳೆಗೆ ಕಾರು ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ (Cheating) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆಸಿದೆ. ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ …

Read More »

ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ

ಧಾರವಾಡ, : ಧಾರವಾಡ ಕೆಐಎಡಿಬಿ(KIADB) ಕಚೇರಿ ಅಂದರೆ ಅಲ್ಲಿ ಅಕ್ರಮಗಳದ್ದೇ ಪಾರುಪತ್ಯ. ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ರೂ. ಡಬಲ್ ಪೇಮೆಂಟ್ ಹಗರಣವೂ ನಡೆದು, ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಕೂಡ ಕಂಡು ಬಂದಿದ್ದರು. ಡಬಲ್ …

Read More »