Breaking News
Home / ರಾಜಕೀಯ (page 650)

ರಾಜಕೀಯ

ಪಟೇಲ್‌ ಮಾದರಿ ಬಸವ ಮೂರ್ತಿ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಳಗಾವಿ: ನರ್ಮದಾ ತಟದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆ ಮಾದರಿಯಲ್ಲಿ ಘಟಪ್ರಭಾ ನದಿ ಮಧ್ಯಭಾಗದಲ್ಲಿ 108 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಲಾಗುವುದು. ಅಲ್ಲದೇ ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.   ನಗರದ ಬಸವೇಶ್ವರ ವೃತ್ತದಲ್ಲಿ 15 ಅಡಿ ಎತ್ತರದ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ಹಾಗೂ ಬಸವಾದಿ ಶರಣರ ಮತ್ತು ಅನುಭವ ಮಂಟಪದ ಥೀಮ್‌ ಪಾರ್ಕ್‌ …

Read More »

ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಬಸ್ ಪ್ರಯಾಣ ದರ ₹15ರಿಂದ ₹20ವರೆಗೆ ಹೆಚ್ಚಳ

ಬೆಂಗಳೂರು: ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದರಿಂದ ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರವನ್ನು ಕೆಎಸ್‌ಆರ್‌ಟಿಸಿ ₹15ರಿಂದ ₹20ರವರೆಗೆ ಹೆಚ್ಚಳ ಮಾಡಿದೆ. ಟೋಲ್ ಶುಲ್ಕ ಸರಿದೂಗಿಸಲು ಕರ್ನಾಟಕ ಸಾರಿಗೆ ಬಸ್‌ ಪ್ರಯಾಣ ದರದಲ್ಲಿ ₹15, ರಾಜಹಂಸ ಬಸ್‌ ಪ್ರಯಾಣ ದರದಲ್ಲಿ ₹18, ಐರಾವತ ಸೇರಿ ಮಲ್ಟಿ ಆಯಕ್ಸೆಲ್ ಬಸ್‌ಗಳ ಪ್ರಯಾಣ ದರದಲ್ಲಿ ₹20 ಹೆಚ್ಚಳ ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೆಯಲ್ಲಿ ಪ್ರಯಾಣಿಸುವ ಬಸ್‌ಗಳಿಗೆ ಮಾತ್ರ ಈ ದರ ಅನ್ವಯವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಎಕ್ಸ್‌ಪ್ರೆಸ್‌ …

Read More »

B.S.Y.ನವರನ್ನು ಬಿಜೆಪಿ ಕಾಲ ಕಸದಂತೆ ಕಾಣುತ್ತಿದೆ: ಕಾಂಗ್ರೆಸ್‌ ಲೇವಡಿ

ಬೆಂಗಳೂರು: ಟಿಕೆಟ್‌ ಯಾರಿಗೆ ನೀಡಬೇಕು ಎಂದು ನಿರ್ಧಾರ ಮಾಡುವುದು ಪಕ್ಷವೇ ಹೊರೆತು ಯಡಿಯೂರಪ್ಪನವರು ಅಲ್ಲ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪ್ರಶ್ನೆ ಎತ್ತಿದೆ. ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.     ಸಿ.ಟಿ ರವಿ ಅವರ ಹೇಳಿಕೆಯ ವರದಿಯ ಪ್ರತಿಯನ್ನು ಲಗತ್ತಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಬಿಜೆಪಿ ಕಾಲ …

Read More »

ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್: ಡಿಕೆಶಿ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ. ‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ. ‘ಪ್ರವೀಣ್ …

Read More »

ಬರೊಬ್ಬರಿ 56 !ಬ್ಲೇಡುಗಳನ್ನು ನುಂಗಿದಮಹಾನುಭಾವ

ಜೈಪುರ: ಚಿತ್ರ ವಿಚಿತ್ರ ವರ್ತನೆಗಳ ಜನ ನಮ್ಮಲ್ಲಿ ನೋಡಸಿಗುತ್ತಾರೆ. ಇಂಥವರಲ್ಲೂ ಕೆಲವರ ವಿಲಕ್ಷಣ ಗುಣಗಳು ಅಸಾಧ್ಯವನ್ನೂ ಸಾಧ್ಯವಾಗಿಸಿರುತ್ತವೆ. ಇದಕ್ಕೆ ಇಲ್ಲೊಬ್ಬ ಮಹಾನುಭಾವ ಜ್ವಲಂತ ಉದಾಹರಣೆಯಾಗಿದ್ದಾನೆ. ಇವನ ಘನಕಾರ್ಯವೇನೆಂದರೆ ಶೇವಿಂಗ್ ಬ್ಲೇಡುಗಳನ್ನು ನುಂಗಿದ್ದು. ಅದು ಒಂದೆರಡಲ್ಲ… ಬರೊಬ್ಬರಿ 56 ! ರಾಜಸ್ಥಾನದ ಸಂಚೋರ್ ಪಟ್ಟಣದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯಶಪಾಲ್ ಸಿಂಗ್ (25) ಹೊಟ್ಟೆಯಿಂದ ವೈದ್ಯರು 56 ಬ್ಲೇಡುಗಳನ್ನು ಹೊರತೆಗೆದಿದ್ದಾರೆ. ತನ್ನ ಸಹವರ್ತಿಗಳೊಂದಿಗೆ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ ಈತ …

Read More »

ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ …

Read More »

ಗೋವಾದಲ್ಲಿ ಅಪರಿಚಿತರಿಂದ ಕರ್ನಾಟಕ ಮೂಲದ ಅರ್ಚಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಪಣಜಿ: ಗೋವಾ ವಾಸ್ಕೊದ ಮುರಗಾಂವ ಕೇಸರವಾಲ್ ಗಣೇಶ ಮಂದಿರದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ್ ಹೊಸ್ಮಠ ಎಂಬ ಕರ್ನಾಟಕದ ವಿಜಯಪುರ ಜಿಲ್ಲೆಯ ಮೂಲದ ಅರ್ಚಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅರ್ಚಕ ಬಸವರಾಜ್ ಹೊಸ್ಮಠ ರವರು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.   ಕರ್ನಾಟಕದ ವಿಜಯಪುರ ಮೂಲದ ಅರ್ಚಕರಾದ ಬಸವರಾಜ್ ರವರು ಕಳೆದ ಅನೇಕ ವರ್ಷಗಳಿಂದ ಗೋವಾದ ಮುರಗಾಂವ ಗಣೇಶ ಮಂದಿರದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ …

Read More »

ಗೋವಾಕ್ಕೆ ಬರುವ ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು : ಸಿಎಂ ಸಾವಂತ್

ಪಣಜಿ: ”ಗೋವಾದ ಹಣಜುಣದಲ್ಲಿ ಪ್ರವಾಸಿ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ರಾಜ್ಯಕ್ಕೆ ದೇಶಾದ್ಯಂತ ಅಪಖ್ಯಾತಿಯಾಗುತ್ತಿದೆ. ಗೋವಾ ರಾಜ್ಯವು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಮತ್ತು ಪ್ರವಾಸೋದ್ಯಮಕ್ಕೆ ಧಕ್ಕೆ ತರುವವರ ಕೃತ್ಯ ಸಹಿಸಲಾಗುವುದಿಲ್ಲ. ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು” ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ. ಮುಖ್ಯಮಂತ್ರಿಗಳು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ, ಕಾರ್ಮಿಕ ಮತ್ತು ಪ್ರವಾಸೋದ್ಯಮ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಘಟನೆಯ ಸಂಪೂರ್ಣ ತನಿಖೆಯ ನಂತರ ದಾಳಿಕೋರನ …

Read More »

5 ಮತ್ತು 8 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶದ ಮೂಲಕ ಎರಡು ವಾರಗಳ ನಂತರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಮಂಡಳಿಗೆ ಅನುಮತಿ ನೀಡಿ, ರಾಜ್ಯ ಸರಕಾರದ ಮೂರು ಸುತ್ತೋಲೆಗಳನ್ನು ರದ್ದುಗೊಳಿಸಿದ ಏಕ ಪೀಠದ ಆದೇಶಕ್ಕೆ ತಡೆ ನೀಡಿದೆ.   ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಮಾರ್ಚ್ 10 ರ ಆದೇಶಕ್ಕೆ ತಡೆ …

Read More »