Breaking News

ರಾಜಕೀಯ

ಶಿಸ್ತು, ಪರಿಶ್ರಮ, ತಾಳ್ಮೆಯಿಂದ ಸಾಧನೆ ಸಾಧ್ಯ

ನಿಪ್ಪಾಣಿ: ‘ಶಿಸ್ತು, ಪರಿಶ್ರಮ, ಸೌಮ್ಯತೆ, ತಾಳ್ಮೆ ಇದ್ದಲ್ಲಿ ವಿದ್ಯಾರ್ಥಿಗಳು ಮುಂದೆ ಹೋಗಿ ಬಯಸಿದ್ದನ್ನೆಲ್ಲ ಸಾಧಿಸುತ್ತಾರೆ. ಅದಕ್ಕೆ ತಕ್ಕಂತೆ ಬೋಧನೆ ಶಾಲೆಯಲ್ಲಿ ಶಿಕ್ಷಕರಿಂದಾಗಬೇಕು, ಸಂಸ್ಕಾರ ಮನೆಯಲ್ಲಿ ಪಾಲಕರಿಂದಾಗಬೇಕು’ ಎಂದು ವಿದ್ಯಾ ಸಂವರ್ಧಕ ಮಂಡಳದ ಸಿಇಒ ಡಾ. ಸಿದ್ಧಗೌಡ ಪಾಟೀಲ ಅಭಿಪ್ರಾಯಪಟ್ಟರು. ಸ್ಥಳೀಯ ವಿಎಸ್‍ಎಂ ಜಿ.ಐ. ಬಾಗೇವಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿಎಸ್‍ಎಂ ಕನ್ನಡ ಮತ್ತು ಮರಾಠಿ ಕಾನ್ವೆಂಟ್ ಶಾಲೆಯಲ್ಲಿ ಶುಕ್ರವಾರ ಬೀಳ್ಕೊಡುವ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಹೇಳಿದ್ದಾರೆ. ಜಿ.ಎಂ.ಸಿದ್ದೇಶ್ವರ್ ಅವರೇ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ. …

Read More »

ವಿಧಾನಸಭಾ ಚುನಾವಣೆ; ರಾಜ್ಯ ಬಿಜೆಪಿಯ 12 ನಾಯಕರಿಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಜವಾಬ್ದಾರಿ ವಹಿಸಿದೆ. ಈ ಮೂಲಕ ರಾಜ್ಯ ನಾಯಕರಿಗೆ ಗ್ರೌಂಡ್ ಲೆವಲ್ ಜವಾಬ್ದಾರಿಯನ್ನು ಹಂಚಿಕೆ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಡಿ.ವಿ.ಸದಾನಂದಗೌಡ, …

Read More »

ಕ್ಯಾಮರಾ ತಗೋಂಡು ಬೆಡ್‌ ರೂಮ್‌ ಬನ್ನಿ: ಸೈಫ್ ಅಲಿ ಖಾನ್

ಬಾಲಿವುಡ್ ತಾರೆಯರು ತಮ್ಮ ಮನೆಗಳು, ಜಿಮ್‌, ರೆಸ್ಟೋರೆಂಟ್‌ ಇಲ್ಲವೇ ಕ್ಲಬ್‌ಗೆ ಹೋದ್ರೂ ಅವರನ್ನು ಪಾಪರಾಜಿಗಳು ಬೆಂಬಿಡದೆ ಹಿಂಬಾಲಿಸುತ್ತಿರುತ್ತಾರೆ.   ‘ಪಾಪ್ ಸಂಸ್ಕೃತಿ’ ಇತ್ತೀಚೆಗೆ ಸ್ವಲ್ಪ ಹೆಚ್ಚಾಗಿದೆ ಅಂತ ಹೇಳಬಹುದು, ಅದರಲ್ಲೂ ವಿಶೇಷವಾಗಿ ಎರಡು ವಾರಗಳ ಹಿಂದೆ ಅಲಿಯಾ ಭಟ್ ಅವರ ಪಕ್ಕದ ಕಟ್ಟಡದ ಟೆರೇಸ್‌ನಿಂದ ಇಬ್ಬರು ಫೋಟೋಗ್ರಾಫರ್‌ಗಳು ಅವರ ಫೋಟೋಗಳನ್ನು ಕ್ಲಿಕ್ ಮಾಡಿದ ಘಟನೆಯ ನಡೆದಿದ್ದು ಎಲ್ಲರಿಗೂ ಗೊತ್ತಿದೆ.   ಇನ್ನು ಇದೇ ರೀತಿ ಗುರುವಾರ ರಾತ್ರಿ,ಸೈಫ್ ಅಲಿ ಖಾನ್ಕೂಡ …

Read More »

ಬೆಂಗಳೂರಲ್ಲಿ ಖತರ್ನಾಕ್‌ ಕಳ್ಳನ ಎಂಟ್ರಿ : ʼಬೈಕ್​ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಖದೀಮ ಅರೆಸ್ಟ್‌ʼ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕಳ್ಳರಿಗೇನು ಕಮ್ಮಿಯಿಲ್ಲ, ಇದೀಗ ಬೈಕ್​ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನುಸಿದ್ದಾಪುರ ಪೊಲೀಸರಿಂದ ಬಂಧಿಸಲಾಗಿದೆ.   ಸಿಲಿಕಾನ್‌ ಸಿಟಿಯಲ್ಲಿ ಬೆಂಗಳೂರಿಲ್ಲಿ ಪಾರ್ಕಿಂಗ್‌ ಇಲ್ಲದೇ ಅದೇಷ್ಟು ಜನರು ಮನೆ ಮುಂದೆ ಬೈಕ್‌ಗನ್ನು ನಿಲ್ಲಿಸುತ್ತಾರೆ. ಇದನ್ನೆ ಬಂಡಾವಳವನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಳ್ಳತನ ಮಾಡಿ ಮಾರಾಟ ಮಾಡುವ ಹೊಸ ದಂಧೆಯನ್ನ ಶುರು ಮಾಡಿದ್ದನು.ಈತ ಬೆಂಗಳೂರಿನ ಸಿದ್ದಾಪುರ, ಕಲಾಸಿಪಾಳ್ಯ, ವರ್ತೂರು, ಚಂದ್ರಾಲೇಔಟ್, ಕೆ.ಎಸ್.ಲೇಔಟ್ ಸೇರಿ ಬೈಕ್‌ಗಳನ್ನ ಕಳ್ಳತನ …

Read More »

ಮುಖ್ಯಮಂತ್ರಿ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಕೇವಲ ಪ್ರಶಾಂತ್‌ ಮಾಡಾಳ್‌ ಬಂಧಿಸುವುದಲ್ಲ, ಅವರ ತಂದೆ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.   ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು …

Read More »

ಛಲದಿಂದ ಎಲ್ಲವೂ ಸಾಧ್ಯ: ಡಾ.ಕಲ್ಪನಾ ಸರೋಜ್

ಗೋಕಾಕ: ‘ನನಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಭಾವನೆಯೊಂದಿಗೆ ಮಹಿಳೆ ಬದುಕಿನಲ್ಲಿ ಸಂಘರ್ಷಕ್ಕೆ ಇಳಿದರೆ, ಅಸಾಧ್ಯವಾದುದನ್ನೂ ಸಾಧಿಸಲು ಸಾಧ್ಯ’ ಎಂದು ಪದ್ಮಶ್ರೀ ಪುರಸ್ಕೃತರಾದ ಡಾ.ಕಲ್ಪನಾ ಸರೋಜ್ ಹೇಳಿದರು. ನಗರದ ಶೂನ್ಯ ಸಂಪಾದನಾ ಮಠದಲ್ಲಿ ಶುಕ್ರವಾರ ರಾತ್ರಿ ಬಸವ ಸ್ವಾಮಿಜಿ ಅವರ 18ನೇ ಸ್ಮರಣೋತ್ಸವ ಅಂಗವಾಗಿ ನಡೆದ 18ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶದಲ್ಲಿ ಮಠದಿಂದ ನೀಡಲಾದ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.   ‘ಪುರುಷ ಪ್ರಧಾನ ದೇಶದಲ್ಲಿ ಸ್ತ್ರೀಯರು …

Read More »

ಹಣಕಾಸಿನ ವ್ಯವಹಾರಕ್ಕಾಗಿ ಕೊಲೆ: 6 ಆರೋಪಿಗಳ ಬಂಧನ

ಹಾರೂಗೇರಿ (ಬೆಳಗಾವಿ ಜಿಲ್ಲೆ): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರು ಆರೋಪಿಗಳನ್ನು ಹಾರೂಗೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ಅಸ್ಥಿ‍‍ಪಂಜರಗಳನ್ನೂ ಪತ್ತೆ ಮಾಡಿದ್ದಾರೆ.   ಖಣದಾಳ ಗ್ರಾಮದ ಬಾಳಪ್ಪ ಆಜೂರೆ ಕೊಲೆಯಾದವರು. ಇದೇ ಊರಿನ ವಾಸುದೇವ ನಾಯಕ ಹಾಗೂ ಬಾಳಪ್ಪ ಅವರ ಸಹೋದರ ಭೀಮಪ್ಪ ಆಜೂರೆ ಇದರಲ್ಲಿ ಪ್ರಮುಖ ಆರೋಪಿಗಳು. 2022ರ ಆಗಸ್ಟ್‌ 18ರಂದು ಬಾಳಪ್ಪ ಅವರನ್ನು ಅಪಹರಿಸಿದ ಆರೋಪಿಗಳು ಕೋಳಿ ಫಾರ್ಮ್‌ವೊಂದರಲ್ಲಿ ಕೊಲೆ ಮಾಡಿ, ಮಹಾರಾಷ್ಟ್ರದ …

Read More »

ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್‌ ಜನರಲ್‌

ಬೆಂಗಳೂರು: ಮಠದಲ್ಲಿ ಸರಣಿ ಅಪರಾಧಗಳು ನಡೆದ ಸರಮಾಲೆಯೇ ಇದೆ ಎಂಬುದು ತನಿಖಾಧಿಕಾರಿಗಳಿಗೆ ಮೇಲ್ನೋಟಕ್ಕೆ ಕಂಡುಬಂದ ಕಾರಣಕ್ಕಾಗಿ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಅಡಕಗೊಳಿಸಲಾಗಿದೆ. ಹೀಗಾಗಿಯೇ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ…   ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ …

Read More »

40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ‌ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.   ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ …

Read More »