Home / ರಾಜಕೀಯ (page 693)

ರಾಜಕೀಯ

ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಿಂದ ಶಾಂತಿ ಸಂದೇಶ’

ಎಂ.ಕೆ.ಹುಬ್ಬಳ್ಳಿ: ‘ಹಣ-ಆಸ್ತಿ ಎಷ್ಟಿದ್ದರೇನು. ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ ತುಂಬುತ್ತಿವೆ. ನಾಮ ಹಲವಾರೂ, ದೇವನೊಬ್ಬನೆ ಎಂಬ ತತ್ವದಡಿ ಮುನ್ನಡೆಯುತ್ತಿವೆ’ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.   ಸ್ಥಳೀಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಭಾನುವಾರ ನಡೆದ ಶಿವರಾತ್ರಿ ಕಾರ್ಯಕ್ರಮ ಹಾಗೂ ನೂತನ ಕಟ್ಟಡ ‘ಶಿವಶಕ್ತಿ’ ಭವನ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ರೋಹಿಣಿ ಪಾಟೀಲ, …

Read More »

ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿದು ಬಿದ್ದು ಹಿರಿಯ ಮಹಿಳೆ ಸಾವು

ಸವದತ್ತಿ: ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ (60) ಮೃತಪಟ್ಟವರು.     ಹಳೆಯದಾದ ಮನೆಯ ಛಾವಣಿ ಏಕಾಏಕಿ ಕುಸಿತಕ್ಕೊಳಗಾಯಿತು. ಅದರಡಿಯಲ್ಲೇ ಇದ್ದ ಶಾಂತವ್ವ ಅವರ ಮೇಲೆ ವ್ಯಾಪಕ ಪ್ರಮಾಣದ ಮಣ್ಣು, ಹಲಗೆಗಳು ಬಿದ್ದು ಅದರಲ್ಲಿ ಮುಚ್ಚಿ ಹೋಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು …

Read More »

BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಸಿ ಕಚೇರಿಯಲ್ಲಿನ ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಪಾಸಣೆ ಅವಧಿಯಲ್ಲಿ ಬಿಬಿಸಿ ಕಚೇರಿ, ಸ್ಟುಡಿಯೋಗಳನ್ನು ಮುಚ್ಚಲಾಗುತ್ತಿದ್ದು, ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ …

Read More »

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಅಮಿತ್ ಶಾ

ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು. ಕರ್ನಾಟಕದ ಜೊತೆಗೆ ಇತರ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪೂರ್ಣ …

Read More »

ಪರವಾನಿಗೆ ಪಡೆಯದೆ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು: ಸುಪ್ರೀಂ ಕೋರ್ಟ್

ಪಣಜಿ: ಆಯೋಗ ನೀಡಿರುವ ಡಿಪಿಆರ್ ಅನುಮೋದನೆಯನ್ನು ಹಿಂಪಡೆಯುವಂತೆ ಹಾಗೂ ಕೂಡಲೇ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದ್ದು,”ಅಗತ್ಯ ಪರವಾನಿಗೆ ಪಡೆಯದೆ ಕರ್ನಾಟಕ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು ಹಾಗೂ ಜಲ ಆಯೋಗವು ಡಿಪಿಆರ್ ಪ್ರತಿಯನ್ನು ಗೋವಾ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ತೀರ್ಪು ನೀಡಿದೆ.   ಕರ್ನಾಟಕಕ್ಕೆ ಕಳುಹಿಸಿದ ಶೋಕಾಸ್ ನೋಟಿಸ್ ಕುರಿತು ತೀರ್ಮಾನಿಸುವಂತೆ ಗೋವಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸುಪ್ರೀಂ …

Read More »

ಬಜೆಟ್ ಅಧಿವೇಶನದ ಭಾಗ 1 ಮುಕ್ತಾಯ : ಮಾರ್ಚ್ 13 ರಿಂದ ಮತ್ತೆ ಲೋಕಸಭೆಯ ಕಲಾಪ

ನವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ …

Read More »

ಪುಲ್ವಾಮಾ ದುರಂತಕ್ಕೆ 4 ವರ್ಷ

ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇನೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ’ …

Read More »

ಸಿದ್ದರಾಮಯ್ಯ ರಾಜಕಾರಣ ಬಿಟ್ಟು ಜ್ಯೋತಿಷಿಯಾಗಲಿ: ನಳಿನ್ ಕುಮಾರ

ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜಕಾರಣ ಬಿಟ್ಟು ಜ್ಯೋತಿಷ್ಯ ಹೇಳಲಿ. ಅವರು ಇನ್ನು ಮುಂದೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಹೇಳಿದರು. ಕೊಪ್ಪಳ ತಾಲೂಕಿನ ಹಲಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ ಅವರು ಹೇಳಿದ ಜ್ಯೋತಿಷ್ಯ ಸುಳ್ಳಾಗಿದೆ. ಅಪ್ಪನಾಣೆಗೂ ನರೇಂದ್ರ ಮೋದಿ ಪ್ರಧಾನಿ ಆಗಲ್ಲ ಎಂದರು, ಮೋದಿ ಅವರು ಎರಡೆರಡು ಬಾರಿ ಪ್ರಧಾನ ಮಂತ್ರಿಯಾದರು. ಕಳೆದ ಬಾರಿಯೂ ನನ್ನಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಎಂದರು. …

Read More »

ಏರ್ ಶೋದಿಂದ ಬಡವರ ಹೊಟ್ಟೆ ತುಂಬ್ತಾ? ಪ್ರಧಾನಿ ಮೋದಿಗೆ ಪ್ರಶ್ನೆಯಿಟ್ಟ ಎಚ್‌ಡಿಕೆ

ಅದ್ಧೂರಿಯಾಗಿ ಏರ್‌ಶೋ ಮಾಡಿದ್ರಲ್ಲಾ ಇದರಿಂದ ಬಡವರ ಹೊಟ್ಟೆ ತುಂಬ್ತಾ? ಎಂದು ಪ್ರಧಾನಿ ಮೋದಿ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಅದ್ಧೂರಿಯಾದ ಏರ್‌ಶೋ ಮಾಡಿದ್ದೀರಿ, ಇದರಿಂದ ಬಡತನ ನಿವಾರಣೆಯಾಯ್ತಾ? ಬಡವರಿಗೆ ಆರ್ಥಿಕ ಸಹಾಯ ಆಗದ ಏರ್‌ಶೋ ಏಕೆ ಬೇಕು ಎಂದಿದ್ದಾರೆ. ಏರ್‌ಶೋ ಆಗ್ತಾ ಇರೋದು ಇದೇ ಮೊದಲಲ್ಲ, ಇಷ್ಟು ವರ್ಷದಿಂದ ನಡೆಯುತ್ತಿರೋ ಏರ್‌ಶೋದಿಂದ ಬಡವರಿಗೇನು ಲಾಭ ಆಗಿದೆ, ಆಗಸದಲ್ಲಿ ಏರ್‌ಶೋ ಅಂದ ನೋಡಿ ಹೊಟ್ಟೆ ತುಂಬಿಸ್ಕೋಬೇಕಾ ಎಂದು …

Read More »

ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್‌ ಸಿಗ್ನಲ್ ನೀಡಿದ ರಾಜ್ಯ ಸರಕಾರ

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ (PDO Recruitment 2023 ) ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್‌ 1, ಗ್ರೇಡ್‌ 2 ಹುದ್ದೆಗಳನ್ನು 3 ರಿಂದ 4 ತಿಂಗಳೊಳಗೆ ಭರ್ತಿ ಮಾಡುವ ಎಲ್ಲಾ ಸಾಧ್ಯತೆ ಇದೆ. ಈ ಕುರಿತು ನೇಮಕಾತಿ ಶೀಘ್ರದಲ್ಲಿ ನಡೆಸಲಾಗುವುದು ಎಂದು ವಿಧಾನ ಪರಿಷತ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತ್‌ ನೇಮಕಾತಿಯ ಸಂಪೂರ್ಣ ವಿವರ : …

Read More »