Breaking News

ರಾಜಕೀಯ

ಕೆಡಿಪಿ ಸಭೆಯಲ್ಲಿ ಕುಡುಕ ಶಿಕ್ಷಕರ ಕುರಿತು ಚರ್ಚೆ

ಬೆಳಗಾವಿ : ಕೆಲ‌ ಶಾಲಾ ಶಿಕ್ಷಕರು ದಿನನಿತ್ಯ ಶಾಲೆಗೆ ಮಧ್ಯಪಾನ ಮಾಡಿ ಬರುತ್ತಿರುವ ಕುರಿತು ದೂರುಗಳು ಬಂದಿದ್ದು ಇಂತಹ ಶಿಕ್ಷಕರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಧ್ಯಪಾನ ಮಾಡಿ ಶಾಲೆಗೆ ಬರುವ ಶಿಕ್ಷಕರ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ …

Read More »

ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ …

Read More »

ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …

Read More »

ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ

ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್​ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಜಟಾಪಟಿ‌ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್​ಕುಮಾರ್ ಯರಗಲ್ ಡಿಹೆಚ್​ಓ ಕುರ್ಚಿಯಲ್ಲಿ …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪತ್ರ ಚಳವಳಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ, ಬಸವ ಜಯಮೃತ್ಯುಂಜಯ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ನೂರಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದರು. ಬಸವ ಜಯಮೃತ್ಯುಂಜಯ ಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ನೀಡಿ, ಈ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ …

Read More »

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.! ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಹೌದು. ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ …

Read More »

ಬೆಂಗಳೂರಿನಲ್ಲಿ ಮನೆ ಬಾಡಿಗೆ ಇಳಿಕೆ ಆರಂಭ, ಹೊರ ವಲಯದಲ್ಲಿ ಬೇಡಿಕೆ

ಬೆಂಗಳೂರು, ಜುಲೈ 11: ಕಳೆದ ಎರಡು ವರ್ಷಗಳಿಂದ ಬಾಡಿಗೆ (rent) ಬೇಡಿಕೆಯ ಹೆಚ್ಚಳದ ನಂತರ ಬೆಂಗಳೂರಿನ ಟೆಕ್ ವೃತ್ತಿಪರರು ಈಗ ಐಟಿ ಕೇಂದ್ರಗಳಿಂದ ನಗರದ ಹೊರವಲಯಕ್ಕೆ ಹೆಚ್ಚು ಕೈಗೆಟುಕುವ ವಸತಿಗಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ. ವೈಟ್‌ಫೀಲ್ಡ್‌ನಂತಹ ಐಟಿ ಉಪನಗರಗಳಲ್ಲಿನ ಬಾಡಿಗೆಗಳು ವರ್ಷದಿಂದ ವರ್ಷಕ್ಕೆ 15-20% ರಷ್ಟು ಕಡಿಮೆಯಾಗಿದೆ ಎಂದು ಬ್ರೋಕರ್‌ಗಳು ತಿಳಿಸಿದ್ದಾರೆ. ಇತ್ತೀಚೆಗೆ, ಐಟಿಯಲ್ಲಿ ಕೆಲಸ ಮಾಡುವ ದಂಪತಿಗಳು ಸರ್ಜಾಪುರದಿಂದ ಸುಮಾರು 5 ಕಿಮೀ ದೂರದ ಹೊರವಲಯಕ್ಕೆ ಹೋಗಲು ನಿರ್ಧರಿಸಿದರು. ಅವರು 38,000 …

Read More »

ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, : ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ …

Read More »

BPL ಕಾರ್ಡ್‌ ಇದ್ದ ಕುಟುಂಬದ ಮಕ್ಕಳಿಗೆ ಗುಡ್‌ ನ್ಯೂಸ್‌ ಕೊಟ್ಟ ರತನ್‌ ಟಾಟಾ

ಬಡ ಕುಟುಂಬದ ಮಕ್ಕಳನ್ನು ಪ್ರೋತ್ಸಾಹಿಸಲು TATA ಕ್ಯಾಪಿಟಲ್ ಲಿಮಿಟೆಡ್ ಗುಡ್‌ ನ್ಯೂಸ್‌ ನೀಡಿದೆ. ಅರ್ಹತೆ ಪಡೆಯುವ ಭಾರತೀಯ ವಿದ್ಯಾರ್ಥಿಗಳಿಗೆ, TATA ಕ್ಯಾಪಿಟಲ್ ಲಿಮಿಟೆಡ್ TATA ವಿದ್ಯಾರ್ಥಿವೇತನ 2024-25 ನೀಡುತ್ತಿದೆ . ಡಿಪ್ಲೊಮಾ ಕಾರ್ಯಕ್ರಮಗಳು ಮತ್ತು ಇತರ ಪದವಿ-ಆಧಾರಿತ ಕೋರ್ಸ್‌ಗಳಿಗೆ ದಾಖಲಾದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು, ಹಾಗೆಯೇ 11 ಮತ್ತು 12 ನೇ ತರಗತಿಯಲ್ಲಿರುವವರು TATA ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ 2024-25 ಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ …

Read More »