Breaking News

ರಾಜಕೀಯ

ರಾಜ್ಯ ಸರಕಾರದ ಭ್ರಷ್ಟಾಚಾರ ಭಾಷಣದಲ್ಲಿ ಸಾಬೀತು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ಯಾವ ಕೆಲಸವನ್ನೂ ಮಾಡದೆ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಜನರ ಆರೋಪ ರಾಜ್ಯಪಾಲರ ಭಾಷಣದಿಂದ ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.   ರಾಜ್ಯಪಾಲರ ಭಾಷಣ ಕುರಿತು ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಸರಕಾರವು ರಾಜ್ಯಪಾಲರ ಬಾಯಲ್ಲಿ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಡಿಸಿರುವ ಭಾಷಣ ಸುಳ್ಳಿನ ಕಂತೆ ಎಂದು ದೂರಿದ್ದಾರೆ. ರಾಜ್ಯವು ಇಂದು ಮುಖ್ಯವಾಗಿ ನಿರುದ್ಯೋಗ, ಬೆಲೆಯೇರಿಕೆ, ಭ್ರಷ್ಟಾಚಾರ, ಸೌಹಾರ್ದದ ಸಮಸ್ಯೆ, …

Read More »

ಡಿ.ಕೆ.ಶಿ ಮಗಳಿಗೆ ₹ 150 ಕೋಟಿ ಆಕಾಶದಿಂದ ಉದುರಿದೆಯೇ: ಸಿಬಿಐ ಪ್ರಶ್ನೆ

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ಇದೇ 24ರವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ’ಗಳ ವಿಚಾರಣೆ ನಡೆಸುವ ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು.   ವಿಚಾರಣೆ ವೇಳೆ ಶಿವಕುಮಾರ್ ಪರ ಹಿರಿಯ ವಕೀಲ ಸಿ.ಎಚ್.ಜಾಧವ್‌, ‘ಅರ್ಜಿದಾರರು ಸಾರ್ವಜನಿಕ ಸೇವಕರಿದ್ದು …

Read More »

3 ವಿಮಾನ ನಿಲ್ದಾಣಗಳಿಗೆ ನಾಮಕರಣ ಏಕಕಾಲಕ್ಕೆ ನಿರ್ಧಾರ: ಸಿಎಂ

ಹುಬ್ಬಳ್ಳಿ: ‘ಶಿವಮೊಗ್ಗ, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವ ಜನರ ಬೇಡಿಕೆಯಿತ್ತು. ಯಡಿಯೂರಪ್ಪ ನವರೇ ಮತ್ತೆ ಬೇಡ ಎಂದಿದ್ದಾರೆ. ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. ‘ಕಾಂಗ್ರೆಸ್‌ನದ್ದು ಟಿಪ್ಪು ಸಂಸ್ಕೃತಿ, ಬಿಜೆಪಿಯದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಕೃತಿ’ ಎಂಬ …

Read More »

ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ, 50 ಸಾವಿರ ರೂ. ಮುಚ್ಚಳಿಕೆ

ಬೆಳಗಾವಿ: ಮರಾಠಿಗರ ಓಲೈಕೆ ರಾಜಕಾರಣಕ್ಕೆ ಬಿದ್ದ ರಾಜ್ಯ ಸರಕಾರ ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗೆ ಎಂಇಎಸ್ ಮುಖಂಡ ದೀಪಕ ದಳವಿ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರಾದ ಸಂಪತ್ ಕುಮಾರ್ ದೇಸಾಯಿ ಹಾಗೂ ಅನಿಲ ದಡ್ಡಿಮನಿ ಅವರ ವಿರುದ್ಧ  ಪೊಲೀಸರು ರೌಡಿಶೀಟ್ ತೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕನ್ನಡಿಗರಿಗೆ …

Read More »

ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉತ್ತರಪ್ರದೇಶ ಮೂಲದ ದೇವೆಂದ್ರ ದುಬೆ ಹಲವು ವರ್ಷಗಳಿಂದ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಆರತಿ ಮಾಳವಿಯ ಜೊತೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ದುಬೆ ಮೃತದೇಹ ಬಿಡಿಎ ಕಚೇರಿ ಬಳಿಯ ರೈಲ್ವೆ …

Read More »

ಸಚಿವ ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.   ಪ್ರಕರಣಕ್ಕೆ ಸಂಬಂಧಿಸಿ ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸುಧಾಕರ್ ಪರ …

Read More »

ಚುನಾವಣಾ ಪೂರ್ವ ತಯಾರಿ: ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ನೇತೃತ್ವದ ಮೂರು ತಂಡಗಳು ಭೇಟಿ

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023 ರ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಭಾರತ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ 5 ಕ್ಕೂ ಹೆಚ್ಚು ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.   ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್‌ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಇವಿಎಮ್‌ ಮತ್ತು ವಿವಿಪ್ಯಾಟ್‌ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮದುರ್ಗ ತಾಲೂಕಿನ ಪಂಚಗಾವ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಪಂಚಾಗಾವ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ …

Read More »

K,S,R,T,C ನೇಮಕಾತಿ : ಅಭ್ಯರ್ಥಿ ಒಳ ಉಡುಪಿನಲ್ಲಿ 5 ಕೆ.ಜಿ ಕಬ್ಬಿಣದ ಕಲ್ಲು!

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಕೆಕೆಆರ್‌ಟಿಸಿ) ಚಾಲಕ ಕಂ ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯಲ್ಲಿ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ ಕಬ್ಬಿಣದ ಕಲ್ಲು, ಕಬ್ಬಿಣದ ತುಂಡುಗಳು, ಸೈಕಲ್‌ ಚೈನ್‌ ಇರಿಸಿಕೊಂಡ ಬಂದ ಅಭ್ಯರ್ಥಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ.   ಕೆಕೆಆರ್‌ಟಿಸಿಯು 1,619 ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸುಮಾರು 39 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿ ಸಮೀಪ ಡಿಸೆಂಬರ್‌ನಿಂದ ದೇಹದಾರ್ಢ್ಯ ಪರೀಕ್ಷೆ …

Read More »

ಮಾಜಿ ಸಚಿವ ಟಿ.ಜಾನ್ ನಿಧನ

ಬೆಂಗಳೂರು: ಮಾಜಿ ಸಚಿವ ಟಿ.ಜಾನ್(92) ಅವರು ಇಂದಿರಾನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಜಾನ್‌ ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.   ಕೇರಳದಲ್ಲಿ ಜನಿಸಿದ್ದ ಇವರು, ಮಡಿಕೇರಿಯಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ಟಿ.ಜಾನ್ ಶಿಕ್ಷಣ ಸಂಸ್ಥೆ ಕಟ್ಟಿದ ಬಳಿಕ ಬೆಂಗಳೂರಿನಲ್ಲೇ ನೆಲೆ ಊರಿದರು. ಕಾಂಗ್ರೆಸ್‌ನಿಂದ ವಿಧಾನ ಪರಿಷತ್ತಿನ ಸದಸ್ಯರಾಗಿ ಎಸ್.ಎಂ.ಕೃಷ್ಣ ನೇತೃತ್ವದ ಸಂಪುಟದಲ್ಲಿ ಮೂಲಸೌಕರ್ಯ ಮತ್ತು ವಿಮಾನಯಾನ …

Read More »