Home / ರಾಜಕೀಯ (page 711)

ರಾಜಕೀಯ

ಕಾಂತಾರದ ಬುಲ್ಲಾಗೆ ಶಾಕ್​! ‘ಶಬಾಷ್​ ಬಡ್ಡಿ ಮಗನೇ’ ನಿರ್ಮಾಪಕ ಅಂದರ್​.

ಬೆಂಗಳೂರು: ಮೊದಲ ಬಾರಿಗೆ ನಾಯಕ ನಟನಾಗಿ ನಟಿಸುತ್ತಿರುವ ಕಾಂತಾರ ಖ್ಯಾತಿಯ ಪ್ರಮೋದ್ ಶೆಟ್ಟಿಗೆ ದೊಡ್ಡ ಶಾಕ್ ಆಗಿದ್ದು ‘ಶಬಾಷ್​ ಬಡಡಿ ಮಗನೇ’ ಚಿತ್ರದ ನಿರ್ಮಾಪಕ ಅರೆಸ್ಟ್​ ಆಗಿದ್ದಾರೆ. ನಿರ್ಮಾಪಕ ಅರೆಸ್ಟ್ ಆಗುತ್ತಿದ್ದಂತೆಯೇ ಶಬಾಷ್ ಬಡ್ಡಿ ಮಗನೇ ಸಿನಿಮಾ ನಿಂತು ಹೋಗಿದೆ. ಕಳೆದ ವರ್ಷ ಅಕ್ಟೋಬರ್ 2022 ರ ದಸರಾ ವೇಳೆಗೆ ಮುಹೂರ್ತ ಇಟ್ಟು ಶುರು ಮಾಡಿದ್ದ ಶಬಾಷ್ ಬಡ್ಡಿ ಮಗನೇ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ಅಭಿನಸುತ್ತಿರುವ ಮೊದಲ ಸಿನಿಮಾ …

Read More »

ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಸೈಲೆಂಟ್​ ಆದ ಶಾಸಕ ಯತ್ನಾಳ್​​: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ

ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ‌ ನನಗೆ ಪ್ರಶ್ನೆ ಕೇಳಬೇಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಯತ್ನಾಳ್​ ಸೈಲೆಂಟ್ ಆಗಿದ್ದಾರೆ.​ ಯಡಿಯೂರಪ್ಪ ಬಗ್ಗೆ ನನಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪ ಹಿರಿಯರಿದ್ದಾರೆ ಬೈಯ್ಯೋದು ಬೇಡ ಅಂದಿದ್ದಾರೆ. ಇನ್ಮುಂದೆ ಬಿಎಸ್​ವೈ …

Read More »

ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಲಂಚ ಹಾವಳಿಗೆ ಬ್ರೇಕ್,ಕಾವೇರಿ 2.0: ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಪಾಸ್​ಪೋರ್ಟ್​ ಮಾದರಿ ಸೇವೆ

ಸಬ್​ ರಿಜಿಸ್ಟ್ರಾರ್​ ಕಚೇರಿಗಳ ಸೇವೆಗೆ ವೇಗ, ಲಂಚದ ಆರೋಪದಿಂದ ಮುಕ್ತಿ, ದಲ್ಲಾಳಿಗಳ ಹಾವಳಿಗೆ ಬ್ರೇಕ್​ ಹಾಕಲು ಕಾವೇರಿ 2.0 ತಂತ್ರಾಂಶ ಬಳಕೆಗೆ ಬರಲಿದೆ. ಪಾಸ್​ಪೋರ್ಟ್​ ಮಾದರಿ ಸೇವೆ ಒದಗಿಸಲು ಉಪ ನೋಂದಣಿ ಕಚೇರಿಗಳಲ್ಲಿ ಹೊಸ ಸ್ಟ್​ಾವೇರ್​ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ 260 ಸಬ್​ ರಿಜಿಸ್ಟ್ರಾರ್​ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ದಿನಕ್ಕೆ ಅಂದಾಜು 10 ಸಾವಿರ ದಾಖಲೆ ಪತ್ರಗಳ ನೋಂದಣಿ, ದೃಢೀಕರಣ ಪತ್ರಗಳ ಸೇವೆ ಒದಗಿಸುತ್ತಿವೆ. ಸರ್ಕಾರದ ಬೊಕ್ಕಸ …

Read More »

ವಿಜಯನಗರ ವಸಂತ ವೈಭವ ಮೆರವಣಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

    ವಿಜಯನಗರ : ಹಂಪಿ ಉತ್ಸವದ ಮೆರಗನ್ನ ವಸಂತ ವೈಭವ ಮೆರವಣಿಗೆ ಇನ್ನಷ್ಟು ಹೆಚ್ಚಿಸಿದೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.   ಇಂದು ಹಂಪಿ ಉತ್ಸವದ ಅಂಗವಾಗಿ ಹೊಸಪೇಟೆಯ ವಡಕರಾಯನ ದೇವಸ್ಥಾನದಿಂದ ಪ್ರಾರಂಭವಾದ ವಸಂತ ವೈಭವ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ದೇಶ ಮತ್ತು ರಾಜ್ಯದ ಜನತೆಗೆ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ …

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

*ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ …

Read More »

ಸಂವಿಧಾನದ ಆಶಯದಂತೆ ಸಹಬಾಳ್ವೆಯಿಂದ ಬದುಕುವಂತಾಗಲಿ: ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟಕವಿ ಕುವೆಂಪು ಅವರು ಕರ್ನಾಟಕವನ್ನು ವ್ಯಾಖ್ಯಾನಿಸಿದ್ದಾರೆ. ಇಂತಹ ತೋಟದಲ್ಲಿ ನಾವೆಲ್ಲಾ ಸಾಮರಸ್ಯದಿಂದ ಬೆಳೆದುನಿಂತ ಫಲಪುಷ್ಪಗಳು. ಈ ನೆಲದ ಮಣ್ಣಿನ ಗುಣ, ಗಣತಂತ್ರ ವ್ಯವಸ್ಥೆಯ ಮತ್ತು ಸಂವಿಧಾನದ ಮೂಲ ಆಶಯಗಳನ್ನಿಟ್ಟುಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು ನಗರದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ …

Read More »

ಬೆಳಗಾವಿ : ಧ್ವಜಾರೋಹಣದ ವೇಳೆ ಎಡವಟ್ಟು ಮಾಡಿಕೊಂಡ ಚಿಕ್ಕೋಡಿ ಉಪ ವಿಭಾಗಾಧಿಕಾರಿ.!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಧ್ವಜಾರೋಹಣ ವೇಳೆ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.   ಧ್ವಜಾರೋಹಣ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಲ್ಲದೆ, ತರಾತುರಿಯಲ್ಲಿ ಬೂಟು ಕಾಲಿನಲ್ಲೇ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲು ಮುಂದಾಗಿದ್ದಾರೆ.   ಸಿಬ್ಬಂದಿಗಳು ಹೇಳಿದ ಬಳಿಕ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಶೂ ಬಿಚ್ಚಿದ್ದಾರೆ. ಶೂವನ್ನ ಸಿಬ್ಬಂದಿಗಳು ಕೈಯಿಂದ ತೆಗೆದು ಬೇರೆಡೆಗೆ ಇಟ್ಟಿದ್ದಾರೆ.   ಮಾಧವ …

Read More »

ವಿದ್ಯಾರ್ಥಿ ನಿಲಯಗಳನ್ನು ಮರು ನಿರ್ಮಾಣಕ್ಕೆ ಅನುದಾನ : ಮುಖ್ಯ ಮಂತ್ರಿಗಳ ಭರವಸೆ

  ಧಾರವಾಡ : ಧಾರವಾಡದ ಮುರುಘಾ ಮಠದ ಅಭಿವೃದ್ಧಿಗಾಗಿ ಈ ವರ್ಷ ಈಗಾಗಲೇ 3 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲ್ಲಿನ ವಿದ್ಯಾರ್ಥಿ ನಿಲಯಗಳನ್ನು ಮರು ನಿರ್ಮಾಣ ಮಾಡಬೇಕಿದೆ. ಅದಕ್ಕೂ ಅಗತ್ಯ ಸಹಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಧಾರವಾಡದ ಮುರುಘಾ ಮಠದಲ್ಲಿ ಇಂದು ಶ್ರೀ ಮೃತ್ಯುಂಜಯ- ಮಹಾಂತ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು. ಪಶುಪತಿಹಾಳ ಮಠಕ್ಕೆ ಒಂದು ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನ ಮಾಡಲಾಗಿದೆ ಎಂದರು. ಮಠ …

Read More »

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …

Read More »